ರಾಜ್ಯದಲ್ಲಿ ಇಂದಿನಿಂದ ಮತ್ತೆ 4 ದಿನ ಭಾರೀ ಮಳೆ: 10 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಉಡುಪಿ: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಘೋಷಿಸಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದ್ದು, ಈ 10 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್‌ ಮುನ್ಸೂಚನೆ ನೀಡಿದೆ. ಬೆಂಗಳೂರಲ್ಲಿ ಮಳೆ ಆರ್ಭಟ ಕಡಿಮೆಯಾಗಲಿದ್ದು, ಪ್ರವಾಹ ಪರಿಸ್ಥಿತಿ ಸುಧಾರಿಸಲಿದೆ. ಜೊತೆಗೆ ಮಲೆನಾಡು ಭಾಗದಲ್ಲಿ ಮತ್ತೆರಡು ದಿನ ಮಳೆ ಸುರಿಯುವ ಸಾಧ್ಯತೆ ಇದ್ದು, ಉತ್ತರ ಒಳನಾಡಲ್ಲಿ ಮಳೆಯಾಗಲಿದೆ. ಕರ್ನಾಟಕ […]

ಹೈಕೋರ್ಟ್ ನ್ಯಾಯಾಧೀಶ ನ್ಯಾ.ವೀರಪ್ಪರವರಿಂದ ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತ ಭೇಟಿ: ಆಸ್ಪತ್ರೆಯ ಮೂಲ ಸೌಕರ್ಯಗಳ ಪರಿಶೀಲನೆ

ಉಡುಪಿ: ಶನಿವಾರದಂದು ಕರ್ನಾಟಕ ಹೈಕೋರ್ಟ್‍ನ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾ.ವೀರಪ್ಪರವರು ಉಡುಪಿ ಜಿಲ್ಲಾಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ, ಆಸ್ಪತ್ರೆಯಲ್ಲಿ ರೋಗಿಗಳನ್ನು ವಿಚಾರಿಸಿ, ಆಸ್ಪತ್ರೆಯ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವೈದ್ಯರು ಮತ್ತು ಶುಶ್ರೂಷಕ ಸಿಬ್ಬಂದಿಗಳು ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದವರಿಗೆ ಆತ್ಮವಿಶ್ವಾಸ ಮೂಡಿಸುವುದರ ಮೂಲಕ ಅವರು ಶೀಘ್ರದಲ್ಲಿ ಚೇತರಿಸಿಕೊಳ್ಳುವಂತೆ ಪ್ರೇರೆಪಿಸಬೇಕು. ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾದವರಿಗೆ ಉತ್ತಮ ಚಿಕಿತ್ಸೆ ನೀಡುವುದು ಮಾತ್ರವಲ್ಲದೇ, ವಾರದಲ್ಲಿ ಒಂದು ದಿನ ಆಸ್ಪತ್ರೆಯ ಎಲ್ಲಾ […]

ಹಾಡು ನೀ ಹಾಡು: ಸಿಂಗಿಂಗ್ ರಿಯಾಲಿಟಿ ಶೋ ಆಡಿಷನ್ ಗೆ ಹರಿದು ಬಂತು ಪುಟಾಣಿಗಳ ದಂಡು

ಉಡುಪಿ: ಸಹಾಯ ಹಸ್ತ ಲಯನ್ಸ್ ಕ್ಲಬ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಅವಿಭಜಿತ ದ.ಕ ಜಿಲ್ಲೆಯ ಗಾನಕೋಗಿಲೆಗಳ ಪ್ರತಿಭೆ ಅನಾವರಣಗೊಳಿಸುವ ‘ಹಾಡು ನೀ ಹಾಡು’ ಸಂಗೀತ ರಿಯಾಲಿಟಿ ಶೋ ನ ಆಡಿಷನ್ ಉಡುಪಿಯ ಎಂಜಿಎಂ ಕಾಲೇಜಿನಲ್ಲಿ ಹಾಗೂ ಕುಂದಾಪುರದ ಆರ್.ಎನ್ ಶೆಟ್ಟಿ ಪಿಯು ಕಾಲೇಜಿನಲ್ಲಿ ನಡೆಯುತ್ತಿದ್ದು, ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಗ್ರಾಮೀಣ ಪ್ರದೇಶದ ಮಕ್ಕಳು ಆಡಿಷನ್ ನಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುತ್ತಿದ್ದಾರೆ. ಸೆ. 18 ರಂದು ಬೆಳಿಗ್ಗೆ 8 ಗಂಟೆಗೆ ಮಂಗಳೂರಿನ ಕೊಡಿಯಾಲ್ ಬೈಲಿನಲ್ಲಿರುವ ಶಾರದಾ […]

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ: 2024-25 ರ ಅಂತ್ಯದ ವೇಳೆಗೆ 68 ಲಕ್ಷ ಉದ್ಯೋಗ ಸೃಜನೆ

ನವದೆಹಲಿ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯು ಶನಿವಾರದಂದು ತನ್ನ ಎರಡನೇ ವಾರ್ಷಿಕೋತ್ಸವವನ್ನು ಪೂರ್ಣಗೊಳಿಸಿದೆ. 2024-25ರ ಅಂತ್ಯದ ವೇಳೆಗೆ ಈ ಯೋಜನೆಯು 68 ಲಕ್ಷ ಉದ್ಯೋಗವನ್ನು ಸೃಷ್ಟಿಸಲಿದೆ ಎಂದು ಅಂದಾಜಿಸಲಾಗಿದೆ. ಮೀನುಗಾರಿಕೆ ವಲಯವು 2019-20 ರಿಂದ 2021-22 ರವರೆಗೆ 14.3 ಶೇಕಡಾದಷ್ಟು ಪ್ರಭಾವಶಾಲಿ ಬೆಳವಣಿಗೆಯನ್ನು ತೋರಿಸಿದೆ. 2021-22ರಲ್ಲಿ ಮೀನಿನ ಉತ್ಪಾದನೆಯು ಸಾರ್ವಕಾಲಿಕ ಗರಿಷ್ಠ 161.87 ಲಕ್ಷ ಟನ್‌ಗಳನ್ನು ತಲುಪಿದೆ. ಮುಖ್ಯವಾಗಿ ಸಿಗಡಿ ರಫ್ತು ಪ್ರಾಬಲ್ಯ ಹೊಂದಿರುವ ಈ ವಲಯವು 57 ಸಾವಿರದ 587 ಕೋಟಿ ರೂಪಾಯಿಗಳ ಮೊತ್ತದ […]

ಭಾರತಕ್ಕೆ ಮರಳಲಿವೆ 1950 ರಲ್ಲಿ ಕಣ್ಮರೆಯಾದ ಚೀತಾಗಳು: ಸೆ.17 ರಂದು ಯೋಜನೆ ಬಿಡುಗಡೆ ಮಾಡಲಿರುವ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಜನ್ಮದಿನವಾದ ಸೆ.17 ರಂದು ‘ಚೀತಾ ಮರು ಪರಿಚಯ’ ಯೋಜನೆಗೆ ಚಾಲನೆ ನೀಡಲಿದ್ದಾರೆ. ಒಡಿಶಾ ರಾಜಧಾನಿ ಭುವನೇಶ್ವರದಲ್ಲಿ ನಡೆಯುತ್ತಿರುವ ಮೃಗಾಲಯ ನಿರ್ದೇಶಕರ ರಾಷ್ಟ್ರೀಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಈ ವಿಷಯವನ್ನು ಬಹಿರಂಗಪಡಿಸಲಾಗಿದೆ. ಈ ಉದ್ದೇಶಕ್ಕಾಗಿ ನಮೀಬಿಯಾದಿಂದ ಚಿರತೆಯನ್ನು ತರಲಾಗುವುದು ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದರ್ ಯಾದವ್ ಹೇಳಿದ್ದಾರೆ. 1950 ರ ದಶಕದಲ್ಲಿ ಭಾರತದಿಂದ ಕಣ್ಮರೆಯಾದ ನಂತರ ಚಿರತೆಯನ್ನು ಮರು-ಪರಿಚಯಿಸುತ್ತಿರುವುದು ಇದೇ ಮೊದಲು ಎಂದು […]