ಕೊಡವೂರು: ಲಕ್ಷ್ಮೀನಗರದಲ್ಲಿ ಕೃಷಿ ಸ್ವ ಉದ್ಯೋಗ ಮಾಹಿತಿ ಕಾರ್ಯಾಗಾರ

ಕೊಡವೂರು:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್  ಉಡುಪಿ  ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಆತ್ಮ ಅನುಷ್ಠಾನ ಸಮಿತಿ ಇವರ ಸಂಯುಕ್ತ ಆಶ್ರಯದೊಂದಿಗೆ ಅಂಬಾಗಿಲು ವಲಯದ ಶಿವಾಜಿ ಪಾರ್ಕ್ ಗರ್ಡೆ ಲಕ್ಷ್ಮೀನಗರದಲ್ಲಿ ಕೃಷಿ ಸ್ವ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ  ಹಿರಿಯ ನಿರ್ದೇಶಕರ  ಶಿವರಾಯ ಪ್ರಭು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿ ಪಾರ್ಕ್ ನಿರ್ವಹಣ ಸಮಿತಿ ಅಧ್ಯಕ್ಷ ಮೋಹನ್ ಸುವರ್ಣ […]

ಭಂಡಾರ್ಕಾರ್ಸ್ ಕಾಲೇಜು: ಎನ್.ಸಿ.ಸಿ ಆರ್ಮಿ ಕೆಡೆಟ್ ಗಳು ಥಲ್ ಸೈನಿಕ್ ಶಿಬಿರದಲ್ಲಿ ಭಾಗಿ

ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನ ಎನ್.ಸಿ.ಸಿ ಆರ್ಮಿ ಕೆಡೆಟ್ ಗಳಾದ ಎಸ್.ಯು.ಒ.ರಂಜಿತ್ ಹಾಗೂ ಜೆ.ಯು.ಒ ಆನ್ಸ್ಟನ್ ಇಮ್ಯಾನ್ಯುಯಲ್ ರೆಬೆಲ್ಲೊ  ಸೆಪ್ಟೆಂಬರ್ 14 ರಿಂದ ಸೆಪ್ಟೆಂಬರ್ 25 ರವರೆಗೆ ದೆಹಲಿಯಲ್ಲಿ ನಡೆಯಲಿರುವ “ಥಲ್ ಸೈನಿಕ್ ಶಿಬಿರ”ದಲ್ಲಿ ಭಾಗವಹಿಸುತ್ತಿದ್ದಾರೆ. ಇವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲ ಡಾ.ಎನ್.ಪಿ.ನಾರಾಯಣ ಶೆಟ್ಟಿ, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ತಿಳಿಸಿದ್ದಾರೆ. ಇವರಿಗೆ ಕಾಲೇಜಿನ ಎನ್ ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಅಂಜನ್ ಕುಮಾರ್ ಎಂ.ಎಲ್ ತರಬೇತಿ ನೀಡಿದ್ದರು.    

ಅಂಬಲಪಾಡಿ: ಹಿರಿಯ ನಾಗರಿಕರನ್ನು ರಂಜಿಸಿದ ಜಾನಪದ ವೈಭವ ಕಾರ್ಯಕ್ರಮ 

ಉಡುಪಿ : ತಲ್ಲೂರು ಫ್ಯಾಮಿಲಿ ಟ್ರಸ್ಟ್, ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಉಡುಪಿ ಹಿರಿಯ ನಾಗರಿಕರ ಸಂಸ್ಥೆಯ ಸಹಕಾರದಲ್ಲಿ ಅಂಬಲಪಾಡಿ ದೇವಳದ ಭವಾನಿ ಮಂಟಪದಲ್ಲಿ ಶನಿವಾರ ನಡೆದ `ಜಾನಪದ ವೈಭವ ‘ ಕಾರ್ಯಕ್ರಮ ಹಿರಿಯ ನಾಗರಿಕರನ್ನು ರಂಜಿಸಿತು. ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಡುಪಿಯ `ಕಲಾಮಯಂ ‘ ಸಾಂಸ್ಕೃತಿಕ ತಂಡ ವೈವಿಧ್ಯಮಯ ಜಾನಪದ ನೃತ್ಯಗಳನ್ನು ಪ್ರದರ್ಶಿಸುವ ಮೂಲಕ ಜಾನಪದ ಲೋಕವನ್ನೇ […]

ನ್ಯಾಯಾಲಯದ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಇತ್ಯರ್ಥಪಡಿಸಿಕೊಳ್ಳಿ: ನ್ಯಾ. ಬಿ. ಶಾಂತವೀರ ಶಿವಪ್ಪ

  ಉಡುಪಿ:   ನವಂಬರ್ 12 ರಂದು ಮೆಗಾ ಲೋಕ ಅದಾಲತ್ ಜನತಾ ನ್ಯಾಯಲಯವನ್ನು ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿದ್ದು ಬಾಕಿ ಇರುವ ಪ್ರಕರಣ, ಚೆಕ್ ಅಮಾನ್ಯ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ,, ನ್ಯಾಯಾಧೀಕರಣದ ಪ್ರಕರಣ, ಕಾರ್ಮಿಕರ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕಕ್ಕೆ ಸಂಬಂಧಿಸಿದ ಪ್ರಕರಣ, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ, ಸಾರ್ವಜನಿಕರ ಉಪಯುಕ್ತತೆ ಸೇವೆಗಳಿಗೆನ್ ಸಂಬಂಧಿಸಿದ ಪ್ರಕರಣ, ರಾಜಿಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣ ಹಾಗೂ ವಿಚ್ಛೇದನ […]