ಹೆಬ್ರಿ: ನದಿಯಲ್ಲಿ ಮುಳುಗಿ ಯುವಕ ಮೃತ್ಯು
ಹೆಬ್ರಿ: ನದಿಯಲ್ಲಿ ಸ್ನಾನಕ್ಕೆ ಇಳಿದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹೆಬ್ರಿ ಮುದ್ರಾಡಿ ಗ್ರಾಮದ ಕಬ್ಬಿನಾಲೆ ಎಂಬಲ್ಲಿ ಇಂದು ಸಂಜೆ ನಡೆದಿದೆ. ಮುನಿಯಾಲು ನಿವಾಸಿ 25ವರ್ಷದ ಪವನ್ ಮೃತದುರ್ದೈವಿ. ಈತ ಇಂದು ಸಂಜೆ ಸ್ಥಳೀಯರ ಜೊತೆಗೆ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದನು. ಈ ವೇಳೆ ನೀರಿನ ಸೆಳೆತಕ್ಕೆ ಪವನ್ ಕೊಚ್ಚಿಹೋಗಿದ್ದು, ಸುಮಾರು 200 ಮೀ ದೂರದಲ್ಲಿ ಆತನ ಶವ ಪತ್ತೆಯಾಗಿದೆ.
ಖ್ಯಾತ ಕಿರುತೆರೆ ನಟ ಮಂಡ್ಯ ರವಿ ಇನ್ನಿಲ್ಲ
ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿಯಾಗಿ ಪ್ರೇಕ್ಷಕರ ಹೃದಯ ಗೆದ್ದಿದ್ದ ನಟ ಮಂಡ್ಯ ರವಿ ಇಂದು ಸಂಜೆ ನಿಧನರಾಗಿದ್ದಾರೆ. ನಟ ರವಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರಿಗೆ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ. ಮಗಳು ಜಾನಕಿ ಧಾರಾವಾಹಿ ಮೂಲಕ ಪ್ರಸಿದ್ಧಿ ಪಡೆದಿದ್ದ ಅವರು ಧಾರಾವಾಹಿಯಲ್ಲಿ ರವಿ ಚಂದುಭಾರ್ಗಿ […]
ಇಂಜಿನಿಯರ್ಸ್ ದಿನಾಚರಣೆಗೆ ನಾಡಿನ ಗಣ್ಯರಿಂದ ಶುಭಹಾರೈಕೆ..
ಶಾಲಾ ಬಸ್‌ನಲ್ಲೆ ಬಾಕಿಯಾದ 4 ವರ್ಷದ ಬಾಲಕಿ ಸಾವು: ಪಾರ್ಥಿವ ಶರೀರ ಕೊಚ್ಚಿಗೆ ಆಗಮನ
ಕೊಚ್ಚಿ: ಶಿಶುವಿಹಾರದ ವಿದ್ಯಾರ್ಥಿನಿಯೊಬ್ಬಳು ತನ್ನ ಜನ್ಮದಿನದಂದು ಶಾಲಾ ಬಸ್‌ನಲ್ಲಿ ಶವವಾಗಿ ಪತ್ತೆಯಾಗಿರುವ ಹೃದಯ ವಿದ್ರಾವಕ ಘಟನೆ ಕತಾರ್‌ನಿಂದ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಮಿನ್ಸಾ ಮರಿಯಮ್ ಜಾಕೋಬ್ ರಾಜಧಾನಿ ದೋಹಾದ ಹೊರವಲಯದಲ್ಲಿರುವ ಅಲ್ ವಕ್ರಾ ಪಟ್ಟಣದ ಸ್ಪ್ರಿಂಗ್‌ಫೀಲ್ಡ್ ಶಿಶುವಿಹಾರದ ವಿದ್ಯಾರ್ಥಿಯಾಗಿದ್ದಳು. ತೆರೆದ ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಶಾಲಾ ಬಸ್ಸಿನೊಳಗೆ ಮಿನ್ಸಾ ನಿದ್ದೆಗೆ ಜಾರಿದ್ದಳು. ಸುಮಾರು ನಾಲ್ಕು ಗಂಟೆಗಳ ನಂತರ ಬಸ್ಸಿಗೆ ವಾಪಾಸಾದಾಗ ಬಸ್ ಚಾಲಕ ಮತ್ತು ವಾಹನ ಪರಿಚಾರಕರು ಬಾಲಕಿಯನ್ನು ಗಮನಿಸಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆಕೆಯನ್ನು […]
ಕೊರಗ ಜನಾಂಗದವರ ವೈದ್ಯಕೀಯ ವೆಚ್ಚ ಮರುಪಾವತಿ ಯೋಜನೆ ಮುಂದುವರಿಸಲು ಮುಖ್ಯಮಂತ್ರಿ ಸೂಚನೆ: 3 ಜಿಲ್ಲೆಗಳ ಶಾಸಕರ ನಿಯೋಗದ ಮನವಿಗೆ ಬೊಮ್ಮಾಯಿ ಸ್ಪಂದನೆ
ಉಡುಪಿ: ಆರ್ಥಿಕವಾಗಿ ತೀರಾ ಹಿಂದುಳಿದ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರು ತೀವ್ರ ತರಹದ ಖಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಸರ್ಕಾರದ ವತಿಯಿಂದ ಮರುಪಾವತಿಸುವಂತೆ ಶಾಸಕ ಕೆ ರಘುಪತಿ ಭಟ್ ನೇತೃತ್ವದಲ್ಲಿ 3 ಜಿಲ್ಲೆಗಳ ಶಾಸಕರ ನಿಯೋಗವು ಸೆಪ್ಟಂಬರ್ 14 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿನ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು […]