ಮೋದಿ ಬ್ರಿಗೇಡ್ ವತಿಯಿಂದ ಮನೆ ಮನೆಗೆ ಮೋದಿ ಯೋಜನೆ ಕಾರ್ಯಕ್ರಮಕ್ಕೆ ಚಾಲನೆ

ಉಡುಪಿ ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಹುಟ್ಟುಹಬ್ಬದ ಪ್ರಯುಕ್ತ ಉಡುಪಿ ಜಿಲ್ಲಾ ಮೋದಿ ಬ್ರಿಗೇಡ್ ವತಿಯಿಂದ ಜಿಲ್ಲೆಯ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸಿ, ‘ಮನೆ ಮನೆಗೆ ಮೋದಿ ಯೋಜನೆ ‘ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ ಕಾರ್ಯಕ್ರಮಕ್ಕೆ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ.ಸುಜಿತ್ ಮತ್ತು ಡಾ. ಸುಭಾಸ್ ಕಿಣಿ ಚಾಲನೆ ನೀಡಿದರು. ಮೋದಿ ಬ್ರಿಗೇಡ್ ಜಿಲ್ಲಾಧ್ಯಕ್ಷ ಸುಭಾಷಿತ್ ಕುಮಾರ್, ಉಪಾಧ್ಯಕ್ಷ ಚಿನ್ಮಯ ಮೂರ್ತಿ ಮತ್ತು ಚಂದ್ರಕಾಂತ್ ದೇವಾಡಿಗ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ […]

ಗೆಜ್ಜೆಗಿರಿ ಕ್ಷೇತ್ರದ ನೂತನ ಯಕ್ಷಗಾನ ಮೇಳಕ್ಕೆ ಪ್ರತಿಭಾ ಕುಳಾಯಿ ಅವರಿಂದ ಜನರೇಟರ್ ಕೊಡುಗೆ

ಮಂಗಳೂರು:  ಬಿಲ್ಲವ ನಾಯಕಿ, ಮಾಜಿ ಕಾರ್ಪೊರೇಟರ್ ಆಗಿ ರಾಜಕೀಯ ಕ್ಷೇತ್ರದಲ್ಲಿ ತನ್ನದೇ ವಿಶೇಷವಾದ ಛಾಪನ್ನು ಮೂಡಿಸಿ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಮಿನುಗುತ್ತಿರುವ ನಾಯಕಿ, ಅದೆಷ್ಟೋ ಬಡ ವಿದ್ಯಾರ್ಥಿಗಳ ಬಾಳಿಗೆ ದಾರಿದೀಪವಾಗಿ ಕೊಡುಗೈ ದಾನಿಗಳಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿರುವ ಶ್ರೀಮತಿ ಪ್ರತಿಭಾ ಕುಳಾಯಿ ಅವರು ಸೋಣ ಸಂಕ್ರಮಣದ ವಿಶೇಷ ದಿನದಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಭೇಟಿ ನೀಡಿ ಕ್ಷೇತ್ರದ ಶಕ್ತಿ ಸಾನಿಧ್ಯಗಳ ದರ್ಶನ ಪಡೆದು ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇದರ […]

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿ ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ: ಶ್ರೀಕೃಷ್ಣಮಠದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಪರವಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಹಾಗೂ ಮಾಜಿ ಅಡ್ವೊಕೇಟ್ ಜನರಲ್ ಅಶೋಕ ಹಾರನಹಳ್ಳಿಯವರನ್ನು ಶಾಲು ಹೊದಿಸಿ ಹಾರದೊಂದಿಗೆ ಪೇಟ ತೊಡಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾದ ಗೌರವ ಅಧ್ಯಕ್ಷ ಕೃಷ್ಣಾನಂದ ಚಾತ್ರ, ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಭಟ್, ಮಹಾಸಭಾ ಕಾರ್ಯಕಾರಿ ಸಮಿತಿ ಸದಸ್ಯರಾದ ಉಮೇಶ ಶಾಸ್ತ್ರಿ, ಪೊಳಲಿ ಗಿರಿಪ್ರಕಾಶ ತಂತ್ರಿ, ಜಯಸಿಂಹ ಶತ್ರುಘ್ನ ಮತ್ತು […]

ಕರಾಟೆ ಪಂದ್ಯಾಟ : ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಮಲ್ಲೇಶ್ವರಂ, ಬೆಂಗಳೂರು ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಉಡುಪಿ ಇವರ ಜಂಟಿ ಆಶ್ರಯದಲ್ಲಿ ಜರುಗಿದ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪ್ರಜ್ವಲ್ ರಾವ್ ಪ್ರಥಮ ಸ್ಥಾನ ಪಡೆಯುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು […]

ರಾಷ್ಟ್ರಮಟ್ಟದ ಎಸ್.ಎ.ಇ ಏರೋಡಿಸೈನ್ ಚ್ಯಾಲೆಂಜ್: ನಿಟ್ಟೆ ಏರೋ ಕ್ಲಬ್ ಗೆ ಎರಡನೇ ಸ್ಥಾನ

ನಿಟ್ಟೆ: ಸೆಪ್ಟೆಂಬರ್ ಮೊದಲ ವಾರದಲ್ಲಿ ಚೆನ್ನೈನ ಎಸ್.ಆರ್.ಎಂ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಮ್ಯಾನೇಜ್ಮೆಂಟ್ ನಲ್ಲಿ ನಡೆದ ರಾಷ್ಟ್ರಮಟ್ಟದ ಎಸ್.ಎ.ಇ ಏರೋಡಿಸೈನ್ ಚ್ಯಾಲೆಂಜ್ 2022 ಮೈಕ್ರೊ ಕ್ಲಾಸ್ ವರ್ಗದಲ್ಲಿ, ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಏರೋ ಕ್ಲಬ್ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. ಈ ಏರೋ ಕ್ಲಬ್ ತಂಡದಲ್ಲಿ ದೀಕ್ಷಾ, ಅಮನ್ ಕುಮಾರ್, ದೀಕ್ಷಿತ್ ಪ್ರಭು, ಅದಿತಿ ಭಟ್ ದಿನಮಣಿ, ಕೆ. ನಿಶ್ಮಿತಾ ಪೈ, ಸುಚಿತ್ರಾ ಪೈ ಹಾಗೂ ರತನ್ ರಾಜ್ ಕೆ ವಿವಿಧ ತಾಂತ್ರಿಕ […]