ಶೀಘ್ರದಲ್ಲೇ ಅಂಬೇಡ್ಕರ್ ಟೂರಿಸ್ಟ್ ಸರ್ಕ್ಯೂಟ್ ಪ್ರಾರಂಭ: ಕಿಶನ್ ರೆಡ್ಡಿ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನದ ಮೊದಲು ಕೇಂದ್ರವು ಹೊಸ ರಾಷ್ಟ್ರೀಯ ಪ್ರವಾಸೋದ್ಯಮ ನೀತಿಯನ್ನು ತರಲಿದೆ. ಭಾನುವಾರ ಹಿಮಾಚಲ ಪ್ರದೇಶದ ಧರ್ಮಶಾಲಾದಲ್ಲಿ ರಾಜ್ಯ ಪ್ರವಾಸೋದ್ಯಮ ಸಚಿವರ ರಾಷ್ಟ್ರೀಯ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ ಕಿಶನ್ ರೆಡ್ಡಿ ಈ ವಿಷಯ ತಿಳಿಸಿದ್ದಾರೆ. ಎಲ್ಲ ಪಾಲುದಾರರೊಂದಿಗೆ ವ್ಯಾಪಕ ಸಮಾಲೋಚನೆ ಮತ್ತು ಚರ್ಚೆಯ ನಂತರ ರಾಷ್ಟ್ರೀಯ ಪ್ರವಾಸೋದ್ಯಮ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು. ಜಿ 20 ಜಾಗತಿಕ ಶೃಂಗಸಭೆಯನ್ನು ಭಾರತ ಆಯೋಜಿಸಲಿದ್ದು,ಈ ಸಂದರ್ಭದಲ್ಲಿ ರಾಜ್ಯ […]

ನಿಟ್ಟೆ ಕಾಲೇಜಿನಲ್ಲಿ ತುಳು ಸಂಘದ ವತಿಯಿಂದ ತುಡರ ಸಿರಿ ಕಾರ್ಯಕ್ರಮ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತುಳು ಸಂಘವಾಗಿರುವ ‘ತುಡರ್’ ಇದರ ಆಶ್ರಯದಲ್ಲಿ ಸೆ.17 ರಂದು ‘ತುಡರ ಸಿರಿ’ ಕಾರ್ಯಕ್ರಮವನ್ನು ಅತ್ಯಂತ ಅದ್ಧೂರಿಯಾಗಿ ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ ಕತ್ತಲ್‌ಸಾರ್ ತುಳು ಸಂಸ್ಕೃತಿಯ ಸಾಂಪ್ರದಾಯಿಕ ಶೈಲಿಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ತುಳು ಲಿಪಿ ಮತ್ತು ಭಾಷೆಯ ಇತಿಹಾಸವನ್ನು ವರ್ಣಿಸಿ ಅದರ ಮಹತ್ವವನ್ನು ತಿಳಿಸುತ್ತಾ ತುಳು ಭಾಷೆ ಕರ್ನಾಟಕದ ಅಧಿಕೃತ ರಾಜ್ಯ ಭಾಷೆಯಾಗಬೇಕು‌ […]

ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ, ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಹಯೋಗದೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಭಾನುವಾರದಂದು ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲ ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]

ಪೂರ್ವ ಸ್ವಾಮ್ಯದ ವಾಹನ ಮಾರಾಟಗಾರರ ಸಂಘದ ಪ್ರಥಮ ಪದಗ್ರಹಣ ಸಮಾರಂಭ

ಉಡುಪಿ: ಇಲ್ಲಿನ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಸೆಪ್ಟೆಂಬರ್ 18 ಭಾನುವಾರದಂದು ಪೂರ್ವ ಸ್ವಾಮ್ಯದ ವಾಹನ ಮಾರಾಟಗಾರರ ಸಂಘದ ಪ್ರಥಮ ಪದಗ್ರಹಣ ಸಮಾರಂಭವು ಜರುಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಂತ ಜಾನ್ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮೋಹನದಾಸ್ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವ ಅಧ್ಯಕ್ಷರಾಗಿ: ಸದಾಶಿವ ಶೆಟ್ಟಿ, ಸಲಹೆಗಾರರಾಗಿ: ವಸಂತ ಕುಮಾರ್ ಉಡುಪಿ, ಪದ್ಮನಾಭ ಜತನ್ ( ಅನ್ನು) ,ಪೌಲ್ ಸಿಜು, ಅಧ್ಯಕ್ಷರಾಗಿ: ಪೂರ್ವ ಸ್ವಾಮ್ಯದ […]