ಸರ್ಕಾರಿ ಯೋಜನೆಗಳ ಫಲಾನುಭವಿಗಳ ಸಾಲದ ಅರ್ಜಿಗಳನ್ನು ತಿರಸ್ಕರಿಸಬೇಡಿ: ಜಿ.ಪಂಚಾಯತ್ ಸಿ.ಇ.ಒ
ಉಡುಪಿ: ಸರ್ಕಾರಿ ಯೋಜನೆಗಳ ಫಲಾನುಭವಿಗಳು ಸಲ್ಲಿಸುವ ಅರ್ಜಿಗಳನ್ನು ಸಣ್ಣಪುಟ್ಟ ಕಾರಣಗಳಿಗೆ ತಿರಸ್ಕರಿಸದೆ ಅವುಗಳನ್ನು ಪುನರ್ ಪರಿಶೀಲನೆ ನಡೆಸಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಹಾಗೂ ಸೂಕ್ತ ದಾಖಲೆಗಳ ಅಗತ್ಯವಿದ್ದಲ್ಲಿ ಫಲಾನುಭವಿಗಳಿಂದ ಅವುಗಳನ್ನು ಪಡೆದು ಸಾಲವನ್ನು ಮಂಜೂರು ಮಾಡುವ ಮೂಲಕ ಎಲ್ಲ ಬ್ಯಾಂಕ್ಗಳು ಸರ್ಕಾರಿ ಯೋಜನೆಗಳ ಗುರಿ ಸಾಧನೆಗೆ ನೆರವು ನೀಡಬೇಕು ಎಂದು ಜಿ.ಪಂಚಾಯತ್ ಸಿ.ಇ.ಒ ಪ್ರಸನ್ನ ಬ್ಯಾಂಕ್ ಅಧಿಕಾರಿಗಳಿಗೆ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ […]
ಸ್ಪರ್ಧೆಯಲ್ಲಿ ಬಹುಮಾನಕ್ಕಿಂತಲೂ ಭಾಗವಹಿಸುವಿಕೆಯೆ ಮುಖ್ಯ: ವಿಜಯ್ ಬಲ್ಲಾಳ್
ಉಡುಪಿ: ವೇದಿಕೆಯನ್ನುವುದು ಮುಂದಿನ ಜೀವನದ ಭವಿಷ್ಯಕ್ಕೆ ಮುನ್ನುಡಿಗೆ ಸಹಕಾರಿಯಾಗುತ್ತದೆ. ಸ್ಪರ್ಧೆಯಲ್ಲಿ ಬಹುಮಾನ ಮುಖ್ಯವಲ್ಲ, ಆದರೆ ಭಾಗವಹಿಸುವಿಕೆ ಅತೀ ಮುಖ್ಯ ಎಂದು ಅಂಬಲಪಾಡಿ ದೇವಸ್ಥಾನದ ಆಡಳಿತ ಮಂಡಳಿಯ ಧರ್ಮದರ್ಶಿಗಳಾದ ನಿ.ಬಿ ವಿಜಯ ಬಲ್ಲಾಳ್ ಅಭಿಪ್ರಾಯಪಟ್ಟರು. ಮಂಗಳವಾರದಂದು ಮಲ್ಪೆಯ ಸರಕಾರಿ ಫ್ರೌಢಶಾಲಾ ಸಭಾಭವನದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಮತ್ತು ಸುಮನಸ ಕೊಡವೂರು ಇವರ ಸಹಯೋಗದಲ್ಲಿ ಆಯೋಜಿಸಲಾದ ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ನಾಟಕ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಲಾದೇವಿಯಾದ ಶಾರದೆಯನ್ನು ಆರಾಧಿಸಿದಲ್ಲಿ ನಮ್ಮ […]
ಆಸ್ಟ್ರೇಲಿಯದ ಕಿಂಬರ್ಲಿಯಲ್ಲಿ 380 ಮಿಲಿಯನ್ ವರ್ಷ ಹಳೆಯ ಮೀನಿನ ಹೃದಯದ ಪಳೆಯುಳಿಕೆ ಪತ್ತೆ!
380 ಮಿಲಿಯನ್ ವರ್ಷ ಹಳೆಯ ಮೀನಿನ ಹೃದಯ ಇತ್ತೀಚೆಗಷ್ಟೇ ಆಸ್ಟ್ರೇಲಿಯದ ಕಿಂಬರ್ಲಿಯಲ್ಲಿನ ಬಂಡೆಯ ರಚನೆಯಿಂದ ಪಡೆಯಲಾಗಿದೆ. ಇದುವರೆಗೆ ಕಂಡುಬಂದಿರುವ ಅತ್ಯಂತ ಹಳೆಯ ಪಳೆಯುಳಿಕೆ ಇದಾಗಿದೆ ಎಂದು ದ ವೆಥರ್ ಚಾನೆಲ್ ಇಂಡಿಯಾ ವರದಿ ಮಾಡಿದೆ. ಈ ಹೃದಯವು ಆರ್ತ್ರೋಡೈರ್ಸ್ ಅಥವಾ ಗೊಗೊ ಮೀನು ಎಂದು ಕರೆಯಲ್ಪಡುವ ಶಸ್ತ್ರಸಜ್ಜಿತ ದವಡೆಯ ಮೀನುಗಳ ವರ್ಗಕ್ಕೆ ಸೇರಿದೆ. ಆದರೆ ಅದಕ್ಕಿಂತಲೂ ವಿಸ್ಮಯಕಾರಿ ಸಂಗತಿಯೆಂದರೆ ಪಳೆಯುಳಿಕೆಯು ಚಪ್ಪಟೆಯಾಗಿರದೆ ಅಪರೂಪದ ಮೂರು ಆಯಾಮಗಳಲ್ಲಿ ಸಂರಕ್ಷಿಸಲ್ಪಟ್ಟಿರುವುದು ಕಂಡುಬಂದಿದೆ. ಹೃದಯದ ಪಕ್ಕದಲ್ಲಿ ಪಳೆಯುಳಿಕೆಗೊಂಡ ಹೊಟ್ಟೆ, ಕರುಳು ಮತ್ತು […]
ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಮಣ್ಣು ಉಳಿಸಿ ಜಾಗೃತಿ ಕಾರ್ಯಕ್ರಮ
ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಯುತ್ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಮಣ್ಣಿನ ರಕ್ಷಣೆ ಕುರಿತು ಮಣ್ಣು ಉಳಿಸಿ ಜಾಗೃತಿ ಕಾರ್ಯಕ್ರಮ ಸೆಪ್ಟೆಂಬರ್ 20ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೊಲ್ಕತ್ತದ ಸಾಹಿಲ್ ಝಾ ಮಾತನಾಡಿ, ಮಣ್ಣು ನಮ್ಮ ಪರಿಸರ ಮತ್ತು ಬದುಕಿನ ಅವಿಭಾಜ್ಯ ಅಂಗವಾಗಿದೆ. ಸುಸ್ಥಿರ ಕೃಷಿ ಮತ್ತು ಪರಿಸರಕ್ಕಾಗಿ ಮಣ್ಣನ್ನು ಉಳಿಸಬೇಕಾಗಿದೆ. ಮಣ್ಣಿನ ರಕ್ಷಣೆ ಕುರಿತು ಜಾಗೃತಿ ಮೂಡಿಸಲು ನಿತ್ಯವೂ ದೇಶಾದ್ಯಂತ ಸಾವಿರಾರು ಕಿಲೋಮೀಟರ್ ಸೈಕಲ್ ನಲ್ಲಿ ಸಂಚರಿಸುತ್ತಿದ್ದೇನೆ. ಮಣ್ಣು ಕುರಿತು ಮಾತಾಡಿ, […]
ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಮಾಹಿತಿ ಕಾರ್ಯಾಗಾರ
ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರನ್ನು ಕಾಡುವ ಆರೋಗ್ಯ ಸಮಸ್ಯೆಯ ಕುರಿತು ಮಾಹಿತಿ ಕಾರ್ಯಾಗಾರವನ್ನು ಸೋಮವಾರ ಆಯೋಜಿಸಲಾಗಿತ್ತು. ವಿದ್ಯಾರ್ಥಿನಿಯರನ್ನು ಕಾಡುವ ಆರೋಗ್ಯ ಸಮಸ್ಯೆ ಹಾಗೂ ಯಾವ ರೀತಿಯ ಜೀವನ ಶೈಲಿ ರೂಢಿಸಿಕೊಳ್ಳುವುದರ ಮೂಲಕ ಇವುಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎನ್ನುವುದನ್ನು ಕುಂದಾಪುರ ಗ್ರಾಮೀಣ ಆಯುರ್ವೇದ ಮಹಾವಿದ್ಯಾಲಯ ಹಾಗೂ ಆಸ್ಪತ್ರೆಯ ವೈದ್ಯೆ ಡಾ. ವಾಣಿಶ್ರೀ ಐತಾಳ ಮನಮುಟ್ಟುವಂತೆ ವಿವರಿಸಿದರು. ಕಾಲೇಜಿನ ಉಪ ಪ್ರಾಂಶುಪಾಲೆ ಶ್ರೀಮತಿ ಮಮತಾ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭೌತ ಶಾಸ್ತ್ರ ಉಪನ್ಯಾಸಕಿ ಗಾಯತ್ರಿ ಭಟ್ […]