ಸೆ.21 ರಿಂದ 28 ರವರೆಗೆ ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಉಡುಪಿ: ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ಹಾಗೂ ಗಂಭೀರವಲ್ಲದ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ದೃಷ್ಠಿಯಿಂದ ದೂರು ಅರ್ಜಿಗಳ ಪ್ರಪತ್ರಗಳನ್ನು ಸೆಪ್ಟಂಬರ್ 21 ರಂದು ಬೈಂದೂರು ಪ್ರವಾಸಿ ಮಂದಿರ, ಸೆ. 22 ರಂದು ಕುಂದಾಪುರ ಪ್ರವಾಸಿ ಮಂದಿರ, ಸೆ. 23 ರಂದು ಹೆಬ್ರಿ ಪ್ರವಾಸಿ ಮಂದಿರ, ಸೆ. 26 ರಂದು ಕಾರ್ಕಳ ಪ್ರವಾಸಿ ಮಂದಿರ, ಸೆ. 27 ರಂದು ಬ್ರಹ್ಮಾವರ ತಾಲೂಕು ಕಚೇರಿ […]

ಬೆಂಗಳೂರು ರಸ್ತೆಯಲ್ಲಿ ಗಂಡಾತರದ ಗುಂಡಿಗಳು: ಬಿಬಿಎಂಪಿಗೆ ಎಚ್ಚರಿಕೆ ನೀಡಿದ ರಾಜ್ಯ ಹೈಕೋರ್ಟ್

ಬೆಂಗಳೂರು: ಕರ್ನಾಟಕ ಹೈಕೋರ್ಟ್ ಸೋಮವಾರದಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಗೆ ಎಚ್ಚರಿಕೆ ನೀಡಿದ್ದು, ನ್ಯಾಯಾಲಯವು ನಾಗರಿಕ ಸಂಸ್ಥೆಯ ಮೇಲೆ ಕೂಗಾಡದೆ ಇರಬಹುದು, ಅದರರ್ಥ ನಗರದಲ್ಲಿ ಗುಂಡಿಗಳನ್ನು ಮುಚ್ಚುವುದನ್ನು ಖಾತ್ರಿಪಡಿಸುವ ಬಗ್ಗೆ ಅದು ಗಂಭೀರವಾಗಿಲ್ಲ ಎಂದಲ್ಲ ಎಂದು ಹೇಳಿದೆ. ಬಿಬಿಎಂಪಿ ತನ್ನ ಕೆಲಸದ ಬಗ್ಗೆ ಪ್ರಾಮಾಣಿಕವಾಗಿ ವರ್ತಿಸುವಂತೆಯೂ ಹೈಕೋರ್ಟ್ ಹೇಳಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ಪೀಠವು ಬಿಬಿಎಂಪಿ ವಕೀಲರಿಗೆ, “ನೀವು ತುರ್ತು ಅವಶ್ಯಕತೆಯನ್ನು ತಿಳಿಸಿರಿ, ಈ ಪರಿಸ್ಥಿತಿಯ ಗಂಭೀರತೆ ಮತ್ತು […]

ಮಲ್ಪೆ: ಕರಾವಳಿ ಕಾವಲು ಪೊಲೀಸ್ ವತಿಯಿಂದ ಪಡುಕೆರೆ ಬೀಚ್ ಸ್ವಚ್ಛತೆ

ಉಡುಪಿ: ಮಲ್ಪೆ ಕರಾವಳಿ ಕಾವಲು ಪೊಲೀಸ್ ಇವರ ವತಿಯಿಂದ ಭಾನುವಾರದಂದು ಮಲ್ಪೆ ಪಡುಕೆರೆ ಬೀಚ್‌ನಲ್ಲಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಎಸ್.ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಉಡುಪಿ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್, ಸಿ.ಎಸ್.ಪಿ ಅಪರಾಧ ವಿಭಾಗದ ಪೊಲೀಸ್ ನಿರೀಕ್ಷಕ ರತ್ನಕುಮಾರ್, ಹೆಜಮಾಡಿ ಠಾಣೆಯ ಪೊಲೀಸ್ ನಿರೀಕ್ಷಕ ಮಂಜಪ್ಪ ಹಾಗೂ ಸಿಬ್ಬಂದಿಗಳು, ಭಟ್ಕಳ ಠಾಣೆ ಪೊಲೀಸ್ ನಿರೀಕ್ಷಕ ಕೃಷ್ಣಾನಂದ ನಾಯ್ಕ್ ಹಾಗೂ ಸಿಬ್ಬಂದಿಗಳು, ಮಲ್ಪೆ ಠಾಣೆಯ ಸಿಬ್ಬಂದಿಗಳು, ಜಿಲ್ಲಾ ಹೋಮ್‌ಗಾರ್ಡ್ ಸಿಬ್ಬಂದಿಗಳು […]

ಪೂರ್ವ ಸ್ವಾಮ್ಯದ ವಾಹನ ಮಾರಾಟಗಾರರ ಸಂಘದ ಅಧ್ಯಕ್ಷರಾಗಿ ಉಡುಪಿ ಕಾರ್ಸ್ ಮಾಲಕ ಮೊಹಮ್ಮದ್ ಅಶ್ರಫ್ ಆಯ್ಕೆ

ಉಡುಪಿ: ಇಲ್ಲಿನ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ ಸೆಪ್ಟೆಂಬರ್ 18 ಭಾನುವಾರದಂದು ಪೂರ್ವ ಸ್ವಾಮ್ಯದ ವಾಹನ ಮಾರಾಟಗಾರರ ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಪೂರ್ವ ಸ್ವಾಮ್ಯದ ವಾಹನ ಮಾರಾಟಗಾರರ ಸಂಘದ ಸ್ಥಾಪಕಾಧ್ಯಕ್ಷ ಮತ್ತು ಉಡುಪಿ ಕಾರ್ಸ್ ಮಾಲಕ ಮೊಹಮ್ಮದ್ ಅಶ್ರಫ್ ಆಯ್ಕೆಯಾಗಿದ್ದಾರೆ. ಸಂಘದ ಗೌರವಾಧ್ಯಕ್ಷರಾಗಿ ಸದಾಶಿವ ಶೆಟ್ಟಿ, ಸಲಹೆಗಾರರಾಗಿ: ವಸಂತ ಕುಮಾರ್ ಉಡುಪಿ, ಪದ್ಮನಾಭ ಜತ್ತನ್ನ ( ಅನ್ನು) ,ಪೌಲ್ ಸಿಜು, ಉಪಾಧ್ಯಕ್ಷರಾಗಿ ವಲೇರಿಯನ್ ಪೈಸ್, ಮೂದಸರ್ ಕುಂದಾಪುರ, ಪ್ರಧಾನ ಕಾರ್ಯದರ್ಶಿಯಾಗಿ ಉದಯ […]

ಹಿರಿಯಡಕ ಗ್ರಾಮ ವನ್ ಕೇಂದ್ರದಲ್ಲಿ ಆಭಾ ನೋಂದಣಿ

ಹಿರಿಯಡಕ: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹಿರಿಯಡಕ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ವನ್ ಕೇಂದ್ರದಲ್ಲಿ ಆಭಾ (ಎ.ಬಿ.ಹೆಚ್.ಎ) ನೋಂದಣಿಯನ್ನು ಸೆ.19 ರಂದು ನಡೆಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ, ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು, ಪಂಚಾಯತ್ ಸದಸ್ಯರು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.