ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ಪ್ರಕರಣ: ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧವನ್ನು ತೆಗೆದುಹಾಕಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ತನ್ನ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಕಾಲ ನಡೆದ ವಾದದಲ್ಲಿ ಅರ್ಜಿದಾರರ ಪರ 21 ವಕೀಲರು ಭಾಗಿಯಾಗಿದ್ದು, ಪ್ರತಿವಾದಿಗಳ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಕರ್ನಾಟಕ ಅಡ್ವೊಕೇಟ್ ಜನರಲ್ ಪ್ರಭುಲಿಂಗ […]
ದೇಶಾದ್ಯಂತ ಪಿ.ಎಫ್.ಐ ಕಚೇರಿಗಳ ಮೇಲೆ ಎನ್.ಐ.ಎ ದಾಳಿ: ಬಂಧಿತರ ಸಂಖ್ಯೆ 106 ಕ್ಕೆ ಏರಿಕೆ
ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ, ಜಾರಿ ನಿರ್ದೇಶನಾಲಯ ಮತ್ತು ಸ್ಥಳೀಯ ಪೊಲೀಸರು ಗುರುವಾರ ಮಹಾರಾಷ್ಟ್ರ, ತಮಿಳುನಾಡು, ಕೇರಳ, ಉತ್ತರ ಪ್ರದೇಶ ಮತ್ತು ಅಸ್ಸಾಂ ಸೇರಿದಂತೆ 11 ರಾಜ್ಯಗಳಾದ್ಯಂತ ಶಂಕಿತ ಭಯೋತ್ಪಾದಕ-ಧನಸಹಾಯ ಚಟುವಟಿಕೆಗಳನ್ನು ಹತ್ತಿಕ್ಕಲು ಏಕಕಾಲದಲ್ಲಿ ದಾಳಿಗಳನ್ನು ಪ್ರಾರಂಭಿಸಿದ್ದು, ಬೆಳಗಿನ ಜಾವ 3.30ರಿಂದ ಇದುವರೆಗೆ ದಾಳಿ ಮುಂದುವರಿದಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ 100ಕ್ಕೂ ಹೆಚ್ಚು ನಾಯಕರನ್ನು ಈ ದಾಳಿಯಲ್ಲಿ ಬಂಧಿಸಲಾಗಿದೆ. ಕೇರಳ (22) ಮಹಾರಾಷ್ಟ್ರ ಮತ್ತು ಕರ್ನಾಟಕ (ತಲಾ 20), ತಮಿಳುನಾಡು (10), ಅಸ್ಸಾಂ (9), ಉತ್ತರ […]
ವಿ.ಎಸ್.ಆಚಾರ್ಯ ಬಸ್ ನಿಲ್ದಾಣಕ್ಕೆ ಗಡಿಯಾರ ಹಸ್ತಾಂತರ
ಉಡುಪಿ: ಬನ್ನಂಜೆಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ‘ವಿ.ಎಸ್.ಆಚಾರ್ಯ’ ಬಸ್ ನಿಲ್ದಾಣಕ್ಕೆ, ವಿಷ್ಣು ಸೇಲ್ಸ್ ನ ಮಾಲೀಕ ವಿಷ್ಣುಪ್ರಸಾದ್ ಪಾಡಿಗಾರ್ ಮತ್ತು ಲಂಡನ್ ಟೈಮ್ಸ್ ನ ಮಾಲೀಕ ಸುಭಾಷ್ ಇವರು ಉಡುಗೊರೆ ನೀಡಿದ ಮೂರು ಗಡಿಯಾರಗಳನ್ನು ಸಾರಿಗೆ ನಿಗಮದ ಮಂಗಳೂರು ವಿಭಾಗದ ನಿಯಂತ್ರಣಾಧಿಕಾರಿಗಳಾದ ರಾಜೇಶ್ ಶೆಟ್ಟಿ ಇವರಿಗೆ ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರ ಪರವಾಗಿ ಮಠದ ದಿವಾನರಾದ ವರದರಾಜ ಭಟ್ ರವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವಿಭಾಗ ಸಂಚಲನಾಧಿಕಾರಿ ಮರಿಗೌಡ, ಉಡುಪಿ ಘಟಕ […]
ಸೆಪ್ಟಂಬರ್ 25 ರಿಂದ ಅಕ್ಟೋಬರ್ 1 ರವರೆಗೆ ಹಿರಿಯ ನಾಗರಿಕರ ಸಪ್ತಾಹ ಕಾರ್ಯಕ್ರಮ: ವೀಣಾ ಬಿ.ಎನ್
ಉಡುಪಿ: ಹಿರಿಯ ನಾಗರೀಕರ ಸಪ್ತಾಹ ಕಾರ್ಯಕ್ರಮವು ಸೆಪ್ಟಂಬರ್ 25 ರಿಂದ ಅಕ್ಟೋಬರ್ 1 ರ ವರೆಗೆ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಬೇಕಾದ ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡು ಅರ್ಥಪೂರ್ಣವಾಗಿ ಆಚರಿಸುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಅಧಿಕಾರಿಗಳಿಗೆ ಸೂಚಿಸಿದರು. ಬುಧವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಹಿರಿಯ ನಾಗರೀಕರ ಸಪ್ತಾಹ ಕಾರ್ಯಕ್ರಮ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಿರಿಯ ನಾಗರೀಕರನ್ನು ಗೌರವಿಸಬೇಕು. ಅವರ ಸಲಹೆ ಸೂಚನೆಗಳು ನಮ್ಮೆಲ್ಲರಿಗೂ ಅಗತ್ಯವಾಗಿದ್ದು, ಅವರ […]
ಸೆಪ್ಟಂಬರ್ 23 ರಂದು ನಗರಸಭೆ ಕಚೇರಿಯಲ್ಲಿ ಸಾರ್ವಜನಿಕ ಸೇವೆ ಅಲಭ್ಯ
ಉಡುಪಿ: ಉಡುಪಿ ನಗರಸಭೆಯ ವತಿಯಿಂದ ಸೆಪ್ಟಂಬರ್ 23 ರಂದು ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಬೆಳಗ್ಗೆ 8 ಗಂಟೆಗೆ ನಗರಸಭಾ ಕಚೇರಿಯಿಂದ ಪುರಭವನದವರೆಗೆ ಪುರ ಮೆರವಣಿಗೆ ಹಾಗೂ ಬೆಳಗ್ಗೆ 10 ಗಂಟೆಗೆ ಅಜ್ಜರಕಾಡು ಪುರಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಸದರಿ ದಿನದಂದು ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಮಾಡಲಾಗುವುದಿಲ್ಲ ಹಾಗೂ ನಗರಸಭಾ ಕಚೇರಿಯಲ್ಲಿ ಸಾರ್ವಜನಿಕ ಸೇವೆ ಲಭ್ಯವಿರುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.