ಜಿಲ್ಲಾ ಖಜಾನೆ ಎದುರಿನ ವೃತ್ತಕ್ಕೆ ನಾಮಕರಣ: ಆಕ್ಷೇಪಣೆ ಆಹ್ವಾನ
ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಜಿಲ್ಲಾ ಖಜಾನೆ ಎದುರಿನ ವೃತ್ತಕ್ಕೆ ವಿನಾಯಕ ದಾಮೋದರ್ ಸಾವರ್ಕರ ವೃತ್ತ ಎಂದು ನಾಮಕರಣಗೊಳಿಸುವ ಕುರಿತು ಆಕ್ಷೇಪಣೆ ಹಾಗೂ ಸಲಹೆಗಳಿದ್ದಲ್ಲಿ 30 ದಿನಗಳ ಒಳಗಾಗಿ ನಗರಸಭೆ ಪೌರಾಯುಕ್ತರ ಕಚೇರಿಗೆ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.
ಮಾಣಿ: ವಾರಾಹಿ ಜಲಾನಯನ ನೀರಿನ ಮಟ್ಟ ಹೆಚ್ಚಳ; ಸಾರ್ವಜನಿಕರು ಎಚ್ಚರ ವಹಿಸಲು ಸೂಚನೆ
ಉಡುಪಿ : ವಾರಾಹಿ ಯೋಜನೆಯ ಮಾಣಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿರುವ ಹಿನ್ನೆಲೆ, ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 594.36 ಮೀ. ಇದ್ದು, ಈಗಾಗಲೇ ಜಲಾಶಯದ ಮಟ್ಟವು 590.10 ಮೀ. ತಲುಪಿದ್ದು, ಜಲಾಶಯಕ್ಕೆ ನೀರಿನ ಒಳಹರಿವು ಮುಂದುವರೆದಲ್ಲಿ ಅಣೆಕಟ್ಟು ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿಯಾದ ಜಲಾಶಯದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವುದು. ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವಾರಾಹಿ/ ಹಾಲಾಡಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ […]