ಕಾಪು: ವ್ಯಕ್ತಿ ನಾಪತ್ತೆ

ಉಡುಪಿ: ಕಾಪು ತಾಲೂಕು ಕುತ್ಯಾರು ಗ್ರಾಮದ ನಿವಾಸಿ ಮಥಾಯಿ (64) ಎಂಬ ವ್ಯಕ್ತಿಯು ಫೆಬ್ರವರಿ 10 ರಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ದುಂಡು ಮುಖ, ಸಪೂರ ಶರೀರ ಹೊಂದಿದ್ದು, ಮಲಯಾಳಂ  ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಿರ್ವ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಸೆ.24: ಸಮಾಜ ಕಲ್ಯಾಣ ಇಲಾಖೆ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸೆಪ್ಟಂಬರ್ 24 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 7.30 ರಿಂದ 8.30 ರ ವರೆಗೆ ಕೋಟ ಗೃಹ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಜೋಯಿಡಾ ಗೆ ಪ್ರಯಾಣ ಬೆಳೆಸಲಿದ್ದಾರೆ.

ಸೆ.24: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಅವರು ಸೆಪ್ಟಂಬರ್ 24 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 10 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದ ಸಮೀಪದ ಮಥುರ ಛತ್ರ ಇಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಪ್ರಶಿಕ್ಷಣ ವರ್ಗ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಂಗಳೂರಿಗೆ ತೆರಳಲಿರುವರು.

ನೀರಿನ ಲಭ್ಯತೆಯನ್ನು ಆಧರಿಸಿ ಯೋಜನೆ ರೂಪಿಸಿ: ಜಿ.ಪಂ ಸಿಇಓ ಪ್ರಸನ್ನ ಹೆಚ್.

ಉಡುಪಿ: ಜಿಲ್ಲೆಯಲ್ಲಿ ಲಭ್ಯವಿರುವ ನೀರಿನ ಮೂಲಗಳನ್ನು ಆಧರಿಸಿ ಕುಡಿಯುವ  ನೀರು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು. ಅವರು ಇಂದು ಮಣಿಪಾಲದ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಲ ಜೀವನ್ ಮಿಷನ್ ಕಾರ್ಯಕ್ರಮವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 2023 ನೇ ಸಾಲಿನ ಒಳಗಾಗಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳ ಎಲ್ಲಾ ಮನೆಗಳಿಗೆ ನಳ್ಳಿ […]

ಮಹಿಳೆ ಮತ್ತು ಮಕ್ಕಳ ರಕ್ಷಣೆ ಆದ್ಯತೆಯಾಗಲಿ: ಜಿಲ್ಲಾಧಿಕಾರಿ     

ಉಡುಪಿ: ಸಮಾಜದಲ್ಲಿ ದುರ್ಬಲರಾದ ಮಹಿಳೆ ಮತ್ತು ಮಕ್ಕಳ ರಕ್ಷಣೆ  ಹಾಗೂ ಅವರುಗಳ ಮೇಲಾಗುವ ಶೋಷಣೆಗಳ ವಿರುದ್ಧ ಬೆನ್ನೆಲುಬಾಗಿ ಅವರ ಪರ ನಿಂತು ಕಾನೂನಿನ ಅಡಿಯಲ್ಲಿ ಎಲ್ಲಾ ರೀತಿಯ ಅವಶ್ಯವಿರುವ ನೆರವುಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುರಿತ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ವಿವಿಧ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿ ಹಾಗೂ ಮಹಿಳೆಯರ ಸಬಲೀಕರಣ […]