ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ: ಜ್ಞಾನಸುಧಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
ಕಾರ್ಕಳ : ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಶ್ರೀ ಭುವನೇಂದ್ರ ಪಿಯು ಕಾಲೇಜು ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಬಾಲಕರ ತಂಡ ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ. ಬಾಲಕರ ತಂಡದ ನಿಶಾಂತ್ ನರಸಿಂಹ ಹೆಗ್ಡೆ ಹಾಗೂ ಬಾಲಕಿಯರ ತಂಡದ ಸಾರ ಕ್ಷೇವಿಯರ್ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ ಅಭಿನಂದಿಸಿದ್ದು, ಬೋಧಕ-ಬೋಧಕೇತರ […]
ವಿಶ್ವ ಹಿರಿಯ ನಾಗರಿಕರ ದಿನಾಚರಣೆ: ಹಿರಿಯ ನಾಗರಿಕರಿಗಾಗಿ ವಿವಿಧ ಸ್ಪರ್ಧೆಗಳು
ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರಿಗೆ ಸೆಪ್ಟಂಬರ್ 28 ರಂದು ಬೆಳಗ್ಗೆ 9.30 ರಿಂದ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಕ್ರೀಡಾ ವಿಭಾಗದಲ್ಲಿ 60-69 ವರ್ಷ, 70-79 ವರ್ಷ ಮತ್ತು 80 ವರ್ಷ ಮೇಲ್ಪಟ್ಟ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗದಲ್ಲಿ ನಡಿಗೆ, ರಿಂಗನ್ನು ಬಕೆಟ್ನಲ್ಲಿ ಎಸೆಯುವುದು ಮತ್ತು ಬಾಂಬ್ […]
ಕಬಡ್ಡಿ ಪಂದ್ಯಾಟ: ಸಾಹಿಲ್ ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇದರ ಸಂಯುಕ್ತ ಆಶ್ರಮದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಾಹಿಲ್ ಪೂಜಾರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ದವರು ಅಭಿನಂದನೆ ಸಲ್ಲಿಸಿದ್ದಾರೆ.
ಮಂಗಳೂರು ವಿಶ್ಯವಿದ್ಯಾನಿಲಯದ ಪದವಿಪೂರ್ವ ಪಠ್ಯಕ್ರಮದಲ್ಲಿ ಪ್ರಾದೇಶಿಕ ಇತಿಹಾಸ ಸೇರ್ಪಡೆ
ಮಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯ ಅಂಗವಾಗಿ ದೇಶಾದ್ಯಂತ ಸ್ಥಳೀಯ ಇತಿಹಾಸ ಮತ್ತು ಮಾತೃಭಾಷೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮಂಗಳೂರು ವಿಶ್ವವಿದ್ಯಾನಿಲಯದ ಪ.ಪೂ ಪಠ್ಯಕ್ರಮದಲ್ಲಿ ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿಯ ಸ್ಥಳಿಯ ಇತಿಹಾಸವನ್ನು ಸೇರಿಸಲಾಗಿಲ್ಲ ಎನ್ನುವ ಪುಕಾರು ಎದ್ದಿತ್ತು. ಈ ಬಗ್ಗೆ ವಿಧಾನಸಭೆಯಲ್ಲಿ ಶಾಸಕ ಯು.ಟಿ.ಖಾದರ್ ಪ್ರಶ್ನಿಸಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಬರುತ್ತಿದ್ದರೂ ಇಲ್ಲಿನ ಸ್ಥಳೀಯ ಇತಿಹಾಸವನ್ನು ಪಠ್ಯದೊಳಗೆ ಸೇರಿಸಲಾಗಿಲ್ಲ. ಕಾಲೇಜಿನ ಆಡಳಿತ ಮಂಡಳಿಯ ನಿರ್ಲಕ್ಯದಿಂದಾಗಿ ಪದವಿಪೂರ್ವ ಹಂತದಲ್ಲಿ ಸ್ಥಳೀಯ ಇತಿಹಾಸವನ್ನು […]
ಅಲೆವೂರು: ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮ
ಅಲೆವೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ನಗರದ ಅಲೆವೂರು ಪ್ರಗತಿನಗರ ಡಾ. ಶಿವರಾಮ ಕಾರಂತ ಕಲಾಗ್ರಾಮದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಂಗಣದಲ್ಲಿ ವಿಶೇಷ ಘಟಕ ಯೋಜನೆಯಡಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ತುಳುಕೂಟದ ಜಿಲ್ಲಾ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಅನಾದಿ ಕಾಲದಿಂದ ಕಲೆ, ಸಂಸ್ಕೃತಿ, ಸಂಭ್ರಮವನ್ನು ಬಿಂಬಿಸುವ ಜನಪದ ಕಲೆಗಳು, ಸರ್ವಕಾಲಕ್ಕೂ ಮನರಂಜನೆಯನ್ನು ನೀಡುವುದರ ಜೊತೆಗೆ ನಮ್ಮ ಭವ್ಯ ಪರಂಪರೆಯನ್ನು ಉಳಿಸಿಕೊಂಡು ಬಂದಿದೆ. ಇಂದಿನ […]