ಶಟಲ್ ಬ್ಯಾಡ್ಮಿಂಟನ್: ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಶ್ರೀ ವೆಂಕಟರಮಣ ಕಾಲೇಜಿನಲ್ಲಿ ಕಲಿಕೆಯ ಜೊತೆಗೆ ವಿದ್ಯಾರ್ಥಿಗಳಲ್ಲಿ ಇರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಗೌರವಿಸಿ ಪ್ರೋತ್ಸಾಹಿಸುವ ಕಾರ್ಯ ಅವಿರತವಾಗಿ ನಡೆಯುತ್ತಿರುವುದರಿಂದ ಕಾಲೇಜಿನ ವಿದ್ಯಾರ್ಥಿನಿಯರು ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಶ್ರೀ ಭುವನೇಂದ್ರ ಪದವಿ ಪೂರ್ವ ಕಾಲೇಜು ಕಾರ್ಕಳ ಇದರ ಜಂಟಿ ಆಶ್ರಯದಲ್ಲಿ ಜರುಗಿದ ಶಟಲ್ ಬ್ಯಾಡ್ಮಿಂಟನ್ ಪಂದ್ಯದಲ್ಲಿ ಗೆಲುವು ಸಾಧಿಸುವುದರ ಮೂಲಕ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಧಾರಿಣಿ ಕೆ. ಎಸ್ […]

ನಂದಿಕೂರು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ

ಪಡುಬಿದ್ರೆ: ಇಲ್ಲಿನ ನಂದಿಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸೆ. 26 ಸೋಮವಾರದಿಂದ ಅ. 05 ಬುಧವಾರದ ತನಕ ಶ್ರೀದೇವಿ ಸನ್ನಿಧಾನದಲ್ಲಿ ನಡೆಯುವ ಶರನ್ನವರಾತ್ರಿ ಮಹೋತ್ಸವದ ಕಾರ್ಯಕ್ರಮವು ಪ್ರತೀ ವರ್ಷದಂತೆ ಭಕ್ತಾದಿಗಳ, ಆಸ್ತಿಕ ಮಹಾಶಯರ ಸಹಕಾರದೊಂದಿಗೆ ವೈಭವದಿಂದ ನಡೆಯಲಿರುವುದು. ಭಕ್ತಾದಿಗಳು ಈ ಪರ್ವ ಕಾಲದಲ್ಲಿ ಶ್ರೀದೇವಿಯ ದರ್ಶನ ಮಾಡಿ ಶ್ರೀ ಮುಡಿ ಗಂಧ ಪ್ರಸಾದವನ್ನು ಸ್ವೀಕರಿಸಿ, ಶ್ರೀ ದೇವಿಯ ಕೃಪೆಗೆ ಪಾತ್ರರಾಗಬೇಕಾಗಿ ಅಪೇಕ್ಷಿಸುತ್ತೇವೆ ಎಂದು ಅಡೈ ನಂದಿಕೂರು, ಉಳ್ಳೂರು ಕೊಳಚೂರು ಗ್ರಾಮಸ್ಥರು ತಿಳಿಸಿದ್ದಾರೆ. ಪರ್ಯಾಯ ತಂತ್ರಿಗಳು, ಅರ್ಚಕರಾದ ವಿದ್ವಾನ್ […]

ಲಯನ್ಸ್ ಕ್ಲಬ್ ವತಿಯಿಂದ ಹಿರಿಯಡ್ಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಔಷಧಿ ಹಸ್ತಾಂತರ

ಹಿರಿಯಡ್ಕ: ಶನಿವಾರದಂದು ಲಯನ್ಸ್ ಕ್ಲಬ್ ಅಧ್ಯಕ್ಷ ರವೀಂದ್ರ ನಾಥ್ ಹೆಗ್ಡೆಯವರ ನೇತೃತ್ವದಲ್ಲಿ ಕ್ಲಬ್ಬಿನ ಸದಸ್ಯರು ಹಿರಿಯಡ್ಕದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿ ಮಾಜಿ ಜಿಲ್ಲಾ ಗವರ್ನರ್ ಎಂ.ಜೆ.ಎಫ್ ಲಯನ್ ವಿಶ್ವನಾಥ್ ಶೆಟ್ಟಿಯವರು ನೀಡಿದ ಮಾತ್ರೆಗಳು, ಟಾನಿಕ್, ಸಿರಪ್, ಮುಲಾಮ್ ಮತ್ತು ಇತರ ಔಷಧೀಯ ಪರಿಕರಗಳನ್ನು ಕ್ಲಬ್ಬಿನ ವತಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರದ ಮೆಡಿಕಲ್ ಆಫೀಸರ್ ಡಾ. ಸತ್ಯಶಂಕರ್ ಸಿ ಎಚ್ ರವರಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಲಯನ್ ವಿಶ್ವನಾಥ್ ಶೆಟ್ಟಿಯವರು ಮಾತನಾಡಿ, ಈ ಹಿಂದೆ ಪ್ರಾಥಮಿಕ […]

ಬಾಲ್ಯದ ಕ್ಯಾನ್ಸರ್- ಜಾಗೃತಿ ಮಾಸ: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಮೇಣದ ಬತ್ತಿ ಜಾಥಾ

ಮಣಿಪಾಲ: ಸೆ. 24 ಶನಿವಾರದಂದು ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆಯು ಆಕ್ಸೆಸ್ ಲೈಫ್ ಅಸಿಸ್ಟೆನ್ಸ್ ಫೌಂಡೇಶನ್ ಸಹಯೋಗದೊಂದಿಗೆ ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸದ ಅಂಗವಾಗಿ ಮೇಣದ ಬತ್ತಿ ನಡಿಗೆಯನ್ನು ಆಯೋಜಿಸಿತ್ತು. ಬಾಲ್ಯದ ಕ್ಯಾನ್ಸರನ್ನು ಆರಂಭಿಕ ಹಂತದಲ್ಲಿ ಪತ್ತೆಮಾಡಿ ಮತ್ತು ತಜ್ಞ ವೈದ್ಯರ ತಂಡದ ಮೂಲಕ ಸರಿಯಾದ ಸಮಯದಲ್ಲಿ ಚಿಕಿತ್ಸೆ ಕೊಡಿಸಿದರೆ ರೋಗವನ್ನು ಸಂಪೂರ್ಣವಾಗಿ ಗುಣಪಡಿಸಬಹುದಾಗಿದೆ. ಸೆಪ್ಟೆಂಬರ್ ತಿಂಗಳು ಬಾಲ್ಯದ ಕ್ಯಾನ್ಸರ್ ಜಾಗೃತಿ ಮಾಸವಾಗಿದ್ದು, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದ ಮಕ್ಕಳ […]

ಕಡಿಯಾಳಿ: ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸೆ.26ರಿಂದ ಅ.5ರ ವರೆಗೆ ನವರಾತ್ರಿ ಮಹೋತ್ಸವ

ಕಡಿಯಾಳಿ: ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸೆ.26ರಿಂದ ಅ.5ರ ವರೆಗೆ ನವರಾತ್ರಿ ಮಹೋತ್ಸವ ನಡೆಯಲಿದೆ ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಕಟ್ಟೆ ರವಿರಾಜ ವಿ. ಆಚಾರ್ಯ ಹೇಳಿದರು. ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿದಿನ ಬೆಳಿಗ್ಗೆ ಗಣಯಾಗ, ಚಂಡಿಕಾಯಾಗ, ಮಹಾಪೂಜೆ, ಹೂವಿನ ಪೂಜೆ ಹಾಗೂ ನವರಾತ್ರಿ ಮಹೋತ್ಸವ ನಡೆಯಲಿದೆ. ನವರಾತ್ರಿ ಹಿನ್ನೆಲೆಯಲ್ಲಿ ಪ್ರತಿದಿನ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಜರುಗಲಿದೆ ಎಂದರು. ಸೆ.26ರಿಂದ ಅ.4ರ ವರೆಗೆ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು […]