ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ಬೈಕ್ ರ‍್ಯಾಲಿ

ಉಡುಪಿ: ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ನಡೆಯುವ ಬೈಕ್ ರ‍್ಯಾಲಿಗೆ ಬ್ಲಾಗರ್ಸ್ ಮೀಟ್- ಪ್ರವಾಸೋದ್ಯಮ ಪುನರಾವಲೋಕನ ಎಂಬ ಸಂದೇಶದೊಂದಿಗೆ ಸೆಪ್ಟಂಬರ್ 27 ರಂದು ಬೆಳಗ್ಗೆ 10.30 ಕ್ಕೆ ಮಣಿಪಾಲದ ಜಿಲ್ಲಾಡಳಿತದ ಸಂಕೀರ್ಣದಲ್ಲಿ ಶಾಸಕ ಕೆ. ರಘುಪತಿ ಭಟ್ ಚಾಲನೆ ನೀಡಲಿದ್ದಾರೆ. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ […]

ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ: ಜಿಲ್ಲೆಯಲ್ಲಿ ಸೆಪ್ಟಂಬರ್ 27 ರಂದು ಈ ಕೆಳಕಂಡ ವ್ಯಾಪ್ತಿಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಉಡುಪಿಯ 110/33/11 ಕೆವಿ ನಿಟ್ಟೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಬನ್ನಂಜೆ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬ್ರಹ್ಮಗಿರಿ, ಕಾನ್ವೆಂಟ್ ರಸ್ತೆ, ಕಾಡಬೆಟ್ಟು, ಪ್ರಗತಿನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ, 110/11ಕೆವಿ ನಿಟ್ಟೂರು ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಕಲ್ಯಾಣಪುರ, ಶಾಂತಿವನ ಮತ್ತು ಪುತ್ತೂರು ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸಂತೆಕಟ್ಟೆ, ನೇಜಾರು, ಮೂಡುತೋನ್ಸೆ, ಕೋಡಿಬೆಂಗ್ರೆ, ಗೋಪಾಲಪುರ, […]

ವನ್ಯಜೀವಿ ಸಪ್ತಾಹ ಪ್ರಯುಕ್ತ ವಿವಿಧ ಸ್ಪರ್ಧೆ

ಉಡುಪಿ: ವನ್ಯಜೀವಿ ಸಪ್ತಾಹ ಅಂಗವಾಗಿ ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ ಕಾರ್ಕಳ ಪೆರ್ವಾಜೆಯ ಸುಂದರ ಪುರಾಣಿಕ ಸ್ಮಾರಕ ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ವಿವಿಧ ವಲಯ ಮಟ್ಟಗಳ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಪರಿಸರ, ವನ್ಯಜೀವಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವ ವಿವಿಧ ಸ್ಫರ್ಧೆಗಳು ರವಿವಾರ ನಡೆಯಿತು. ಕರ್ನಾಟಕ ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷ ಮಣಿರಾಜ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ವನ್ಯಜೀವಿ ಸಪ್ತಾಹ ಕಾರ್ಯಕ್ರಮಗಳ ಮಹತ್ವ, ವನ್ಯಜೀವಿ, ಪರಿಸರ ಸಂರಕ್ಷಣೆ ಕುರಿತು ಮಾಹಿತಿ ನೀಡಿದರು. ಮಂಗಳೂರು ವೃತ್ತ ಮುಖ್ಯ ಅರಣ್ಯ […]

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ನ 82 ಶಾಸಕರ ರಾಜೀನಾಮೆಯಿಂದ ಅಧ್ಯಕ್ಷರಿಗೆ ಇಕ್ಕಟ್ಟು

ಜೈಪುರ: ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರಿಗೆ ನಿಷ್ಠರಾಗಿರುವ 82 ಶಾಸಕರು ಭಾನುವಾರ ರಾತ್ರಿ ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿದ ನಂತರ ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ಸ್ಫೋಟಗೊಂಡಿದೆ. ಜುಲೈ 2020 ರಲ್ಲಿ ಗೆಹ್ಲೋಟ್ ಸರ್ಕಾರದ ವಿರುದ್ಧ ಬಂಡಾಯವೆದ್ದವರಿಂದ ಹೊಸ ರಾಜಸ್ಥಾನ ಮುಖ್ಯಮಂತ್ರಿ ನೇಮಕವನ್ನು ಇತರ ಶಾಸಕರು ವಿರೋಧಿಸುತ್ತಿದ್ದಾರೆ. ಕಾಂಗ್ರೆಸ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಅಶೋಕ್ ಗೆಹ್ಲೋಟ್ ಗೆದ್ದರೆ ಸಚಿನ್ ಪೈಲಟ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂಬ ಊಹಾಪೋಹದ ನಂತರ ಈ ಬೆಳವಣಿಗೆ ಕಂಡುಬಂದಿದೆ. ಏತನ್ಮಧ್ಯೆ, ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ […]

ಕಡಿಯಾಳಿ ಶ್ರೀ ಮಹಿಷ ಮರ್ದಿನಿ ದೇವಸ್ಥಾನ: ನೂತನ ಶರ್ವಾಣಿ ಮಂಟಪ, ಯಾಗ ಶಾಲೆ ಲೋಕಾರ್ಪಣೆ

ಕಡಿಯಾಳಿ: ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ನೂತನ ಶರ್ವಾಣಿ ಮಂಟಪ ಮತ್ತು ಯಾಗ ಶಾಲೆಯು ಸೆಪ್ಟೆಂಬರ್ 26 ರಂದು ಸಂಜೆ 5:30 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಈ ಸಂದರ್ಭದಲ್ಲಿ ಸೋದೆ ಮಠಾಧೀಶರಾದ ವಿಶ್ವವಲ್ಲಭ ಶ್ರೀಪಾದರು ಉಪಸ್ಥಿತರಿದ್ದು, ಆಶೀರ್ವಚನ ನೀಡಲಿದ್ದಾರೆ. ನೂತನ ಶರ್ವಾಣಿ ಮಂಟಪವನ್ನು ಉಡುಪಿ ಶಾಸಕ ಕೆ‌. ರಘುಪತಿ ಭಟ್ ಉದ್ಘಾಟಿಸಲಿದ್ದಾರೆ. ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾಗೇಶ್ ಹೆಗ್ಡೆ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪುರುಷೋತ್ತಮ ಶೆಟ್ಟಿ, ಕರಾವಳಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಸಭಾ […]