ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ
ಕಿನ್ನಿಗೋಳಿ: ಇಲ್ಲಿನ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವವು ಸೆ.26 ರಿಂದ ಅ.5ರ ವರೆಗೆ ಜರಗಲಿದ್ದು ಪ್ರತೀ ದಿನ ಬೆಳಿಗ್ಗೆ 9:30 ರಿಂದ ಸರಸ್ವತಿ ಸದನದಲ್ಲಿ ಭಜನೆ, ಸಂಜೆ 5:30 ರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು, 7:30 ರಿಂದ ಯಕ್ಷಗಾನ ಬಯಲಾಟ ಪ್ರದರ್ಶನ ಜರಗಲಿದೆ ಎಂದು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಸನತ್ ಕುಮಾರ್ ಶೆಟ್ಟಿ ಕೊಡೆತ್ತೂರು ಗುತ್ತು ಮತ್ತು ಅನುವಂಶಿಕ ಮೊಕ್ತೇಸರ ಕೆ. ವಾಸುದೇವ ಅಸ್ರಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೂಡೆ: ಈಜಲು ಹೋದ ವಿದ್ಯಾರ್ಥಿಗಳು ಸಮುದ್ರ ಪಾಲು
ಹೂಡೆ: ಇಲ್ಲಿನ ಸಮುದ್ರದಲ್ಲಿ ಈಜಾಡಲೆಂದು ತೆರಳಿದ್ದ ಮಣಿಪಾಲ ಎಂಐಟಿಯ 15 ವಿದ್ಯಾರ್ಥಿಗಳ ತಂಡದಿಂದ ಮೂವರು ವಿದ್ಯಾರ್ಥಿಗಳು ಸಮುದ್ರ ಪಾಲಾದ ಘಟನೆ ಸೋಮವಾರ ಸಂಜೆ ಸಂಭವಿಸಿದೆ. ಸಂಜೆ 5.30 ರಿಂದ 6 ಗಂಟೆಯೊಳಗೆ ಈ ಘಟನೆ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ಅಧಿಕ್ಷಕ ಹಾಕೆ ಅಕ್ಷಯ್ ತಿಳಿಸಿದ್ದಾರೆ. ಸಮುದ್ರದಲ್ಲಿ ಈಜಾಡುತ್ತಿದ್ದ ಸಂದರ್ಭ, ಅಲೆಯ ರಭಸಕ್ಕೆ ಸಿಲುಕಿದ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಇವರನ್ನು ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. ಸ್ಥಳೀಯರ ಪ್ರಕಾರ ಇಬ್ಬರ […]
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನಾಡಹಬ್ಬ ದಸರಾ ಉದ್ಘಾಟನೆ
ಮೈಸೂರು: ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಡಹಬ್ಬ ದಸರಾ ಉದ್ಘಾಟನೆಗಾಗಿ ನಗರಕ್ಕಾಗಮಿಸಿದ್ದು, ಇವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆದರದಿಂದ ಬರಮಾಡಿಕೊಂಡರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಚಾಮುಂಡಿ ತಾಯಿಯ ಎದುರು ದೀಪ ಬೆಳಗಿ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಹಬ್ಬಕ್ಕೆ ವಿದ್ಯುಕ್ತ ಚಾಲನೆ ನೀಡಿದರು. President Droupadi Murmu inaugurates #MysuruDasara Festival at Chamundi Hills, Karnataka.@MinOfCultureGoI @kishanreddybjp @MIB_India @PIB_India @CBC_MIB @PIBBengaluru […]
ಒಣ ಕಸದಿಂದ ಆಟಿಕೆಗಳನ್ನು ತಯಾರಿಸುವ ವಿಶಿಷ್ಟ ಸ್ಪರ್ಧೆ: ಸ್ವಚ್ಛ ಟಾಯ್‌ಕಥಾನ್
ನವದೆಹಲಿ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಕಸದಿಂದ ರಸ ಪರಿಕಲ್ಪನೆಯ ‘ಸ್ವಚ್ಛ ಟಾಯ್‌ಕಥಾನ್’ ಅನ್ನು ಸೋಮವಾರದಿಂದ ಪ್ರಾರಂಭಿಸಲಿದ್ದು, ಇದು ತ್ಯಾಜ್ಯದಿಂದ ಆಟಿಕೆಗಳನ್ನು ತಯಾರಿಸುವ ವಿಶಿಷ್ಟ ಸ್ಪರ್ಧೆಯಾಗಿದೆ. ಒಣ ತ್ಯಾಜ್ಯವನ್ನು ಬಳಸಿಕೊಂಡು ಆಟಿಕೆ ವಿನ್ಯಾಸಗಳಲ್ಲಿ ಹೊಸತನವನ್ನು ಹೊರತರಲು ಸ್ಪರ್ಧೆಯು ವ್ಯಕ್ತಿಗಳು ಮತ್ತು ಗುಂಪುಗಳಿಗೆ ಮುಕ್ತವಾಗಿರುತ್ತದೆ. ಒಣ ಕಸದಿಂದ ಆಟಿಕೆಗಳನ್ನು ತಯಾರಿಸುವ ವ್ಯಕ್ತಿ ಅಥವಾ ಸಂಸ್ಥೆಗಳು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಸಮರ್ಥ ವಿನ್ಯಾಸಗಳು ಮತ್ತು ಕನಿಷ್ಠ ಸುರಕ್ಷತಾ ಮಾನದಂಡಗಳನ್ನು ಅನುಸರಿಸುವ ಆಟಿಕೆಗಳ ಮೇಲೆ ಸ್ಪರ್ಧೆಯು ಗಮನ ಕೇಂದ್ರೀಕರಿಸಿದೆ. […]
ಧಾರೇಶ್ವರ ಯಕ್ಷ ಬಳಗದ 8ನೇ ವರ್ಷದ ತಾಳಮದ್ದಲೆ ಸಪ್ತಾಹ ಸಮಾರೋಪ ಸಮಾರಂಭ
ಉಡುಪಿ: ಧಾರೇಶ್ವರ ಯಕ್ಷ ಬಳಗ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೈಂದೂರಿನ ನಾಗೂರು ಒಡೆಯರಮಠ ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಸೆ.18ರಿಂದ 24ರವರೆಗೆ ನಡೆದ 8ನೇ ವರ್ಷದ ತಾಳಮದ್ದಲೆ ಸಪ್ತಾಹದ ಸಮಾರೋಪ ಸಮಾರಂಭವು ಶನಿವಾರದಂದು ನಡೆಯಿತು. ಕರ್ನಾಟಕ ಜಾನಪದ ಪರಿಷತ್ತಿನ ಉಡುಪಿ ಜಿಲ್ಲಾಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಮಾತನಾಡಿ, ಯಕ್ಷಗಾನದ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರು ಯಕ್ಷಗಾನ ಕಲಾರಂಗಕ್ಕೆ ನೀಡಿದ ಕೊಡುಗೆ ಅವಿಸ್ಮರಣೀಯ. ಅವರ ಕಲಾ ಸೇವೆ ಯಕ್ಷಗಾನ ರಂಗಕ್ಕೆ ಹಾಗೂ ಅಭಿಮಾನಿಗಳಿಗೆ ಇನ್ನಷ್ಟು ಕಾಲ ಸಿಗುವಂತಾಗಬೇಕು ಎಂದರು. […]