ಇ-ಕಾಮರ್ಸ್ ಡೆಲಿವರಿ ವಂಚನೆ: ಲ್ಯಾಪ್‌ಟಾಪ್, ಸ್ಮಾರ್ಟ್ ಫೋನ್ ಗಳ ಬದಲಿಗೆ ಬರುತ್ತಿವೆ ಡಿಟರ್ಜೆಂಟ್ ಸೋಪುಗಳು!

ಮುಂಬೈ: ದೇಶದಲ್ಲಿ ಹಬ್ಬದ ವಾತಾವರವಿದ್ದು, ಅಮೆಜಾನ್ ಮತ್ತು ಫ್ಲಿಪ್ ಕಾರ್ಟ್ ನಂತಹ ಇ ಕಾಮರ್ಸ್ ಕಂಪನಿಗಳು ಎಲ್ಲಾ ಉತನ್ನಗಳನ್ನು ರಿಯಾಯತಿ ದರದಲ್ಲಿ ಮಾರುತ್ತಿದ್ದು, ಈ ಕಂಪನಿಗಳ ಮೂಲಕ ಉತ್ಪನ್ನಗಳನ್ನು ಆರ್ಡರ್ ಮಾಡುವ ಗ್ರಾಹಕರಿಗೆ ಉತ್ಪನ್ನಗಳ ಬದಲಿಗೆ ಡಿಟರ್ಜೆಂಟ್ ಸೂಪುಗಳು, ಕಲ್ಲು, ಬಟಾಟೆ ಮುಂತಾದ ವಸ್ತುಗಳು ಪೂರೈಕೆಯಾಗುತ್ತಿವೆ ಎಂದು ಮಾಧ್ಯಮ ವರದಿಗಳಾಗಿವೆ. ಮುಂಬೈನ ಸಯನ್ ನಿವಾಸಿಯೊಬ್ಬರು ಇತ್ತೀಚೆಗೆ ಅಮೆಜಾನ್ ಗ್ರೇಟ್ ಇಂಡಿಯನ್ ಸೇಲ್‌ನಲ್ಲಿ ರೂ 54,999 ಮೌಲ್ಯದ ವನ್ ಪ್ಲಸ್ 10ಟಿ 5ಜಿ ಸ್ಮಾರ್ಟ್ ಫೋನ್ ಅನ್ನು ಆರ್ಡರ್ […]

ದೇಶದಲ್ಲಿ ಸಂಸ್ಕೃತ ಮಾತನಾಡುವ ಜನಸಂಖ್ಯೆ ಕೇವಲ 24,821! ಅಳಿವಿನಂಚಿನಲ್ಲಿದೆ ಭಾರತದ ದೇವ ಭಾಷೆ

ನವದೆಹಲಿ: ಕೇಂದ್ರ ಗೃಹ ಸಚಿವಾಲಯದ ರಿಜಿಸ್ಟ್ರಾರ್ ಜನರಲ್ ಮತ್ತು ಜನಗಣತಿ ಆಯುಕ್ತರ ಕಚೇರಿಯ ಭಾಷಾ ವಿಭಾಗವು ಆಗ್ರಾ ಮೂಲದ ಶಸ್ತ್ರಚಿಕಿತ್ಸಕ ಮತ್ತು ಸಾಮಾಜಿಕ ಕಾರ್ಯಕರ್ತ ಡಾ. ದೇವಾಶಿಶ್ ಭಟ್ಟಾಚಾರ್ಯ ಅವರು ಸಲ್ಲಿಸಿದ ಆರ್‌ಟಿಐ ಅರ್ಜಿಗೆ ಉತ್ತರವಾಗಿ ಈ ಮಾಹಿತಿಯನ್ನು ಬಹಿರಂಗಪಡಿಸಿದೆ. ಡಾ.ಭಟ್ಟಾಚಾರ್ಯ ಅವರು ಪಡೆದ ಮಾಹಿತಿಯ ಪ್ರಕಾರ, 2011 ರ ಜನಗಣತಿಯ ಪ್ರಕಾರ, ಭಾರತೀಯ ಜನಸಂಖ್ಯೆಯ ಶೇಕಡಾ 0.002 ರಷ್ಟು ಜನರು ಮಾತ್ರ ಸಂಸ್ಕೃತವನ್ನು ಮಾತನಾಡುತ್ತಾರೆ. ಡಾ.ಭಟ್ಟಾಚಾರ್ಯರ ಪ್ರಕಾರ, ಸಂವಿಧಾನದಲ್ಲಿ ಸಂಸ್ಕೃತವನ್ನು ಅಲ್ಪಸಂಖ್ಯಾತ ಭಾಷೆ ಎಂದು ಪಟ್ಟಿ […]

ಸಹಾಯಕ ಲೆಕ್ಕ ಪರಿಶೋಧನಾ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಸಿಬ್ಬಂದಿ ನೇಮಕಾತಿ ಆಯೋಗದ ವತಿಯಿಂದ ಸಹಾಯಕ ಲೆಕ್ಕ ಪರಿಶೋಧನಾ ಅಧಿಕಾರಿ ಮತ್ತು ಸಹಾಯಕ ಲೆಕ್ಕ ಪತ್ರ ಅಧಿಕಾರಿ ನೇಮಕಾತಿಗೆ ವೆಬ್‌ಸೈಟ್ www.ssckkr.kar.nic.in ಮತ್ತು https://ssc.nic.in ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಪದವಿಗಳಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನೋಂದಾಯಿಸಲು ಅಕ್ಟೋಬರ್ 8 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ 080-25502520, 9483862020 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರಾರಸಾ ನಿಗಮದಿಂದ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸ್

ಉಡುಪಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಾತ್ರ ಉಚಿತ ಬಸ್ಸು ಪಾಸುಗಳನ್ನು ಸರ್ಕಾರದ ಇಡಿಸಿಎಸ್ ಇಲಾಖೆಯ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ವಿತರಣೆ ಮಾಡುತ್ತಿದೆ. ಕರ್ನಾಟಕ ರಾಜ್ಯ ನೋಂದಾಯಿತ ಕಾರ್ಮಿಕರು ಯಾವುದೇ ಜಿಲ್ಲೆಯಲ್ಲಿ ನೋಂದಣಿಯಾಗಿದ್ದರೂ ಸಹ ಅವರು ಇಚ್ಚಿಸುವ ಪಾಸಿನಲ್ಲಿ ನಮೂದಿಸಲಾಗುವ ಪ್ರಾರಂಭಿಕ ಸ್ಥಳದಿಂದ 07 ಹಂತಗಳವರೆಗೆ(ಗರಿಷ್ಟ 45 ಕಿ.ಮೀ) […]

ಕೊಲ್ಲೂರು ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಲ್ಲಿ ನಿರ್ಬಂಧಿತ ಚಟುವಟಿಕೆ ಕೈಗೊಳ್ಳದಿರುವಂತೆ ಮೆಸ್ಕಾಂ ಸೂಚನೆ

ಕೊಲ್ಲೂರು: ಕುಂದಾಪುರ ವಿಭಾಗದ ಬೈಂದೂರು ಉಪವಿಭಾಗದ ಗೋಳಿಹೊಳೆ ಗ್ರಾಮದ ಹಾಲ್ಕಲ್ ಎಂಬಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕೊಲ್ಲೂರು ವಿದ್ಯುತ್ ಉಪಕೇಂದ್ರಕ್ಕೆ, ವಿದ್ಯುತ್ ಪೂರೈಕೆ ಸಲುವಾಗಿ ನಾವುಂದ ವಿದ್ಯುತ್ ಉಪಕೇಂದ್ರದಿಂದ ನಿರ್ಮಾಣಗೊಂಡಿರುವ 20.84 ಕಿ.ಮೀ ಉದ್ದದ 33 ಕೆವಿ ವಿದ್ಯುತ್ ಮಾರ್ಗವು ಸೆಪ್ಟಂಬರ್ 29 ರ ನಂತರ ಯಾವುದೇ ದಿನದಲ್ಲಿ ಚೇತನಗೊಳ್ಳಲಿರುವುದು. ಆದುದರಿಂದ ಕೊಲ್ಲೂರು ಹೊಸ ವಿದ್ಯುತ್ ಉಪಕೇಂದ್ರಕ್ಕೆ ವಿದ್ಯುತ್ ಸರಬರಾಜಾಗುವ ಮಾರ್ಗವು ಹಾದುಹೋಗುವ ಹೇರೂರು, ನಾವುಂದ, ಉಳ್ಳೂರು-11, ಉಪ್ರಳ್ಳಿ, ಕಂಬದಕೋಣೆ, ಶೇಡಿಗುಡ್ಡೆ, ಹೇರಂಜಾಲು, ಕಾಲ್ತೋಡು, ಬಲಗೋಣ, ಅರೆಶಿರೂರು, ಎಲ್ಲೂರು, […]