ಪದವೀಧರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ಡಿ-ಸಿಇಟಿ, ಪಿಜಿ-ಸಿಇಟಿ, ನೀಟ್ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಬ್ಯಾಚುಲರ್ ಆಫ್ ಆರ್ಕಿಟೆಕ್ಟರ್, ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಎಸ್.ಸಿ ಇನ್ ಹರ‍್ಟಿಕಲ್ಚರ್, ಅಗ್ರಿಕಲ್ಚರಲ್ ಇಂಜಿನಿಯರಿಂಗ್, ಡೈರಿ ಟೆಕ್ನಾಲಜಿ, ಫಾರೆಸ್ಟ್ರಿ, ವೆಟರ‍್ನರಿ ಎಂಡ್ ಅನಿಮಲ್ ಟೆಕ್ನಾಲಜಿ, ಫಿಶರೀಸ್, ಸೆರಿಕಲ್ಚರ್, ಹೋಮ್/ ಕಮ್ಯುನಿಟಿ ಸೈನ್ಸಸ್, ಫುಡ್ ನ್ಯುಟ್ರಿಷನ್ ಎಂಡ್ ಡಯಟಿಕ್ಸ್, ಬಿ.ಫಾರ್ಮಾ, […]

ಮಂಗಳೂರು: ಪ್ರಪ್ರಥಮ ಬಾರಿಗೆ ಮಂಗಳಮುಖಿಯರಿಂದ ದಸರಾ ಕಾರ್ಯಕ್ರಮದಲ್ಲಿ ನೃತ್ಯ ಪ್ರದರ್ಶನ

ಮಂಗಳೂರು: ಇದೇ ಮೊದಲ ಬಾರಿಗೆ ಮೂವರು ಮಂಗಳಮುಖಿಯರಿಗೆ ದಸರಾ ಉತ್ಸವದಲ್ಲಿ ನೃತ್ಯಪ್ರದರ್ಶನ ನೀಡುವ ಅವಕಾಶ ದೊರೆತಿದೆ. ಬೋಳಾರದ ಹಳೇಕೋಟೆ ಶ್ರೀ ಮಾರಿಯಮ್ಮ ಗುಡಿಯಲ್ಲಿ ಸೋಮವಾರದಂದು ನಡೆದ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ‘ದೇವಾ ಶ್ರೀ ಗಣೇಶಾ’ ಎಂಬ ಹಾಡಿಗೆ ನೃತ್ಯ ಮಾಡುವ ಅವಕಾಶ ನೀಡಲಾಗಿದೆ. ಪ್ರಿಯಾ ಶ್ಯಾಮ್, ಸಂಧ್ಯಾ ಮತ್ತು ರೇಖಾ ಎನ್ನುವ ಮೂವರು ಮಂಗಳಮುಖಿಯರು ಬಾಲಿವುಡ್ ಶೈಲಿಯ ನೃತ್ಯವನ್ನು ಸುಸಾನ್ ಮಿಸ್ಕಿತ್ ಅವರ ಬಳಿ ಕಲಿಯುತ್ತಿದ್ದಾರೆ. ಇಷ್ಟು ದೊಡ್ಡ ವೇದಿಕೆಯಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಅವಕಾಶ ದೊರೆತಿರುವುದಕ್ಕಾಗಿ […]

ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಮುಂದಿನ ಸಿಡಿಎಸ್

ನವದೆಹಲಿ: ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ (ನಿವೃತ್ತ) ಅವರನ್ನು ಮುಂದಿನ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಆಗಿ ನೇಮಿಸಲಾಗಿದೆ ಎಂದು ಭಾರತ ಸರ್ಕಾರ ಬುಧವಾರ ತಿಳಿಸಿದೆ. ಅವರು ಭಾರತ ಸರ್ಕಾರದ ಮಿಲಿಟರಿ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಹೇಳಿದೆ. ಡಿಸೆಂಬರ್ 2021 ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರ ಮರಣದ ಒಂಬತ್ತು ತಿಂಗಳ ನಂತರ ಚೌಹಾಣ್ ಅವರನ್ನು ಸಿಡಿಎಸ್ ಆಗಿ ನೇಮಿಸಲಾಗಿದೆ. ಚೌಹಾಣ್ ರವರು ನ್ಯಾಷನಲ್ […]

ಅಕ್ಟೋಬರ್ 4 ರಂದು ಸರಕಾರಿ ವಾಹನಗಳ ಆಯುಧಪೂಜಾ ಕಾರ್ಯಕ್ರಮ

ಉಡುಪಿ: ಜಿಲ್ಲಾ ಸರಕಾರಿ ವಾಹನ ಚಾಲಕರ ಕೇಂದ್ರ ಸಂಘದ ವತಿಯಿಂದ ಅಕ್ಟೋಬರ್ 4 ರಂದು ಬೆಳಗ್ಗೆ 8 ಗಂಟೆಗೆ ಅಜ್ಜರಕಾಡು ಸಾರಥಿ ಭವನದಲ್ಲಿ ಗಣಹೋಮ ಹಾಗೂ ಎಲ್ಲಾ ಸರಕಾರಿ ವಾಹನಗಳಿಗೆ ಆಯುಧಪೂಜಾ ಕಾರ್ಯಕ್ರಮ ನಡೆಯಲಿದ್ದು, ಸಂಘದ ಸದಸ್ಯರು ತಮ್ಮ ವಾಹನಗಳೊಂದಿಗೆ ಭಾಗವಹಿಸಬಹುದಾಗಿದೆ ಎಂದು ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾಥಮಿಕ ಆರೋಗ್ಯ ಕೇಂದ್ರದ ಶಿಶುಪಾಲನ ಕೇಂದ್ರ ಉದ್ಘಾಟನೆ

ಉಡುಪಿ: ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಮತ್ತು ರೋಟರಿ ಕ್ಲಬ್ ಅಂಬಲಪಾಡಿ ಇವರ ಸಹಯೋಗದಲ್ಲಿ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿರ್ಮಿಸಿರುವ ಶಿಶುಪಾಲನಾ ಕೇಂದ್ರವನ್ನು ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿ, ಪೂರ್ಣ ಪ್ರಮಾಣದಲ್ಲಿ ಇದರ ಉಪಯೋಗ ಆಗಲಿ ಎಂದು ಶುಭ ಹಾರೈಸಿದರು. ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟದ ಕಾರ್ಯದರ್ಶಿ ವಸಂತಿ ರಾವ್ ಕೊರಡ್ಕಲ್ ಪ್ರಾಸ್ತವಿಕ ನುಡಿಗಳನ್ನಾಡಿದರು. […]