ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದದ ಮಿಥುನ್ ರೈ ಬಾಲಿಷ ಹೇಳಿಕೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ತನ್ನ ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿರುವ ಪುಂಡ ಪುಡಾರಿ ರಾಜಕಾರಿಣಿ ಮಿಥುನ್ ರೈ ಅವರಿಗೆ ಕ್ರಿಯಾಶೀಲ ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರ ಬಗ್ಗೆ ಮಾತನಾಡಲು ಕವಡೆ ಕಾಸಿನ ಕಿಮ್ಮತ್ತೂ ಇಲ್ಲ. ತನ್ನ ಕಾರ್ಯಕ್ಷಮತೆಯಿಂದ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿರುವ ಶೋಭಾ ಕರಂದ್ಲಾಜೆಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ ಅಪ್ರಬುದ್ಧ ರಾಜಕಾರಿಣಿ ಮಿಥುನ್ ರೈ ಅವರ ಸಚಿವೆ ಶೋಭಾ ವಿರುದ್ಧ ನೀಡಿದ ಬಾಲಿಷ ಹೇಳಿಕೆ ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ […]
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮೂರು ತಿಂಗಳು ವಿಸ್ತರಣೆ

ನವದೆಹಲಿ: ಕೇಂದ್ರ ಸಚಿವ ಸಂಪುಟವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು ಈ ವರ್ಷದ ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗೆ ಇನ್ನೂ ಮೂರು ತಿಂಗಳವರೆಗೆ ವಿಸ್ತರಿಸಿದೆ. ಮುಂದಿನ ಮೂರು ತಿಂಗಳ ಅವಧಿಯಲ್ಲಿ 44 ಸಾವಿರದ 762 ಕೋಟಿ ರೂಪಾಯಿ ಯೋಜನೆಗಾಗಿ ವೆಚ್ಚವಾಗಲಿದೆ. ಈ ಯೋಜನೆಯಡಿ ಈವರೆಗೆ ಸುಮಾರು ಮೂರು ಲಕ್ಷದ 45 ಸಾವಿರ ಕೋಟಿ ರೂಪಾಯಿಗಳನ್ನು ಸರ್ಕಾರ ಖರ್ಚು ಮಾಡಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು […]