ಉಡುಪಿ: ಬೆಸ್ಟ್ ಅಕಾಡೆಮಿ ಉದ್ಘಾಟನೆ
ಉಡುಪಿ: ಯುವಜನರು ಮತ್ತು ವಿದ್ಯಾರ್ಥಿಗಳು ಸಾಂಪ್ರದಾಯಿಕ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಬೇಕು ಎಂದು ಉಡುಪಿ ರಾಮಭವನ ಹೋಟೆಲ್ ನ ಮಾಲಕ ವಿಶ್ವನಾಥ್ ಶೆಣೈ ಹೇಳಿದರು. ಬೆಸ್ಟ್ ಅಕಾಡೆಮಿಯು ಗುಣಮಟ್ಟದ ಶಿಕ್ಷಣದ ಜೊತೆಗೆ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕದಲ್ಲಿ ತರಬೇತಿಯನ್ನು ನೀಡುವ ಗುರಿಯನ್ನು ಹೊಂದಿದ್ದು ಸಂಸ್ಥೆ ಇನ್ನಷ್ಟು ಪ್ರಗತಿ ಕಾಣಲಿ ಎಂದು ಶುಭ ಹಾರೈಸಿ, ಕಂಪ್ಯೂಟರ್ ತರಬೇತಿ ಪಡೆದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿದರು. ಉಡುಪಿಯ ಅಲಂಕಾರ್ ಟಾಕೀಸ್ ಬಳಿ ಲಂಡನ್ ಆಪ್ಟಿಕಲ್ಸ್ ಮಹಡಿಯಲ್ಲಿರುವ ಸಂಸ್ಥೆಯು […]
ನಿಟ್ಟೆ: ಗ್ರಾಮ ಪಂಚಾಯತ್ ಸದಸ್ಯ, ಸಹಾಯಕ ಪ್ರಾಧ್ಯಾಪಕ ಸುರೇಶ್ ಶೆಟ್ಟರಿಗೆ ಡಾಕ್ಟರೇಟ್ ಪದವಿ
ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಹಾಗೂ ನಿಟ್ಟೆ ಗ್ರಾಮ ಪಂಚಾಯತ್ ಸದಸ್ಯ ಬಲಿಪಗುತ್ತು ಸುರೇಶ್ ಶೆಟ್ಟಿ ಅವರು ‘ಎಕ್ಸ್ಪರಿಮೆಂಟಲ್ ಇನ್ವೆಷ್ಟಿಗೇಷನ್ ಆ್ಯಂಡ್ ಆರ್ಟಿಫಿಷಿಯಲ್ ನ್ಯೂರಲ್ ನೆಟ್ವರ್ಕ್ ಮಾಡೆಲಿಂಗ್ ಆಫ್ ಸೈಕಲ್ ಬೈ ಸೈಕಲ್ ಫ್ಲಕ್ಚುವೇಷನ್ಸ್ ಇನ್ ಡ್ಯೂಯಲ್ ಪ್ಲಗ್ ಎಸ್ಐ ಇಂಜಿನ್’ ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಘೋಷಿಸಿದೆ. ನಿಟ್ಟೆ ತಾಂತ್ರಿಕ ಕಾಲೇಜಿನ ಉಪಪ್ರಾಂಶುಪಾಲ ಹಾಗೂ […]
ಬ್ರಹ್ಮಾವರ: ಮೂರ್ತೆದಾರರ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ
ಬ್ರಹ್ಮಾವರ: ಇಲ್ಲಿನ ಮೂರ್ತೆದಾರರ ಸೇವಾ ಸಹಕಾರಿ ಸಂಘದ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಶಂಕರ ಪೂಜಾರಿ ಕುಕ್ಕುಡೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಎನ್ ಕರ್ಕೇರಾ ಲೆಕ್ಕ ಪರಿಶೋಧನೆ ನಡೆಸಲಾದ ಆರ್ಥಿಕ ತಃಖ್ತೆಗಳು, ಅನುಪಾಲನಾ ವರದಿ, ಲಾಭಾಂಶ ವಿಂಗಡನೆ, ಬಜೆಟ್ ಮತ್ತು ಖರ್ಚು, 2021-22 ಸಾಲಿನ ಆಯ-ವ್ಯಯ ಪಟ್ಟಿ, ಹಾಗೂ 2022-23 ಸಾಲಿನ ಕಾರ್ಯಚಟುವಟಿಕೆ ಗಳನ್ನು ಮಂಡಿಸಿ ಸರ್ವಾನುಮತದಿಂದ ಅನುಮೋದನೆ ಪಡೆದುಕೊಂಡರು. ಸಂಘದ ಅಧ್ಯಕ್ಷ […]
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಅಕೌಂಟೆಂಟ್ ಹುದ್ದೆ ಖಾಲಿ
ಉಡುಪಿ: ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮದಡಿ ಉಡುಪಿಯ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದಲ್ಲಿ ಖಾಲಿ ಇರುವ ಅಕೌಂಟೆಂಟ್ -1 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ Udupi.nic.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಮಾಹೆ: ವಿಶ್ವ ರೇಬೀಸ್ ದಿನದ ಅಂಗವಾಗಿ ವೆಬಿನಾರ್ ಆಯೋಜನೆ
ಮಣಿಪಾಲ: ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಯು ಸೆ.28 ರಂದು ತನ್ನ 16 ನೇ ವಿಶ್ವ ರೇಬೀಸ್ ದಿನದ ಆಚರಣೆಯ ಅಂಗವಾಗಿ ವೆಬಿನಾರ್ ಒಂದನ್ನು ಆಯೋಜಿಸಿತ್ತು. ಮೊದಲ ರೇಬೀಸ್ ಲಸಿಕೆ ಅಭಿವೃದ್ಧಿ ಪಡಿಸಿದ ಮತ್ತು ಪ್ರಪಂಚದಾದ್ಯಂತ ರೋಗದ ಬಗ್ಗೆ ಜಾಗೃತಿ ಮೂಡಿಸಿದ ಮೈಕ್ರೋಬಯಾಲಜಿಯ ಪಿತಾಮಹ ಲೂಯಿಸ್ ಪಾಶ್ಚರ್ ಅವರ ಪುಣ್ಯತಿಥಿಯ ಅಂಗವಾಗಿ ಅವರ ಕೊಡುಗೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿಯ ರೇಬೀಸ್ ಘೋಷವಾಕ್ಯ ‘ಏಕ ಆರೋಗ್ಯ ಶೂನ್ಯ ಸಾವು’ ಎಂಬುದರ ಮೇಲೆ ಆಧಾರಿತವಾಗಿದ್ದು, […]