ಸುರತ್ಕಲ್ ಜಂಕ್ಷನ್ ಗೆ ಸಾವರ್ಕರ್ ವೃತ್ತ ಎಂದು ನಾಮಕರಣ: ಮನಪಾ ಅನುಮೋದನೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯು ಸುರತ್ಕಲ್‌ನಲ್ಲಿರುವ ಜಂಕ್ಷನ್‌ಗೆ ವಿನಾಯಕ ದಾಮೋದರ್ ಸಾವರ್ಕರ್ ವೃತ್ತ ಎಂದು ನಾಮಕರಣ ಮಾಡುವ ನಗರ ಯೋಜನೆ ಮತ್ತು ಸುಧಾರಣಾ ಸ್ಥಾಯಿ ಸಮಿತಿಯ ಶಿಫಾರಸನ್ನು ಅನುಮೋದಿಸಿದೆ. ನೂತನ ಮೇಯರ್ ಜಯಾನಂದ ಅಂಚನ್ ಅಧ್ಯಕ್ಷತೆ ವಹಿಸಿದ್ದ ಸಭೆಯಲ್ಲಿ ಅನುಮೋದನೆ ಪಡೆಯಲಾಯಿತು. ಮುಂದಿನ ಪಾಲಿಕೆ ಸಭೆಯಲ್ಲಿ ಸಭೆಯ ನಡಾವಳಿಗಳನ್ನು ಅಂಗೀಕರಿಸಲಾಗುವುದು ಮತ್ತು ನಂತರ, ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗುವುದು. ಜಂಕ್ಷನ್‌ಗೆ ಸಾವರ್ಕರ್ ಹೆಸರಿಡುವ ಕುರಿತು ಮಂಗಳೂರು ನಗರ ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಪಾಲಿಕೆಗೆ ಪ್ರಸ್ತಾವನೆ ಸಲ್ಲಿಸಿದ್ದರು. […]

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಸಾಲ ಸೌಲಭ್ಯ

ಉಡುಪಿ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಗಂಗಾಕಲ್ಯಾಣ ನೀರಾವರಿ ಯೋಜನೆ ಹಾಗೂ ಹೊಸತು ಮತ್ತು ನವೀಕರಣ ಅರಿವು ಶೈಕ್ಷಣಿಕ ಸಾಲ ಯೋಜನೆಯ ಸೌಲಭ್ಯ ಪಡೆಯಲು ಬೆಸ್ತ, ಅಂಬಿಗ, ಗಂಗಾಮತ, ಕಬ್ಬಲಿಗ, ಕೋಲಿ, ಮೊಗವೀರ ಮತ್ತು ಇದರ ಉಪ ಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 9 […]

ಕರಾವಳಿ ಸೊಗಡಿನ ಕಾಂತಾರಕ್ಕೆ ಪ್ರೇಕ್ಷಕರಿಂದ ಭರಪೂರ ಅಭಿನಂದನೆ: ರಿಷಭ್ ಶೆಟ್ಟಿ ಅಭಿನಯಕ್ಕೆ ಮನಸೋತ ಅಭಿಮಾನಿಗಳು

ಉಡುಪಿ: ಅಪ್ಪಟ ಕರಾವಳಿಯ ಸೊಗಡನ್ನು ಹೊಂದಿರುವ ಕಾಂತಾರಾ ಕನ್ನಡ ಚಲನಚಿತ್ರವು ಶುಕ್ರವಾರ ಬಿಡುಗಡೆಹೊಂದಿದ್ದು, ಚಿತ್ರವನ್ನು ವೀಕ್ಷಿಸಿದವರೆಲ್ಲರಿಂದಲೂ ಒಳ್ಳೆಯ ವಿಮರ್ಶೆಗಳು ಬಂದಿವೆ. ತುಳುನಾಡಿನ ಭೂತ ಕೋಲ ಮತ್ತು ಕಂಬಳಗಳನ್ನು ಚಿತ್ರಿಸಿರುವ ಈ ಸಿನಿಮಾವು ತುಳುವರಲ್ಲದವರ ಮನಸ್ಸನ್ನೂ ಸೂರೆಗೊಂಡಿರುವುದು ವಿಶೇಷ. ಬಂಡಾಯ ನಾಯಕ ಶಿವನ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿರುವ ರಿಷಭ್ ಶೆಟ್ಟಿ ಅಭಿನಯಕ್ಕೆ ಅಭಿಮಾನಿಗಳೆಲ್ಲಾ ಮನಸೋತಿದ್ದಾರೆ. ಈ ಚಿತ್ರದಲ್ಲಿ ಕಂಬಳ ಓಡಿಸುವುದನ್ನು ಡ್ಯೂಪ್ ಇಲ್ಲದೆ ತಾನೇ ನಿರ್ವಹಿಸಿರುವ ರಿಷಬ್ ಇದಕ್ಕಾಗಿ ತಮ್ಮ ಹುಟ್ಟೂರಿನಲ್ಲಿ ಹಲವು ದಿನಗಳ ಕಾಲ ಅಭ್ಯಾಸ […]

ದೇವರ ಕೋಲು ಮುಟ್ಟಿದ್ದಕ್ಕೆ ಹಲ್ಲೆಗೊಳಗಾದ ದಲಿತ ಬಾಲಕನ ಮನೆಗೆ ಸಮಾಜ ಕಲ್ಯಾಣ ಸಚಿವರ ಭೇಟಿ: ಪರಿಹಾರ ಘೋಷಣೆ

ಕೋಲಾರ: ದೇವರ ಉತ್ಸವದಲ್ಲಿ 14 ವರ್ಷದ ದಲಿತ ಬಾಲಕನೊಬ್ಬ ಉತ್ಸವ ಮೂರ್ತಿಯನ್ನು ಮುಟ್ಟಿದ ಎಂಬ ಕಾರಣಕ್ಕೆ ಆತನನ್ನು ಥಳಿಸಿ, ಆತನ ಕುಟುಂಬಕ್ಕೆ 60 ಸಾವಿರ ರೂಗಳ ದಂಡ ವಿಧಿಸಿರುವ ಘಟನೆ ಕೋಲಾರ ತಾಲೂಕಿನ ಟೇಕಲ್ ಬಳಿಯ ಉಳ್ಳೇರ ಹಳ್ಳಿಯಲ್ಲಿ ನಡೆದಿತ್ತು. ಭೂತಮ್ಮನ ಮೂರ್ತಿ ಉತ್ಸವದ ವೇಳೆ ಕೆಳಕ್ಕೆ ಬಿದ್ದ ದೇವರನ್ನು ಹೊರುವ ಗುಜ್ಜ ಕೋಲನ್ನು ದಲಿತ ಬಾಲಕನೊಬ್ಬ ಎತ್ತಿಕೊಟ್ಟಿದ್ದಕ್ಕೆ ಸಿಟ್ಟಾದ ಕೆಲವರು ಉತ್ಸವ ಮೂರ್ತಿಯನ್ನು ಮುಟ್ಟಿದ ಎಂದು ಆತನನ್ನು ಥಳಿಸಿದ್ದರು. ಬಾಲಕನ ಕುಟುಂಬಕ್ಕೆ 60 ಸಾವಿರ ರೂಗಳ […]

ಆದರ್ಶ ಆಸ್ಪತ್ರೆ ವತಿಯಿಂದ ವಿಶ್ವ ಹೃದಯ ದಿನ ಅಂಗವಾಗಿ ಮೆಗಾ ರ‍್ಯಾಲಿ

ಉಡುಪಿ: ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಉಡುಪಿ ಮತ್ತು ಜಿಲ್ಲಾ ಸರ್ವೇಕ್ಷಣಾ ಕಚೇರಿ ಉಡುಪಿ ಯ ಸಹಯೋಗದೊಂದಿಗೆ ಆದರ್ಶ ಆಸ್ಪತ್ರೆ ವತಿಯಿಂದ ವಿಶ್ವ ಹೃದಯ ದಿನ-2022 ರ ಅಂಗವಾಗಿ ಮೆಗಾ ರ‍್ಯಾಲಿಯು ಶನಿವಾರದಂದು ಬೆಳಗ್ಗೆ ನಡೆಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗಭೂಷಣ್ ಉಡುಪ, ಆದರ್ಶ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಜಿ.ಎಸ್ ಚಂದ್ರಶೇಖರ್, ಜಿಲ್ಲಾ ಸರ್ಜನ್ ಡಾ. ಮಧುಸೂಧನ್ ನಾಯಕ್, ಮತ್ತು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ […]