ಕ.ರಾ.ಮು.ವಿ ಕಲಿಕಾರ್ಥಿ ಸಹಾಯ ಕೇಂದ್ರ ತೆರೆಯಲು ಅರ್ಜಿ ಆಹ್ವಾನ
ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಉಡುಪಿ ಪ್ರಾದೇಶಿಕ ಕೇಂದ್ರ ವ್ಯಾಪ್ತಿಯ ನಗರ ಮತ್ತು ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕ.ರಾ.ಮು.ವಿ ಕಲಿಕಾರ್ಥಿ ಸಹಾಯ ಕೇಂದ್ರಗಳನ್ನು ತೆರೆಯಲು ವೆಬ್ಸೈಟ್ www.ksoumysuru.ac.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರ, ಬನ್ನಂಜೆ, ಉಡುಪಿ ದೂ.ಸಂಖ್ಯೆ: 0820- 2522247, 9972526647 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿರಿಯರ ಅನುಭವಪೂರಿತ ಮಾರ್ಗದರ್ಶನದಿಂದ ಜಿಲ್ಲೆಯ ಅಭಿವೃದ್ದಿಯ ಸಂಕಲ್ಪ: ಶಾಸಕ ರಘುಪತಿ ಭಟ್
ಉಡುಪಿ: ಭಾರತೀಯ ಸಂಸ್ಕೃತಿಯಲ್ಲಿ ಯಾವುದೇ ಕಾರ್ಯವನ್ನು ಮಾಡುವಾಗ ಹಿರಿಯರ ಆಶೀರ್ವಾದ ಪಡೆಯುವ ಸಂಸ್ಕೃತಿ ಇದೆ. ಹಿರಿಯರ ಅನುಭವಗಳು ಮುಂದಿನ ಪೀಳಿಗೆಗೆ ದಾರಿದೀಪವಿದ್ದಂತೆ. ಪ್ರಸ್ತುತ ಉಡುಪಿ ಜಿಲ್ಲಾ ರಜತ ಉತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು, ಜಿಲ್ಲೆಯಲ್ಲಿನ ಹಿರಿಯ ನಾಗರೀಕರ ಸಂಘಟನೆಗಳು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದು, ಜಿಲ್ಲೆಯ ಮುಂದಿನ ಅಭಿವೃದ್ಧಿಯ ಕುರಿತು ಜಿಲ್ಲೆಯ ಹಿರಿಯ ನಾಗರೀಕರು ತಮ್ಮ ಸಲಹೆ, ಅನುಭವಪೂರಿತ ಮಾರ್ಗದರ್ಶನಗಳನ್ನು ಜಿಲ್ಲಾಡಳಿತಕ್ಕೆ ನೀಡುವಂತೆ ಶಾಸಕ ಕೆ. ರಘುಪತಿ ಭಟ್ ಹೇಳಿದರು. ಅವರು ಶನಿವಾರದಂದು ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜಿನ ರವೀಂದ್ರ ಕಲಾ […]
ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆಗಾಗಿ ಸಂಚಾರಿ ಕ್ಲಿನಿಕ್ ಉದ್ಘಾಟನೆ
ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಇವರ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವರ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆ ಒದಗಿಸುವ ಸಂಚಾರಿ ಆರೋಗ್ಯ ಕ್ಲಿನಿಕ್ ಯೋಜನೆಗೆ ಶುಕ್ರವಾರ ನಗರಸಭೆಯ ಆವರಣದಲ್ಲಿ ಶಾಸಕ ಕೆ.ರಘುಪತಿ ಭಟ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಶ್ಮೀ ಮಂಜುನಾಥ್, ಪೌರಾಯುಕ್ತ ಡಾ. ಉದಯ್ ಕುಮಾರ್ […]
ಭಾಸ್ಕರ ರೈ ಕುಕ್ಕುವಳ್ಳಿ ಅವರಿಗೆ ಸನ್ಮಾನ
ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಯಕ್ಷಗಾನ ಅರ್ಥಧಾರಿ ಭಾಸ್ಕರ ರೈ ಕುಕ್ಕುವಳ್ಳಿ ಇವರಿಗೆ ‘ತುಳುನಾಡ್ದ ಬರವುದ ಬಿರ್ಸೆರ್’ ಎಂಬ ಬಿರುದು ನೀಡಿ ಸನ್ಮಾನಿಸಲಾಯಿತು. ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ್ ಜಿ ಕತ್ತಲ್ ಸಾರ್, ಅಕಾಡೆಮಿಯ ಸದಸ್ಯರಾದ ಮಲ್ಲಿಕಾ ಅಜಿತ್ ಶೆಟ್ಟಿ, ಲೀಲಾಕ್ಷ ಕರ್ಕೇರ ಉಪಸ್ಥಿತರಿದ್ದರು.
ಕಾಪು: ಸಮಾಜ ಸೇವಾ ವೇದಿಕೆ ವತಿಯಿಂದ ಪೊಲೀಸ್ ಠಾಣಾ ಕಟ್ಟಡದ ನವೀಕರಣಕ್ಕೆ 70 ಚೀಲ ಸಿಮೆಂಟ್ ನೆರವು
ಕಾಪು: ಇಲ್ಲಿನ ಸಮಾಜ ಸೇವಾ ವೇದಿಕೆ ವತಿಯಿಂದ ಕಾಪು ಪೊಲೀಸ್ ಠಾಣಾ ಕಟ್ಟಡದ ನವೀಕರಣಕ್ಕಾಗಿ, ಸ್ಲ್ಯಾಪ್ ನಿರ್ಮಾಣ ಮಾಡಲು ಸಿಮೆಂಟ್ ಅಗತ್ಯತೆಯನ್ನು ಮನಗಂಡ ಸಮಾಜ ಸೇವಾ ವೇದಿಕೆಯು, ಅಧ್ಯಕ್ಷ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರ ನೇತೃತ್ವದಲ್ಲಿ ಪೊಲೀಸ್ ಠಾಣೆಗೆ 70 ಚೀಲ ಸಿಮೆಂಟ್ ನೀಡಿದೆ. ಸಿಮೆಂಟ್ ಚೀಲಗಳನ್ನು ಕಾಪು ಠಾಣಾಧಿಕಾರಿ ಪಿ.ಎಸ್.ಐ ಶ್ರೀ ಶೈಲ ಡಿ.ಎಂ ರವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಶೈಲ, ಸಮಾಜ ಸೇವಾ ವೇದಿಕೆಯ ಫಾರೂಕ್ ಚಂದ್ರನಗರ ನೇತೃತ್ವದಲ್ಲಿ ಕೋವಿಡ್ ಸಂದರ್ಭ […]