ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಎಂಟನೇ ದಿನದ ನವರಾತ್ರಿ ವಿಶೇಷಗಳು

ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಎಂಟನೇ ದಿನದ ನವರಾತ್ರಿ ವಿಶೇಷಗಳು ಬೆಳಿಗ್ಗೆ 9: 30 ರಿಂದ ದುರ್ಗಾಹೋಮ ಬೆಳಿಗ್ಗೆ 10.00ರಿಂದ “ಭಜನಾ ಕಾರ್ಯಕ್ರಮ” (ಶ್ರೀ ಲಕ್ಷ್ಮೀ ಚೆನ್ನಕೇಶವ ಭಜನಾ ಮಂಡಳಿ ಗಜಪುರ ಆನಗಳ್ಳಿ, ಕುಂದಾಪುರ ಇವರಿಂದ) ಮಧ್ಯಾಹ್ನ 12.00ಕ್ಕೆ ಮಹಾಪೂಜೆ, “ಭಜನಾ ಕಾರ್ಯಕ್ರಮ” (ಶ್ರೀ ರಾಮ ಭಜನಾ ಮಂಡಳಿ ಮಟಪಾಡಿ ಇವರಿಂದ) ಮಧ್ಯಾಹ್ನ 12:30ಕ್ಕೆ ಅನ್ನ ಸಂತರ್ಪಣೆ ಸಂಜೆ 5.00ರಿಂದ “ಭಜನಾ ಕಾರ್ಯಕ್ರಮ” (ಪಂಚವರ್ಣ ಮಹಿಳಾ ಭಜನಾ ಮಂಡಳಿ ಕೋಟ ಇವರಿಂದ) ಸಂಜೆ 7.00ರಿಂದ “ದಾಸ […]

ಭಾರತ್ ಜೋಡೋ ಯಾತ್ರೆ: ಕರ್ನಾಟಕಕ್ಕೆ ಆಗಮಿಸಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ

ಮೈಸೂರು: ಕಾಂಗ್ರೆಸ್ ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಅವರು ಅಕ್ಟೋಬರ್ 6 ರಂದು ಮಂಡ್ಯದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ. ಸೋನಿಯಾ ಗಾಂಧಿ ಅವರು ಮಡಿಕೇರಿಗೆ ತೆರಳಿ ಖಾಸಗಿ ರೆಸಾರ್ಟ್‌ನಲ್ಲಿ ತಂಗಲಿದ್ದಾರೆ ಎನ್ನಲಾಗಿದೆ. ಮೈಸೂರು ಭಾಗದ ಯಾತ್ರೆ ಮುಗಿಸಿ ಮಡಿಕೇರಿಯಲ್ಲಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲು ರಾಹುಲ್ ಗಾಂಧಿ ತೆರಳಲಿದ್ದಾರೆ. ಅಕ್ಟೋಬರ್ 6 ರಂದು ಭಾರತ್ ಜೋಡೋ ಯಾತ್ರೆಯನ್ನು […]

ಮಾಹೆ: ನರ್ಸಿಂಗ್ ವಿದ್ಯಾರ್ಥಿಗಳಿಂದ ರಕ್ತದಾನ ಶಿಬಿರ

ಮಣಿಪಾಲ: ರಾಷ್ಟ್ರೀಯ ಸ್ವಯಂಪ್ರೇರಿತ ರಕ್ತದಾನ ದಿನಾಚರಣೆ ಅಂಗವಾಗಿ ಮಾಹೆಯ ಕಾಲೇಜ್ ಆಫ್ ನರ್ಸಿಂಗ್ ನ ಆರೋಗ್ಯ ಮತ್ತು ಸಮಾಜ ಕಲ್ಯಾಣ ಸಮಿತಿ ವತಿಯಿಂದ ರಕ್ತದಾನ ಶಿಬಿರವನ್ನು ಅ. 01 ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಬ್ಲಡ್ ಬ್ಯಾಂಕ್‌ನಲ್ಲಿ ಆಯೋಜಿಸಲಾಗಿತ್ತು. ನರ್ಸಿಂಗ ವಿಭಾಗದ ಒಟ್ಟು 72 ವಿದ್ಯಾರ್ಥಿಗಳು, 8 ಶಿಕ್ಷಕರು ಮತ್ತು ಮಣಿಪಾಲ ಸಮೂಹ ಸಂಸ್ಥೆಯ ೧೦ ಸಿಬ್ಬಂದಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಆರೋಗ್ಯ ಮತ್ತು ಸಮಾಜ ಕಲ್ಯಾಣ ಸಮಿತಿ ವಿಭಾಗದ ಅಧ್ಯಕ್ಷೆ ನರ್ಸಿಂಗ್ ವಿದ್ಯಾರ್ಥಿನಿ ಅನುಷಾ ವರ್ಗೀಸ್ […]

ಶ್ರೀಕೃಷ್ಣನಿಗೆ ಮಹಿಷಮರ್ದಿನಿ ಅಲಂಕಾರ

ಉಡುಪಿ: ನವರಾತ್ರಿಯ ಪ್ರಯುಕ್ತ ಶ್ರೀಕೃಷ್ಣ ದೇವರಿಗೆ ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು “ಮಹಿಷಮರ್ದಿನೀ” ವಿಶೇಷ ಅಲಂಕಾರ ಮಾಡಿ ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಮಹಾಪೂಜೆ ನೆರವೇರಿಸಿದರು.

ಸ್ವಾತಂತ್ರ ಹೋರಾಟಗಾರರ ಜೀವನ ಯುವಕರಿಗೆ ಸ್ಪೂರ್ತಿದಾಯಕ: ಡಾ.ನಿರಂಜನ್ ಚಿಪ್ಳೂಣ್ಕರ್ ಅಭಿಪ್ರಾಯ

ನಿಟ್ಟೆ: ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರಂತಹ ಮಹಾನ್ ನಾಯಕರು ಹಾಕಿ ಕೊಟ್ಟ ಅಹಿಂಸಾ ಮಾರ್ಗ ಹಾಗೂ ಅವರ ಜೀವನ ಶೈಲಿಯು ಇಂದಿನ ಯುವಕರಿಗೆ ಸ್ಫೂರ್ತಿದಾಯಕವಾಗಿದೆ ಎಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಅಭಿಪ್ರಾಯಪಟ್ಟರು. ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಭಾನುವಾರದಂದು ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀಜಿಯವರ ಜಯಂತಿ ಸಮಾರಂಭ ಹಾಗೂ ಅದರ ಅಂಗವಾಗಿ ಸ್ವಚ್ಛ ಭಾರತ್ […]