ಪರಿಸರ ಸ್ನೇಹಿ ಗಾಂಧಿ ಭವನಕ್ಕೆ ಕೋಟ ಶ್ರೀನಿವಾಸ್ ಪೂಜಾರಿ ಅವರಿಂದ ಶಂಕುಸ್ಥಾಪನೆ

ಉಡುಪಿ: ಉಡುಪಿಯ ಅಜ್ಜರಕಾಡು ಭುಜಂಗ ಪಾರ್ಕ್ ಬಳಿ ನಿರ್ಮಿಸಲಾಗುತ್ತಿರುವ ಗಾಂಧಿ ಭವನ ಕಟ್ಟಡವು ಪರಿಸರ ಸ್ನೇಹಿಯಾಗಿದ್ದು, ರಾಜ್ಯಕ್ಕೆ ಮಾದರಿಯಾಗುವಂತೆ ನಿರ್ಮಾಣಗೊಳ್ಳಲಿ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಅಜ್ಜರಕಾಡು ಭುಜಂಗಪಾರ್ಕ್ ನಲ್ಲಿ , ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ವತಿಯಿಂದ ನಡೆದ ಗಾಂಧಿ ಭವನ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಸಾರ್ವಜನಿಕರಿಗೆ […]

ಸಾರ್ವಜನಿಕ ಶಾರದಾ ಮಹೋತ್ಸವ ಸಮಿತಿಯ 7ನೇ ವರ್ಷದ ಶಾರದಾ ಪೂಜೆ

ಉಡುಪಿ: ಸಾರ್ವಜನಿಕ ಶಾರದಾ ಮಹೋತ್ಸವ ಸಮಿತಿ ಉಡುಪಿ, ಉಡುಪಿ ದಸರಾ ಇದರ 7ನೇ ವರ್ಷದ ಶಾರದಾ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಪ್ರತಿಷ್ಠಾಪನೆಗೊಂಡ ಶಾರದಾ ಮಾತೆ ಪೂಜೆಯು ಸಮಿತಿಯ ಅಧ್ಯಕ್ಷ ಸುಪ್ರಸಾದ್ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ ಆದಿತ್ಯವಾರದಂದು ಶ್ರೀ ಕೃಷ್ಣ ಮಠದ ಹೊರಾವರಣದಲ್ಲಿ ನಡೆಯಿತು. ಶ್ರೀ ದೇವಿಯ ಸನ್ನಿದಿಯಲ್ಲಿ ಗಣಹೋಮ, ದುರ್ಗಾ ಹೋಮ ನಡೆಯಿತು. ಸಂಘದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.