ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆ ಇಲ್ಲ: ಕೇಂದ್ರ

ನವದೆಹಲಿ: ಕೇಂದ್ರ ಸರ್ಕಾರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸಲಿದೆ ಎಂದು ಮಾಧ್ಯಮಗಳಲ್ಲಿ ವರದಿಗಳು ಹರಿದಾಡುತ್ತಿದ್ದು, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದೊಂದಿಗೆ ಸರ್ಕಾರ ವಿಲೀನಗೊಳಿಸಬಹುದು ಎಂನ್ನುವ ಊಹಾಪೋಹಗಳನ್ನು ಹರಿಯಬಿಡಲಾಗಿತ್ತು. ಮಾಧ್ಯಮಗಳಲ್ಲಿ ವರದಿಯಾದ ವದಂತಿಗಳಿಗೆ ಸರ್ಕಾರವು ಅಂತ್ಯ ಹಾಡಿದ್ದು, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಪಡಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಸರ್ಕಾರವು ಸ್ಪಷ್ಟಪಡಿಸಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯವನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದ್ದು, ಮಾಧ್ಯಮ ವರದಿಗೆ ಪ್ರತಿಕ್ರಿಯೆಯಾಗಿ ಸರ್ಕಾರದಿಂದ ಈ […]

ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಭಂಡಾರಕಾರ್ಸ್ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ದರ್ಶನ್ 61 ಕೆಜಿ ವಿಭಾಗದಲ್ಲಿ ಸ್ವರ್ಣ ಪದಕ, ಆತ್ಮಕ್ 97 ಕೆಜಿ ಮೇಲ್ಪಟ್ಟ ವಿಭಾಗದಲ್ಲಿ ಬೆಳ್ಳಿ ಪದಕ, ಆಶ್ರಯ 97 ಕೆಜಿ ಮೇಲ್ಪಟ್ಟ ವಿಭಾಗದಲ್ಲಿ ಕಂಚಿನ ಪದಕ, ಸಮರ್ಥ 74 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಮುಡಿಗೇರಿಸಿಕೊಂಡಿರುತ್ತಾರೆ. ಈ ಮೂಲಕ ಜಿಲ್ಲಾ […]

ಉಡುಪಿ: ಸಾರ್ವಜನಿಕ ಶಾರದಾ ಮಹೋತ್ಸವ ಸಮಿತಿ ವತಿಯಿಂದ ಚಂಡಿಕಾಯಾಗ

ಉಡುಪಿ: ಇಲ್ಲಿನ ಕೃಷ್ಣ ಮಠದ ವಾಹನ ನಿಲುಗಡೆ ಪ್ರದೇಶದಲ್ಲಿ ಸಾರ್ವಜನಿಕ ಶಾರದಾ ಮಹೋತ್ಸವ ಸಮಿತಿ ಉಡುಪಿ ಇದರ 7ನೇ ವರ್ಷದ ಶಾರದಾ ಮಾತೆ ಸನ್ನಿಧಿಯಲ್ಲಿ ಅಧ್ಯಕ್ಷ ಸುಪ್ರಸಾದ್ ಶೆಟ್ಟಿ ಮಾರ್ಗದರ್ಶನದಲ್ಲಿ ಮಂಗಳವಾರದಂದು ಅರ್ಚಕ ವೃಂದದವರು ಚಂಡಿಕಾಯಾಗ ನಡೆಸಿಕೊಟ್ಟರು. ಸಾಮೂಹಿಕ ಪ್ರಾಥನೆ, ಚಂಡಿಕಾ ಯಾಗದ ಪೂರ್ಣಾಹುತಿ, ಮಹಾ ಪೂಜೆಯ ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಮಾರಂಭದಲ್ಲಿ ಲಕ್ಷ್ಮೀ ನಾರಾಯಣ ಮಟ್ಟು, ರಾಧಾಕೃಷ್ಣ ಮೆಂಡನ್, ತಾರಾ ಆಚಾರ್ಯ, ಸರೋಜಾ ರಾವ್, ಹರೀಶ್, ಸುರೇಶ್ ಶೇರಿಗಾರ್, ಸುಜಾತ, ಸತೀಶ್ ಕುಮಾರ್, ಮಹೇಶ್ […]

ಅಗ್ನಿಶಾಮಕ ದಳದ ಕಚೇರಿಯಲ್ಲಿ ಆಯುಧ ಪೂಜೆ

ಉಡುಪಿ: ಅಗ್ನಿಶಾಮಕ ದಳದ ಪ್ರಧಾನ ಕಚೇರಿಯಲ್ಲಿ ಜಿಲ್ಲಾ ಮುಖ್ಯಸ್ಥ ವಸಂತಕುಮಾರ್ ಮಾರ್ಗದರ್ಶನದಲ್ಲಿ ಆಯುಧ ಪೂಜೆ ನೆರವೇರಿತು. ಠಾಣಾಧಿಕಾರಿ ಸತೀಶ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಚಂಡಿಕಾಯಾಗ

ಉಡುಪಿ: ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಪರ್ವಕಾಲದ ದುರ್ಗಾಷ್ಟಮಿಯಂದು ಶ್ರೀ ದೇವಿಗೆ ವಿಶೇಷ ಅಲಂಕಾರ, ದೇವರ ಸನ್ನಿಧಿಯಲ್ಲಿ ಪುತ್ತೂರು ಶ್ರೀಶ ತಂತ್ರಿ ಗಳವರ ನೇತ್ರ್ವತದಲ್ಲಿ ಸಾಮೂಹಿಕ ಪ್ರಾರ್ಥನೆ, ಚಂಡಿಕಾ ಯಾಗ ನಡೆಯಿತು, ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಘವೇಂದ್ರ ಭಟ್, ಸದಸ್ಯರುಗಳಾದ ರವೀಂದ್ರ ಭಟ್, ಭಗವಾನ್ ದಾಸ್, ವಿಜಯ್ ಭಟ್ ಕಡೆಕಾರ್, ನಿತ್ಯಾನಂದ, ಕಿಶೋರ್ ಕುಮಾರ್, ಸುರೇಖಾ ಶೆಟ್ಟಿ, ವಿಮಲ ಶೇಟ್, ಸಂಜಯ್, ಅರ್ಚಕ ವೃಂದ, ಯುವಕ ಮಂಡಳಿಯ ಪದಾಧಿಕಾರಿಗಳು, ಊರಿನ ಹತ್ತು ಸಮಸ್ತರು […]