ಕೂಡಲ ಸಂಗಮ ಕ್ಷೇತ್ರದ ಕಾಮಗಾರಿ ಜನವರಿಯೊಳಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು: 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಐಕ್ಯ ಸ್ಥಳವಾದ ಕೂಡಲ ಸಂಗಮ ಕ್ಷೇತ್ರದ ಎಲ್ಲಾ ಕಾಮಗಾರಿಗಳನ್ನು 2023ರ ಜನವರಿಯೊಳಗೆ ಪೂರ್ಣಗೊಳಿಸುವಂತೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಸೂಚನೆ ನೀಡಿದ್ದಾರೆ. ಗುರುವಾರ ಇಲ್ಲಿ ನಡೆದ ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರದ 16ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಸವಣ್ಣ ಅಂತರಾಷ್ಟ್ರೀಯ ಕೇಂದ್ರದ ಕಟ್ಟಡ, ಡಿಜಿಟಲ್ ಕೇಂದ್ರ, ವಸ್ತುಪ್ರದರ್ಶನ ಹಾಗೂ ಕೂಡಲ ಸಂಗಮ ವಾಣಿಜ್ಯ ಸಂಕೀರ್ಣ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು. ಈ ಕಾಮಗಾರಿಗಳು ಬಸವಣ್ಣವರ ಬದುಕು, […]

ಭಾರತ್ ಜೋಡೋ ಯಾತ್ರೆ ಪೋಸ್ಟರ್‌ನಲ್ಲಿ ಸಾವರ್ಕರ್: ದುಷ್ಕರ್ಮಿಗಳ ಕೃತ್ಯ ಎಂದ ಕಾಂಗ್ರೆಸ್

ಮಂಡ್ಯ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯ ಪೋಸ್ಟರಿನಲ್ಲಿ ವಿನಾಯಕ ದಾಮೋದರ್ ಸಾವರ್ಕರ್ ಅವರ ಚಿತ್ರವನ್ನು ಹಾಕಲಾಗಿದ್ದು, ಕಾಂಗ್ರೆಸ್ ಪಕ್ಷವು ಇದು ಯಾರೋ ದುಷ್ಕರ್ಮಿಗಳ ಕೃತ್ಯ ಎಂದು ಆರೋಪಿಸಿದೆ. ಈ ಹಿಂದೆ ಕೇರಳದಲ್ಲಿಯೂ ಸಾವರ್ಕರ್ ಅವರ ಚಿತ್ರವನ್ನು ಹೊಂದಿರುವ ಪೋಸ್ಟರ್ ಒಂದನ್ನು ಹಾಕಲಾಗಿತ್ತು. ಇದೀಗ ಮಂಡ್ಯದಲ್ಲಿ ರಾಹುಲ್ ಗಾಂಧಿ ಇರುವ ಪೋಸ್ಟರಿನಲ್ಲಿ ಮತ್ತೆ ಸಾವರ್ಕರ್ ಭಾವಚಿತ್ರ ಹಾಕಲಾಗಿರುವುದು ಪಕ್ಷಕ್ಕೆ ಮುಜುಗರ ಉಂಟು ಮಾಡಿದೆ.

ಅ. 20 ರಿಂದ ಗೀತಾಜ್ಞಾನಯಜ್ಞ

ಉಡುಪಿ/ ಮಂಗಳೂರು: ಅ.20 ರಿಂದ ಗೀತಾಜ್ಞಾನಯಜ್ಞವು ಪ್ರತಿನಿತ್ಯ ಬೆಳಗ್ಗೆ 5.30 ರಿಂದ 6.25 ರವರೆಗೆ ಜರುಗಲಿದ್ದು, ಸುಬ್ರಾಯ ನಂದೋಡಿ ಇವರು ಭಗವದ್ಗೀತೆ ಅಧ್ಯಯನ ಮತ್ತು ಸಂದೇಶ ಕಾರ್ಯಕ್ರಮವನ್ನು ನಡೆಸಿಕೊಡಲಿರುವರು. ಕಾರ್ಯಕ್ರಮವು ಗೂಗಲ್ ಮೀಟ್ ಮತ್ತು ಕ್ಲಬ್ ಹೌಸ್ ನಲ್ಲಿ ಏಕಕಾಲಕ್ಕೆ ಜರುಗಲಿದ್ದು, ಭಾಗವಹಿಸಲು ನೋಂದಣಿ ಕಡ್ಡಾಯವಾಗಿದ್ದು, ಸಂಪೂರ್ಣ ಉಚಿತವಾಗಿದೆ. ಹೆಸರು ನೋಂದಾಯಿಸಲು ಇಚ್ಛಿಸುವವರು 9446653093, 9497292351 ಅನ್ನು ಸಂಪರ್ಕಿಸಬಹುದು.  

ನ.12 ರಂದು ದೇಶಾದ್ಯಂತ ರಾಷ್ಟ್ರೀಯ ಲೋಕ ಅದಾಲತ್

ನವದೆಹಲಿ: ದೇಶದ ವಿವಿಧ ಆಯೋಗಗಳ ಮುಂದೆ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಈ ವರ್ಷ ನವೆಂಬರ್ 12 ರಂದು ದೇಶಾದ್ಯಂತ ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದೆ. ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು, ದೇಶದಲ್ಲಿ ಸುಮಾರು ಆರು ಲಕ್ಷ ಎಂಟು ಸಾವಿರ ಗ್ರಾಹಕ ಪ್ರಕರಣಗಳು ಬಾಕಿ ಉಳಿದಿವೆ ಎಂದು ತಿಳಿಸಿದೆ. ಲೋಕ ಅದಾಲತ್ ವ್ಯವಸ್ಥೆ ಮತ್ತು ಕಕ್ಷಿದಾರರ ನಡುವಿನ ಪರಸ್ಪರ ಇತ್ಯರ್ಥದ ಪ್ರಯೋಜನಗಳನ್ನು ಪರಿಗಣಿಸಿ ಹೆಚ್ಚಿನ ಸಂಖ್ಯೆಯ ಗ್ರಾಹಕ ಪ್ರಕರಣಗಳನ್ನು ವಿಲೇವಾರಿ ಮಾಡುವ ನಿರೀಕ್ಷೆಯಿದೆ […]

ಪಡುಬಿದ್ರಿ ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಅಕ್ರಮ: ಜಿಲ್ಲಾಧಿಕಾರಿಗೆ ದೂರು ನೀಡಿದ ಉದ್ಯೋಗಿಗಳು

ಪಡುಬಿದ್ರಿ: ಅಂತಾರಾಷ್ಟ್ರೀಯ ಮಾನ್ಯತೆಯ ಪಡುಬಿದ್ರಿ ಬ್ಲೂಫ್ಲ್ಯಾಗ್‌ ಬೀಚ್‌ನ ಉದ್ಯೋಗಿಗಳು ಗುರುವಾರ ಕರ್ತವ್ಯಕ್ಕೆ ಗೈರಾಗಿ ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಸಾಕಷ್ಟು ಅಕ್ರಮಗಳು ನಡೆಯುತ್ತಿರುವ ಬಗ್ಗೆ ದೂರು ಸಲ್ಲಿಸಿದ್ದಾರೆ ಎಂದು ವರದಿಯಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಕೆಲಸದ ವಾತಾವರಣ ಹದಗೆಟ್ಟಿದ್ದು, ಬೋಟಿಂಗ್‌ಗೆ ನಕಲಿ ರಶೀದಿಗಳನ್ನು ಮುದ್ರಿಸಿ ಹಣ ವಸೂಲು ಮಾಡಲಾಗುತ್ತಿದೆ. ವಸೂಲಾದ ಹಣವು ಪ್ರವಾಸೋದ್ಯಮ ಇಲಾಖೆಯ ಖಾತೆಗೆ ಜಮೆಯಾಗದೆ ಓರ್ವರ ಖಾಸಗಿ ಖಾತೆಗೆ ಜಮೆಯಾಗುತ್ತಿದೆ. ಈ ಕುರಿತು ಈ ಹಿಂದೆ ಜಿಲ್ಲಾಧಿಕಾರಿ ಹಾಗೂ […]