ಶಕಲಕ ಬೂಂ ಬೂಂ ಹಾರರ್ ಕಾಮಿಡಿ ಥ್ರಿಲ್ಲರ್ ಚಲನಚಿತ್ರದ ನಾಯಕ, ನಾಯಕಿಯ ಪೋಸ್ಟರ್ ಬಿಡುಗಡೆ

ಮಂಗಳೂರು: ಡಿಸೆಂಬರ್ 16 ರಂದು ಬಿಡುಗಡೆಗೊಳ್ಳಲಿರುವ ಈ ಚಲನಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ಶ್ರೀ ಮಂಗಳಾದೇವಿ ದೇವಸ್ಥಾನ ಮಂಗಳೂರು ಓ ಸಿ ಸ್ಟಾರ್ ನೈಟ್ ಕಾರ್ಯಕ್ರಮದಲ್ಲಿ ತುಳು ಮತ್ತು ಕನ್ನಡ ನಟ ವಿನೀತ್ ಕುಮಾರ್ ಮತ್ತು ಮಾಜಿ ಶಾಸಕ ರಮನಾಥ್ ರೈ ಅವರು ಬಿಡುಗಡೆಗೊಳಿ ಶುಭ ಹಾರೈಸಿದರು. ಯು.ಎನ್ ಸಿನೆಮಾಸ್ ಬ್ಯಾನರ್ ನಡಿ ಮೂಡಿಬರುವ ಈ ಚಲನಚಿತ್ರವನ್ನು ಶ್ರೀಶ ಎಳ್ಳಾರೆ ನಿರ್ದೇಶನ ಮಾಡಿದ್ದಾರೆ. ನಿತ್ಯಾನಂದ ನರಸಿಂಗೆ, ಉಮೇಶ್ ಪ್ರಭು ಮಣಿಬೆಟ್ಟು ನಿರ್ಮಾಪಕರಾಗಿದ್ದಾರೆ ಹಾಗೂ ಡಾಲ್ವಿನ್ ಕೊಳಲಗಿರಿ ಚಿತ್ರದ […]

ಅಕ್ಟೋಬರ್ 11 ರಂದು ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಉಡುಪಿ: ಅಕ್ಟೋಬರ್ 11 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110ಕೆವಿ ಕಾರ್ಕಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮುಂಡ್ಲಿ ಫೀಡರ್‌ನಲ್ಲಿ ಲೈನಿನ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆಯ ವರೆಗೆ ಮುಂಡ್ಲಿ, ದುರ್ಗ, ತೆಳ್ಳಾರ್, ಪೊಲ್ಲಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಉಡುಪಿ ನಿಟ್ಟೂರಿನಲ್ಲಿರುವ 1*10 ಎಂ.ವಿ.ಎ, 110/11ಕೆವಿ ಪರಿವರ್ತಕವನ್ನು 1*20 ಎಂ.ವಿ.ಎ ಗೆ ಉನ್ನತೀಕರಿಸುವ […]