ಸಾಧಕ ವಿದ್ಯಾರ್ಥಿ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕ ಮರುಪಾವತಿ
ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಕ್ರೀಡೆಗಳಲ್ಲಿ ಕಳೆದ ಐದು ವರ್ಷಗಳಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ಪಿ.ಯು.ಸಿ ಯಿಂದ ವೃತ್ತಿಪರ ಕೋರ್ಸ್ಗಳು ಸೇರಿದಂತೆ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿರುವ ಕೇಂದ್ರ, ರಾಜ್ಯ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲಾ ಕಾಲೇಜುಗಳ ಕ್ರೀಡಾಪಟುಗಳು ಹಾಗೂ ವಿಕಲಚೇತನ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ […]
ವಿನೋಬಾ ಭಾವೆ ಅವರ ಭೂದಾನ ಚಳುವಳಿ ಗಾಂಧಿತತ್ವದ ಶ್ರೇಷ್ಠ ಉದಾಹರಣೆ: ವಿಶಂಬರನಾಥ್ ಅಗರ್ವಾಲ್
ಮಣಿಪಾಲ: ಭೂದಾನ ಆಂದೋಲನವು ಆಚಾರ್ಯ ವಿನೋಬಾ ಭಾವೆಯವರ ಒಂದು ಅನನ್ಯ ಕೊಡುಗೆಯಾಗಿದೆ ಮತ್ತು ಇದರ ತತ್ವ ಮತ್ತು ಕಾರ್ಯ ನಿಜವಾದ ಅರ್ಥದಲ್ಲಿ ಗಾಂಧಿವಾದದ ಮೇಲೆ ನಿಂತಿದೆ ಎಂದು ವಿದ್ವಾಂಸ ವಿಶಂಬರನಾಥ್ ಅಗರ್ವಾಲ್ ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಶ್ರಯದಲ್ಲಿ ನಡೆದ ‘ವಿನೋಬಾ ಭಾವೆ: ಜೀವನ ಮತ್ತು ತತ್ವ’ ಕುರಿತ ಉಪನ್ಯಾಸದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಯಂಪ್ರೇರಿತವಾಗಿ ಭೂಮಿ ಅಥವಾ ಹಣವನ್ನು ದಾನ ಮಾಡುವುದು ಹೆಚ್ಚು ಮಾನವೀಯ ಸಮಾಜವನ್ನು ರೂಪಿಸುವತ್ತ ನಿಜವಾದ ಗಾಂಧಿತತ್ವದ […]
ಜಿಲ್ಲಾ ಬಿಜೆಪಿ ಕಚೇರಿಗೆ ಪ್ರಮೋದ್ ಸಾವಂತ್ ಭೇಟಿ
ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶನಿವಾರದಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ಬಿಜೆಪಿ ವತಿಯಿಂದ ಪ್ರಮೋದ್ ಸಾವಂತ್ ಅವರನ್ನು ಅಭಿನಂದಿಸಲಾಯಿತು. ಇದಕ್ಕೂ ಮುನ್ನ ಅವರು ಶ್ರೀಕೃಷ್ಣಮಠಕ್ಕಾಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಪರ್ಯಾಯ ಮಠದ ದಿವಾನ ವರದರಾಜ ಭಟ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಡಾ.ಕೃಷ್ಣಪ್ರಸಾದ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ […]
ಪುತ್ತಿಗೆ ಶ್ರೀಪಾದರಿಂದ ವಾಷಿಂಗ್ಟನ್ ನಲ್ಲಿ ಗೋಶಾಲೆ ನಿರ್ಮಾಣದ ಭೂಮಿ ಪೂಜೆ
ಉಡುಪಿ: ಅಮೆರಿಕಾದ ರಾಜಧಾನಿ ವಾಷಿಂಗ್ಟನ್ ನಗರದಲ್ಲಿರುವ ಯುವ ಮಾಧ್ವ ಉದ್ಯಮಿ ಜಯಾಚಾರ್ಯ ಇವರು 25 ಎಕರೆ ವಿಶಾಲ ಪ್ರದೇಶದಲ್ಲಿ ಪ್ರಾರಂಭಿಸಲಿರುವ ಗೋಶಾಲೆಯ ಭೂಮಿ ಪೂಜೆಯನ್ನು ಪುತ್ತಿಗೆ ಶ್ರೀಪಾದರು ನೆರವೇರಿಸಿದರು. ಅಮೇರಿಕಾದಂತಹ ದೇಶದಲ್ಲಿ ಬಹಳ ಸಾಹಸ ಮಾಡಿ ಗೋಶಾಲೆ ಮಾಡಲು ತೊಡಗಿರುವ ಆಚಾರ್ಯ ದಂಪತಿಗಳನ್ನು ಶ್ರೀಗಳು ಅಭಿನಂದಿಸಿ ಹರಸಿದರು. ಈ ಸಂದರ್ಭದಲ್ಲಿ ವಾಷಿಂಗ್ಟನ್ ನಲ್ಲಿರುವ ಭಕ್ತರಿಗೆ ಪೂಜ್ಯ ಶ್ರೀಪಾದರು ಮುದ್ರಾಧಾರಣೆ ಮಾಡಿದರು. ವಾಷಿಂಗ್ಟನ್ ನಲ್ಲಿರುವ ಪ್ರಸಿದ್ಧ ದೇವಸ್ಥಾನ ಭಕ್ತಆಂಜನೇಯದಲ್ಲಿ ಪರ್ಯಾಯ ಸಂಚಾರದಲ್ಲಿರುವ ಪೂಜ್ಯ ಪುತ್ತಿಗೆ ಶ್ರೀಪಾದರಿಗೆ ಅರ್ಚಕ ವೃಂದ […]
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಲಾಂ ಮಂಗಳಾರತಿ ಪದ್ಧತಿ ಇಲ್ಲ: ಬಿ.ಎಂ. ಸುಕುಮಾರ್ ಶೆಟ್ಟಿ
ಕುಂದಾಪುರ: ಇಲ್ಲಿನ ಬಹುಪ್ರಸಿದ್ದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಸಲಾಂ ಮಂಗಳಾರತಿ ಪದ್ಧತಿ ಇಲ್ಲ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಇಲ್ಲಿ ಯಾವುದೇ ರೀತಿಯ ಸಲಾಂ ಮಂಗಳಾರತಿ ಪದ್ಧತಿ ನಡೆಯುವುದಿಲ್ಲ, ನಾನು 40 ವರ್ಷದಿಂದ ಕೊಲ್ಲೂರು ದೇವಸ್ಥಾನದ ಭಕ್ತನಾಗಿದ್ದೇನೆ, ಹಾಗಾಗಿ ನನಗೆ ಈ ಬಗ್ಗೆ ತಿಳುವಳಿಕೆ ಇದೆ. ಮೂಕಾಂಬಿಕಾ ದೇವಸ್ಥಾನಕ್ಕೆ ಹತ್ತು ವರ್ಷಗಳ ಕಾಲ ಆಡಳಿತ ಮೊಕ್ತೇಸರನಾಗಿದ್ದೆ ಕೊಲ್ಲೂರಿನಲ್ಲಿ ಯಾವುದೇ ರೀತಿಯ ಸಲಾಂ ಮಂಗಳಾರತಿ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಕೊಲ್ಲೂರು ದೇವಸ್ಥಾನದಲ್ಲಿ ಸಲಾಂ […]