ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಡೆಪ್ಯುಟಿ ಮ್ಯಾನೇಜರ್ ಪೇಂಟಿಂಗ್ ಹುದ್ದೆ ಖಾಲಿ
ಉಡುಪಿ: ಉಡುಪಿಯ ಕೊಚ್ಚಿನ್ ಶಿಪ್‌ಯಾರ್ಡ್ ಲಿ. ನಲ್ಲಿ ಖಾಲಿ ಇರುವ ಡೆಪ್ಯುಟಿ ಮ್ಯಾನೇಜರ್ ಪೇಂಟಿಂಗ್ -1 ಹುದ್ದೆಗೆ 38 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.cochinshipyard.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಅಕ್ಟೋಬರ್ 19 ರಂದು ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ
ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಅಕ್ಟೋಬರ್ 19 ರಂದು ಉಡುಪಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಕೈಗಾರಿಕಾ ಸ್ಪಂದನ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯ ಹಾಗೂ ಉದ್ದಿಮೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕುರಿತು ಚರ್ಚಿಸಲಾಗುವುದು. ಜಿಲ್ಲೆಯ ಕೈಗಾರಿಕೋದ್ಯಮಿಗಳು ತಮ್ಮ ಅಹವಾಲು ಹಾಗೂ ಸಲಹೆಗಳಿದ್ದಲ್ಲಿ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇವರಿಗೆ ಲಿಖಿತವಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಜಿಲ್ಲಾ […]
ಬೀದಿ ನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ
ಉಡುಪಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2022-23ನೇ ಸಾಲಿನಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ 8 ಜನ ಕಲಾವಿದರಿರಬೇಕು. ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ […]
ಚಿತ್ರನಟ ರಮೇಶ್ ಅರವಿಂದ್ ಯೋಗಬನ ಭೇಟಿ
ಕುಂದಾಪುರ: ಕನ್ನಡದ ಹೆಸರಾಂತ ಚಲನಚಿತ್ರ ನಟ ನಿರ್ದೇಶಕ ರಮೇಶ್ ಅರವಿಂದ್ ರವರು ಮೂಡು ಗಿಳಿಯಾರಿನ ಯೋಗಬನದ ಸರ್ವಕ್ಷೇಮ ಆಸ್ಪತ್ರೆಗೆ ಆಗಮಿಸಿದ ಸಂದರ್ಭದಲ್ಲಿ ಡಿವೈನ್ ಪಾರ್ಕ್ ಮತ್ತು ಎಸ್ ಎಚ್ ಆರ್ ಎಫ್ ಸಂಸ್ಥೆಯ ವತಿಯಿಂದ ವೈದ್ಯಕೀಯ ಆಡಳಿತ ನಿರ್ದೇಶಕ ಡಾ. ವಿವೇಕ್ ಉಡುಪ ಮತ್ತು ಮುಖ್ಯ ವೈದ್ಯಾಧಿಕಾರಿ ಮಾನಸ ವಿವೇಕ ಉಡುಪ ಇವರು ಸನ್ಮಾನಿಸಿ ಅಭಿನಂದಿಸಿದರು.
ಬ್ರಹ್ಮಾವರ: ಯುವಕ-ಯುವತಿಯರಿಗಾಗಿ ರುಡ್‌ಸೆಟ್‌ನಲ್ಲಿ ಉಚಿತ ಕೌಶಲ್ಯಾಭಿವೃದ್ದಿ ತರಬೇತಿ
ಬ್ರಹ್ಮಾವರ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಉದ್ಯೋಗವನ್ನು ಅರಸುತ್ತಿರುವವರಿಗೆ ಆಶಾಕಿರಣವಾಗಿರುವ, ಕೇಂದ್ರ ಸರಕಾರದಿಂದ ಸ್ವ ಉದ್ಯೋಗಕ್ಕೆ ಅನುಕರಣೀಯ ಮಾದರಿ ಎಂದು ಗುರುತಿಸಲ್ಪಟ್ಟ, ಯುವ ಜನರಿಗೆ ಸ್ವ ಉದ್ಯೋಗವನ್ನು ಕಲ್ಪಿಸಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ, ಕೆನರಾ ಬ್ಯಾಂಕ್‌ಗಳ ಸಹಯೋಗದೊಂದಿಗೆ ನಡೆಯುವ ರುಡ್‌ಸೆಟ್ ಸಂಸ್ಥೆಯು ಬ್ರಹ್ಮಾವರದಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ ಇವರ ವತಿಯಿಂದ ಉಚಿತ ಊಟ, ವಸತಿ, ಸಮವಸ್ತ್ರ ಹಾಗೂ ತರಬೇತಿ ಕಿಟ್ ನೊಂದಿಗೆ ನಿರುದ್ಯೋಗಿ ಯುವಕ-ಯುವತಿಯರಿಗೆ […]