ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್: ಧನಂಜಯ್, ಯಜ್ಞಾ ಅತ್ಯುತ್ತಮ ನಟರು; ರಾಜ್ ಬಿ.ಶೆಟ್ಟಿಗೆ ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ; ಆ್ಯಕ್ಟ್ 1978 ಅತ್ಯುತ್ತಮ ಚಿತ್ರ

ಫಿಲ್ಮ್‌ಫೇರ್ ಅವಾರ್ಡ್ಸ್ ಸೌತ್ 2022 ಅಕ್ಟೋಬರ್ 9 ರಂದು ಬೆಂಗಳೂರಿನ ಅಂತರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆಯೋಜನೆಗೊಂಡಿತು. ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಚಿತ್ರೋದ್ಯಮಗಳ ಅತ್ಯುತ್ತಮ ಚಲಚಿತ್ರಗಳು ಪ್ರಶಸ್ತಿಯನ್ನು ಬಾಚಿಕೊಂಡವು. 2020 ಮತ್ತು 2021 ರಲ್ಲಿ ತೆರೆಗೆ ಬಂದ ಅತ್ಯುತ್ತಮ ಚಲನಚಿತ್ರಗಳಿಗೆ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಲಾಯಿತು. ಕನ್ನಡ ಚಿತ್ರರಂಗದಲ್ಲಿ ಪ್ರಶಸ್ತಿ ಪಡೆದ ಚಿತ್ರಗಳು ಅತ್ಯುತ್ತಮ ನಟನಾಗಿ ಬಡವ ರಾಸ್ಕಲ್ ಚಿತ್ರಕ್ಕಾಗಿ ಧನಂಜಯ್, ಅತ್ಯುತ್ತಮ ನಟಿಯಾಗಿ ಆ್ಯಕ್ಟ್ 1978 ಗಾಗಿ ಯಜ್ಞಾ ಶೆಟ್ಟಿ, […]
ನಂದಳಿಕೆ: 14 ನೇ ಶತಮಾನದ ನಾಗಭೈರವ ಶಿಲ್ಪ ಪತ್ತೆ

ಉಡುಪಿ: ಇಲ್ಲಿನ ಕಾರ್ಕಳ ತಾಲೂಕಿನ, ಕೈಯಾರ್ಲದ ಶ್ರೀ ಮಹಾಕಾಳಿ ದೇವಾಲಯದ ಸಮೀಪದಲ್ಲಿನ ನಾಗಬನದಲ್ಲಿ ಪುರಾತನ ಕಾಲದ ನಾಗಭೈರವ ಶಿಲ್ಪ ಪತ್ತೆಯಾಗಿದೆಯೆಂದು, ಶಿರ್ವದ ಎಂ.ಎಸ್.ಆರ್.ಎಸ್. ಕಾಲೇಜಿನ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ. ಆಯತಾಕಾರದ ಬಳಪದ ಶಿಲೆಯ ಕೆಳಭಾಗದಲ್ಲಿ ಕಾಲುಮಂಡಲದ ನಾಲ್ಕು ಪವಿತ್ರ ಗಂಟುಗಳನ್ನು ಒಳಗೊಂಡ ಒಂದು ನಾಗರಾಜನ ಶಿಲ್ಪವನ್ನು ರಚಿಸಲಾಗಿದ್ದು, ನಾಗನ ಹೆಡೆಯ ಮೇಲೆ ಚರ್ತುಭಾಹು ನಾಗಭೈರನ ಶಿಲ್ಪವನ್ನು ನಿಂತಂತೆ ರಚಿಸಲಾಗಿದೆ. ಹಿಂದಿನ ಎರಡು ಕೈಗಳಲ್ಲಿ ಎರಡು ಹೆಡೆಬಿಚ್ಚಿದ ನಾಗಗಳನ್ನು ಹಿಡಿದಂತೆ […]
ರೋಟರಿ ಟ್ರಸ್ಟ್ ನಿಂದ ಕನ್ನಡ ಮಾಧ್ಯಮ ಶಾಲಾ ವಾಹನಕ್ಕೆ 23.00 ಲಕ್ಷ ದೇಣಿಗೆ

ಉಡುಪಿ: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಆಧುನಿಕ ಸವಲತ್ತುಗಳಿಂದ ಮಕ್ಕಳಿಗೆ ಶಿಕ್ಷಣದಲ್ಲಿ ಕೊರತೆಯಾಗದಂತೆ ಸ್ಥಳೀಯ ಮತ್ತು ಕನ್ನಡಾಭಿಮಾನಿಗಳ ಸಹಕಾರದಿಂದ ಶುಲ್ಕರಹಿತ, ಮೌಲ್ಯಯುತ ಶಿಕ್ಷಣ ಕೊಡುತ್ತಿರುವ ಪಟ್ಲ ರೂರಲ್ ಎಜುಕೇಶನ್ ಸೊಸೈಟಿಯ ಯುಎಸ್ ನಾಯಕ್ ಪ್ರೌಢಶಾಲೆಗೆ ನಗರ ಪ್ರದೇಶಗಳ ಮಕ್ಕಳು ಬರುತ್ತಿರುವುದು ಸಂತೋಷದ ವಿಚಾರ. ತಾನು ಹುಟ್ಟಿ ಬೆಳೆದು ಊರಿನಲ್ಲಿ ಕಲಿತ ಶಾಲೆಗೆ ಅಗತ್ಯವಾಗಿ ಬೇಕಾಗಿದ್ದ ಬಸ್ಸಿನ ವ್ಯವಸ್ಥೆಗೆ ಗಣೇಶ್ ನಾಯಕ್ ಅವರ ಕೊಡುಗೆ ನೀಡಿದ್ದು ಇದು ಎಲ್ಲರಿಗೂ ಪ್ರೇರಣೆ. ಶಾಲಾ ಪುನರ್ ನಿರ್ಮಾಣ ಮತ್ತು ಆಧುನೀಕರಣ ಯೋಜನೆ […]
ನಡೆದಾಡುವ ವಿಶ್ವಕೋಶವಾಗಿದ್ದರು ಶಿವರಾಮ ಕಾರಂತರು: ಸಚಿವ ಮಾಧುಸ್ವಾಮಿ

ಉಡುಪಿ: ಶಿವರಾಮ ಕಾರಂತರು ಒಬ್ಬ ವ್ಯಕ್ತಿಯಾಗಿರದೇ ನಡೆದಾಡುವ ವಿಶ್ವಕೋಶ ಹಾಗೂ ವಿಶ್ವವಿದ್ಯಾನಿಲಯವಾಗಿದ್ದರು. ಸಾಹಿತಿಯಾಗಿ ಎಲ್ಲಾ ಕ್ಷೇತ್ರಗಳನ್ನು ಅರಿತು ತನ್ನನ್ನು ತಾನು ತೊಡಗಿಸಿಕೊಂಡಿದ್ದರು ಎಂದು ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು. ಕೋಟತಟ್ಟು ಗ್ರಾಪಂ, ಉಡುಪಿ ಡಾ.ಶಿವರಾಮ ಕಾರಂತ ಟ್ರಸ್ಟ್, ಕೋಟದ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ, ಪ್ರವಾಸೋದ್ಯಮ ಇಲಾಖೆ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ಕೋಟ ಶಾಂಭವಿ ಶಾಲಾ ವಠಾರದಲ್ಲಿ ಸೋಮವಾರ ಆಯೋಜಿಸಲಾದ ಡಾ.ಶಿವರಾಮ ಕಾರಂತರ […]
ಚೆಸ್ ಪಂದ್ಯಾಟ: ಎಕ್ಸಲೆಂಟ್ ಪಿಯು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

ಕುಂದಾಪುರ: 2022-23ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯು ಅಕ್ಟೋಬರ್ 7 ಮತ್ತು 8 ರಂದು ಶ್ರೀ ಬಸವೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜು ಬಿಡದಿ ರಾಮನಗರ ಜಿಲ್ಲೆಯಲ್ಲಿ ನಡೆದಿದ್ದು, ಕುಂದಾಪುರದ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಮಾನಸ ದೇವಾಡಿಗ ಮತ್ತು ನಿಹಾಲ್ ಎನ್ ಶೆಟ್ಟಿ ಉಡುಪಿ ಜಿಲ್ಲೆಯನ್ನು ರಾಜ್ಯಮಟ್ಟದಲ್ಲಿ ಪ್ರತಿನಿಧಿಸಿ ದ್ವಿತೀಯ ಹಾಗೂ ಚತುರ್ಥ ಸ್ಥಾನಿ ವಿಜೇತರಾಗಿ, ಓಡಿಸ್ಸಾ ರಾಜ್ಯದ […]