ವಿಶ್ವ ದೃಷ್ಟಿ ದಿನದ ಶುಭಾಶಯಗಳು..
ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳಿಗೆ ರಜತ ಪದಕ
ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಸುಹಾಸ್. ಎಸ್. ಜೋಳದ್ ಮತ್ತು ಪ್ರಥಮ ವಿಜ್ಞಾನ ವಿಭಾಗದ ಸ್ತುತಿ.ಎಚ್.ಬಿ. ಭಾಗವಹಿಸಿ ದ್ವಿತೀಯ ಸ್ಥಾನಗಳಿಸಿ ರಜಕ ಪದಕವನ್ನು ಪಡೆದು ತೀರ್ಪುಗಾರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿಯವರು ಅಭಿನಂದಿಸಿದ್ದು, ಆಡಳಿತ ಮಂಡಳಿ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿ ಶುಭ […]
ಕೋಟೇಶ್ವರ: ನಿರುಪಯುಕ್ತ ನೀರಿನ ಟ್ಯಾಂಕ್ ತೆರವು
ಕುಂದಾಪುರ: ಕೋಟೇಶ್ವರ ಗ್ರಾಪಂ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಳೆದ ಹದಿನೈದು ವರ್ಷಗಳಿಂದ ನಿರುಪಯುಕ್ತವಾಗಿದ್ದ ನೀರಿನ ಟ್ಯಾಂಕ್ ಅನ್ನು ತೆರವುಗೊಳಿಸುವ ಕಾರ್ಯಾಚರಣೆ ಮಂಗಳವಾರ ನಡೆಯಿತು. ಕೋಟೇಶ್ವರ ಗ್ರಾಪಂ ಎದುರಿನ ಗ್ರಾಮಲೆಕ್ಕಿಗರ ಕೊಠಡಿ ಹಿಂಭಾಗದಲ್ಲಿ 1986ರಲ್ಲಿ ನಿರ್ಮಾಣವಾದ 2 ಲಕ್ಷ ಲೀಟರ್ ನೀರು ಸಂಗ್ರಹಿಸುವ ಸಾಮರ್ಥ್ಯದ ಹೆಡ್ಟ್ಯಾಂಕ್ನಲ್ಲಿ ಸೋರಿಕೆ ಕಂಡುಬಂದಿದ್ದರಿಂದ ಕಳೆದ ಹದಿನೈದು ವರ್ಷಗಳಿಂದ ಯಾವುದೇ ಉಪಯೋಗ ಇಲ್ಲದೆ ನಿರುಪಯುಕ್ತವಾಗಿತ್ತು. ಟ್ಯಾಂಕ್ ಶಿಥಿಲಗೊಂಡಿದ್ದು ರಾಷ್ಟ್ರೀಯ ಹೆದ್ದಾರಿ ಹಾಗೂ ಗ್ರಾಪಂ ಕಟ್ಟಡ ಸಹಿತ ಇತರೆ ಅಂಗಡಿಗಳಿಗೆ ಅಪಾಯ ಆಹ್ವಾನಿಸುತ್ತಿತ್ತು. ಟ್ಯಾಂಕ್ […]
ಗುಂಡೇಟು ತಿಂದು ಭಯೋತ್ಪಾದಕರ ವಿರುದ್ಧ ಹೋರಾಡಿದ ಭಾರತೀಯ ಸೇನೆಯ ದಾಳಿ ನಾಯಿ ಜ಼ೂಮ್ ಆರೋಗ್ಯ ಸ್ಥಿರ
ಜಮ್ಮು ಮತ್ತು ಕಾಶ್ಮೀರ: ಅನಂತ್ನಾಗ್ನಲ್ಲಿ ಭಯೋತ್ಪಾದಕರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿದ ಭಾರತೀಯ ಸೇನೆಯ ದಾಳಿ ನಾಯಿ ಜ಼ೂಮ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಮತ್ತು ಶ್ರೀನಗರದ ಸೇನಾ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಂಡದ ಸೂಕ್ಷ್ಮ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಶಸ್ತ್ರಚಿಕಿತ್ಸೆ ನಡೆಸಿದ ನಂತರ ಜ಼ೂಮ್ ಆರೋಗ್ಯ ಸ್ಥಿರವಾಗಿದೆ. ಆದರೆ ಮುಂದಿನ 24-48 ಗಂಟೆಗಳು ನಿರ್ಣಾಯಕವಾಗಿದ್ದು, ಶ್ರೀನಗರದ ಸೇನಾ ಪಶುವೈದ್ಯಕೀಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಂಡದ ನಿಕಟ ನಿಗಾದಲ್ಲಿದೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. #WATCH | […]
ಪುನೀತ್ ರಾಜ್ ಕುಮಾರ್ ನೆನಪಿಗಾಗಿ ಅರಮನೆ ಮೈದಾನದಲ್ಲಿ ಪುನೀತ ಪರ್ವ: ಭಾರತೀಯ ಚಿತ್ರರಂಗದ ದಿಗ್ಗಜರು ಭಾಗವಹಿಸುವ ನಿರೀಕ್ಷೆ
ಅಪ್ಪು ಕಣ್ಮರೆಯಾಗಿ ಒಂದು ವರ್ಷವಾಗುತ್ತಾ ಬಂದಿದ್ದು, ಅವರ ಪುಣ್ಯ ಸ್ಮರಣೆಯ ಒಂದು ದಿನಕ್ಕೂ ಮುನ್ನ ಅಕ್ಟೋಬರ್ 28ರಂದು ‘ಗಂಧದ ಗುಡಿ’ ಚಿತ್ರಮಂದಿರಗಳಲ್ಲಿ ಬಿಡುಗಡೆ ಕಾಣುತ್ತಿದೆ. ವನ್ಯಜೀವಿ ಛಾಯಾಗ್ರಾಹಕ ಅಮೋಘ ವರ್ಷ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ನೈಜ ಜೀವನದ ಪುನೀತ್ ರಾಜ್ಕುಮಾರ್ ಆಗಿ ಅಪ್ಪು ಕಾಣಿಸಿಕೊಂಡಿದ್ದಾರೆ. ಚಿತ್ರ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ ಅರಮನೆ ಮೈದಾನದಲ್ಲಿ ಅಕ್ಟೋಬರ್ 21ರ ಶುಕ್ರವಾರ ಚಿತ್ರದ ಬಿಡುಗಡೆ ಪೂರ್ವ ಸಮಾರಂಭ ನಡೆಯಲಿದ್ದು, ಕಾರ್ಯಕ್ರಮಕ್ಕೆ ‘ಪುನೀತ ಪರ್ವ’ ಎಂದು ಹೆಸರಿಡಲಾಗಿದೆ. ಈ ಪುನೀತ ಪರ್ವ ಕಾರ್ಯಕ್ರಮಕ್ಕೆ […]