ಮಂಗಳೂರು: ಕರ್ತವ್ಯ ನಿರತ ಮಹಿಳಾ ಪೇದೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ

ಮಂಗಳೂರು: ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್ ನಲ್ಲಿ ಬುಧವಾರದಂದು ಕರ್ತವ್ಯದಲ್ಲಿದ್ದ ಮಹಿಳಾ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿರುವ ಘಟನೆ ನಡೆದಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಜ್ಯೋತಿ ಭಾಯಿ ಸಿಂಗ್ ಪರ್ಮಾರ್ (33) ನವಮಂಗಳೂರು ಬಂದರು ಪ್ರಾಧಿಕಾರದ ಗೇಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆಯಲ್ಲೇ ಗುಂಡುಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಜ್ಯೋತಿ ಡೆತ್ ನೋಟ್ ಬರೆದಿಟ್ಟಿದ್ದಾರೆ. ಈಕೆಯ ಗಂಡ ಓಂಬೀರ್ […]

ಸುರತ್ಕಲ್: ಅಕ್ಟೋಬರ್ 18 ರಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಟೋಲ್ ಗೇಟ್ ಗೆ ಮುತ್ತಿಗೆ

ಸುರತ್ಕಲ್: ಇಲ್ಲಿನ ಎನ್.ಐ.ಟಿ.ಕೆ ಕಾಲೇಜಿನ ಬಳಿ ಇರುವ ಟೋಲ್ ಗೇಟ್ ಆರು ತಿಂಗಳ ತಾತ್ಕಾಲಿಕ ಅವಧಿಗೆ ಆರಂಭಗೊಂಡು ಇದೀಗ ಏಳು ವರ್ಷಗಳನ್ನು ಪೂರೈಸಿದೆ. ಜನರ ವಿರೋಧದ ನಡುವೆಯೂ ಅಕ್ರಮವಾಗಿ, ನಿಯಮಗಳ ಉಲ್ಲಂಘನೆ ನಡೆಸಿ ಜನರಿಂದ ಬಲವಂತವಾಗಿ ಹಣ ಕೀಳುತ್ತಿರುವ ವಿರುದ್ದ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಹಾಗೂ ದ.ಕ ಮತ್ತು ಉಡುಪಿ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳು ಸೇರಿ ಅಕ್ಟೋಬರ್ 18 ರಂದು ಬೆಳಗ್ಗೆ 9.30 ಗಂಟೆಗೆ ಟೋಲ್ ಗೇಟ್ ಗೆ ಮುತ್ತಿಗೆ ಹಾಕುವ ಕಾರ್ಯಕ್ರಮವನ್ನು […]

ಮಕ್ಕಳು ಸೇರಿದಂತೆ 14 ದಲಿತರನ್ನು ಬಂಧನದಲ್ಲಿಟ್ಟ ಕಾಫಿ ಎಸ್ಟೇಟ್ ಮಾಲೀಕರ ವಿರುದ್ದ ಪ್ರಕರಣ ದಾಖಲು

ಚಿಕ್ಕಮಗಳೂರು: ಇಲ್ಲಿನ ಹುಸನೇಹಳ್ಳಿಯಲ್ಲಿ ಕಾಫಿ ಎಸ್ಟೇಟ್ ಮಾಲೀಕರೊಬ್ಬರು ಹಣಕಾಸಿನ ವಿಚಾರದಲ್ಲಿ 14 ದಲಿತರನ್ನು ಥಳಿಸಿ ಒಂದು ದಿನದ ಮಟ್ಟಿಗೆ ಅವರೆಲ್ಲರನ್ನು ಬಂಧಿಸಿಟ್ಟಿದ ವಿಚಾರದಲ್ಲಿ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಕಾಫಿ ಎಸ್ಟೇಟ್ ಮಾಲೀಕ ಜಗದೀಶಗೌಡ ಮತ್ತು ಅವರ ಪುತ್ರ ತಿಲಕ್ ವಿರುದ್ಧ ಪೊಲೀಸರು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳು ಮತ್ತು ಎಸ್‌ಸಿ-ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಗಾಯಗೊಂಡಿರುವ ಮಹಿಳೆಯೊಬ್ಬರು, ಸಂತ್ರಸ್ತರನ್ನು ಹೊಡೆಯುವ […]

ಕಾಂಗ್ರೆಸ್ ಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಮಹೇಶ್ ಠಾಕೂರ್

ಉಡುಪಿ: ಖಾಸಗಿ ಕಾರ್ಯಕ್ರಮದ ನಿಮಿತ್ತ ಅ.8 ರಂದು ಉಡುಪಿ ನಗರಕ್ಕೆ ಆಗಮಿಸಿದ ಗೋವಾ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಮಾಂಸಾಹಾರವನ್ನು ಸ್ವೀಕರಿಸಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೇಟಿ ‌ನೀಡಿದ್ದಾರೆ ಎಂಬ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸುಳ್ಳು ಆರೋಪವನ್ನು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಸರಾಸಗಟಾಗಿ ತಳ್ಳಿಹಾಕಿದ್ದಾರೆ. ಸನಾತನ ಹಿಂದೂ ಧರ್ಮದ ಪ್ರತಿಪಾದಕ, ಈ ಮಣ್ಣಿನ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಘನತೆ ಗೌರವದ ಸಂಪೂರ್ಣ ಅರಿವುಳ್ಳ ಹಿಂದುತ್ವದ ಐಕಾನ್ ಎಂದೆನಿಸಿರುವ ಡಾ. […]

ಕಡಲ ಸ್ವಚ್ಛತಾ ಅಭಿಯಾನ: ಬೆಂಗಳೂರಿನಿಂದ ಕೆಮ್ಮಣ್ಣಿಗೆ ಬೈಕ್ ಮೂಲಕ ಆಗಮಿಸಿ ಜಾಗೃತಿ ಮೂಡಿಸಿದ ಮಹಿಳಾ ಬೈಕರ್ ಗಳು

ಕೆಮ್ಮಣ್ಣು: ಕಡಲ ತೀರದ ರಕ್ಷಣೆ, ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ‘ಸೇವ್ ಮರೈನ್ ಲೈಫ್’ ಬೈಕ್ ಯಾತ್ರೆಯ ಮೂಲಕ ಬೆಂಗಳೂರಿನ ಸ್ವಾತಿ ಆರ್ ಮತ್ತು ಅನಿತಾ ಎಂ ಮಂಗಳವಾರ ಹೂಡೆ ಕಡಲ ತೀರದಲ್ಲಿ ಜಾಗೃತಿ ಮೂಡಿಸಿ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿದರು. ಭಾರತ ಸರ್ಕಾರ, ನೆಹರು ಯುವ ಕೇಂದ್ರ ಉಡುಪಿ, ಸ್ವಚ್ಛ ಭಾರತ್ ಫ್ರೆಂಡ್ಸ್, ತೋನ್ಸೆ ಗ್ರಾಮ ಪಂಚಾಯತ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರು ರಾಷ್ಟ್ರೀಯ ಸೇವಾ ಯೋಜನೆ (ಎನ್.ಎಸ್.ಎಸ್.), ನಿರ್ಮಲ್ ತೋನ್ಸೆ, ಲಯನ್ಸ್ ಕ್ಲಬ್ […]