ಉಜ್ಜಯಿನಿಯಲ್ಲಿ ಮಹಾಕಾಲ್ ಲೋಕ್ ಕಾರಿಡಾರ್ 1 ನೇ ಹಂತವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ

ಉಜ್ಜಯಿನಿ: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಲೇಶ್ವರ ದೇವಸ್ಥಾನದಲ್ಲಿ ಮಹಾಕಾಲ್ ಲೋಕ್ ಯೋಜನೆಯ ಮೊದಲ ಹಂತವನ್ನು ದೇಶಕ್ಕೆ ಸಮರ್ಪಿಸಿದರು. ಮಹಾಕಾಲ್ ದೇವಸ್ಥಾನದಲ್ಲಿ ಪೂಜೆ ನಡೆಸಿ ಆರತಿಯನ್ನು ಬೆಳಗಿದರು. ಉದ್ಘಾಟನಾ ಸಮಾರಂಭದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಉಜ್ಜಯಿನಿಯು ಸಾವಿರಾರು ವರ್ಷಗಳಿಂದ ಭಾರತದ ಸಂಪತ್ತು ಮತ್ತು ಸಮೃದ್ಧಿ, ಜ್ಞಾನ ಮತ್ತು ಘನತೆ, ನಾಗರಿಕತೆ ಮತ್ತು ಸಾಹಿತ್ಯವನ್ನು ಮುನ್ನಡೆಸಿದೆ. ಉಜ್ಜಯಿನಿಯ ಪ್ರತಿಯೊಂದು ಕಣವೂ ಆಧ್ಯಾತ್ಮಿಕತೆಯಲ್ಲಿ ಮುಳುಗಿದೆ ಮತ್ತು ಅದು ಪ್ರತಿ ಮೂಲೆ ಮೂಲೆಯಲ್ಲಿಯೂ ಅಲೌಕಿಕ […]

ನಮ್ಮ ಕ್ಲಿನಿಕ್ ವೈದ್ಯಾಧಿಕಾರಿ ಹುದ್ದೆಗೆ ನೇರ ಸಂದರ್ಶನ

ಉಡುಪಿ: ಉಡುಪಿ ತಾಲೂಕು ವ್ಯಾಪ್ತಿಯ ನಮ್ಮ ಕ್ಲಿನಿಕ್‌ನಲ್ಲಿ ಖಾಲಿ ಇರುವ ವೈದ್ಯಾಧಿಕಾರಿ-01 ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಅಕ್ಟೋಬರ್ 15 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಮೂಲದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಸದಸ್ಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಣ್ಣುಮಕ್ಕಳು ವೀರ ವನಿತೆಯರ ಧೈರ್ಯ ಸಾಹಸ ಪ್ರವೃತ್ತಿಯನ್ನು ರೂಢಿಸಿಕೊಳ್ಳಿ: ನ್ಯಾ. ಶಾಂತವೀರ ಶಿವಪ್ಪ

ಉಡುಪಿ: ಸರಕಾರ ಹೆಣ್ಣು ಮಕ್ಕಳ ರಕ್ಷಣೆಗೆ ಅನೇಕ ಕಾನೂನು ಜಾರಿಗೆ ತಂದಿದ್ದು, ಇವುಗಳ ಬಗ್ಗೆ ಹೆಣ್ಣು ಮಕ್ಕಳು ಅರಿವು ಹೊಂದುವುದರೊಂದಿಗೆ ಅವುಗಳ ಉಪಯೋಗ ಪಡೆದುಕೊಳ್ಳಬೇಕು. ಹೆಣ್ಣು ಮಕ್ಕಳು ಶಿಕ್ಷಣವಂತರಾಗಿ ಸ್ವಂತ ಉದ್ಯೋಗ ಹೊಂದುವುದರೊಂದಿಗೆ ಆರ್ಥಿಕವಾಗಿ ಸಬಲರಾಗಿ ಸ್ವಾವಲಂಬಿಗಳಾಗಬೇಕು. ವೀರರಾಣಿ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕ ಸೇರಿದಂತೆ ಮತ್ತಿತರ ವೀರ ವನಿತೆಯರ ಧೈರ್ಯ ಸಾಹಸ ಪ್ರವೃತ್ತಿಯನ್ನು ಪ್ರತಿಯೊಬ್ಬ ಹೆಣ್ಣುಮಕ್ಕಳು ಮೈಗೂಡಿಸಿಕೊಳ್ಳಬೇಕು ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಶಾಂತವೀರ ಶಿವಪ್ಪ […]

ಅಪಘಾತ ಪಡಿಸಿ ಮರಣಕ್ಕೆ ಕಾರಣನಾದ ಆರೋಪಿಗೆ ಶಿಕ್ಷೆ

ಉಡುಪಿ: ಅತಿವೇಗ ಹಾಗೂ ಅಜಾಗರೂಕತೆಯಿಂದ ತ್ರಿಚಕ್ರ ಗೂಡ್ಸ್ ವಾಹನವನ್ನು ಚಲಾಯಿಸಿ, ಪಾದಚಾರಿಯ ಸಾವಿಗೆ ಕಾರಣವಾದ ಆರೋಪಿಗೆ ನಗರದ 1 ನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2017 ಮಾರ್ಚ್ 28 ರಂದು ರಾತ್ರಿ 7.45 ರ ಸುಮಾರಿಗೆ ಉಡುಪಿ ತಾಲೂಕು ವಾರಂಬಳ್ಳಿ ಗ್ರಾಮದ ನಿವಾಸಿಯಾದ ದಿನೇಶ್ ನಾಯಕ್ ಎಂಬಾತನು ಬಾರ್ಕೂರು – ಬ್ರಹ್ಮಾವರ ಮುಖ್ಯ ರಸ್ತೆಯ ಹಂದಾಡಿ ಗ್ರಾಮದ ಗಣೇಶ್ ಸ್ಟೋರ್ಸ್ ಎದುರು ಬಾರ್ಕೂರು ಕಡೆಯಿಂದ ಬ್ರಹ್ಮಾವರ ಕಡೆಗೆ […]

ಹಿರಿಯಡಕ: ಸಿಕ್ ಟೆಕ್ ಸೊಲ್ಯುಶನ್ ಸ್ಥಳಾಂತರಿತ ಕಚೇರಿ ಉದ್ಘಾಟನೆ

ಹಿರಿಯಡಕ: ಕಳೆದ 12 ವರ್ಷಗಳಿಂದ ಗ್ರಾಮೀಣ ಭಾಗವಾದ ಹಿರಿಯಡಕದಲ್ಲಿ ಉತ್ತಮ ಆನ್ ಲೈನ್ ಸೇವೆ ನೀಡಿ, ಗ್ರಾಹಕರಿಗೆ ಅನುಕೂಲವಾಗುವಂತೆ ತನ್ನ ಕಚೇರಿಯನ್ನು ವಿಸ್ತರಿಸಿ ಜನರಿಗೆ ಇನ್ನಷ್ಟು ಸೇವೆ ದೊರಕಿಸಲು ಮುಂದಾಗಿರುವುದು ಶ್ಲಾಘನೀಯ ಎಂದು ಉದ್ಯಮಿ ನಟರಾಜ ಹೆಗ್ಡೆ ಹೇಳಿದರು. ಅವರು ಅ.9ರಂದು ಹಿರಿಯಡಕ ಧನಲಕ್ಷ್ಮಿ ಕಾಂಪ್ಲೆಕ್ಸ್ ನ 2ನೇ ಮಹಡಿಯಲ್ಲಿ ಕಳೆದ 12 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಸಿಸ್ ಟೆಕ್ ಸೊಲ್ಯೂಶನ್ ಕಚೇರಿ ಇದೀಗ ನೆಲಮಹಡಿಗೆ ಸ್ಥಳಾಂತರಗೊಂಡಿದ್ದು, ಅದನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದಲ್ಲಿ ರೈತರ ಸಹಕಾರಿ ಸಂಘದ ಮುಖ್ಯ […]