ವ್ಯಾಂಡಿಸ್ ಸೀಕ್ರೆಟ್ಸ್ ಒಳ ಉಡುಪುಗಳ ಮಳಿಗೆ ಉದ್ಘಾಟನೆ

ಮಣಿಪಾಲ: ಇಲ್ಲಿನ ಸಿಂಡಿಕೇಟ್ ಸರ್ಕಲ್‌ನ ಸಾಯಿ ರಾಮ್ ಮಾಲ್ ಬಳಿಯ ಸಾಯಿ ಕೃಪಾ ಅಪಾರ್ಟ್‌ಮೆಂಟ್ ಕಾಂಪ್ಲೆಕ್ಸ್‌ನಲ್ಲಿ ಅಕ್ಟೋಬರ್ 16 ರಂದು ವ್ಯಾಂಡಿಸ್ ಸೀಕ್ರೆಟ್ಸ್ ಒಳ ಉಡುಪು ಮಳಿಗೆಯನ್ನು ಉದ್ಘಾಟಿಸಲಾಯಿತು. ಉಡುಪಿ ಜಿಲ್ಲೆಯಲ್ಲಿ ಎಲ್ಲಾ ರೀತಿಯ ಒಳ ಉಡುಪುಗಳು ದೊರೆಯುವ ಮಳಿಗೆ ಇದಾಗಿದ್ದು, ಈ ಸಾಹಸೋದ್ಯಮದಲ್ಲಿ ಯಶಸ್ಸು ಸಾಧಿಸುವ ನಿರೀಕ್ಷೆಯಲ್ಲಿರುವುದಾಗಿ ಮಳಿಗೆಯ ಮಾಲಕಿ ಶ್ರೀಮತಿ ವಂದಿತಾ ಕಾಮತ್ ತಿಳಿಸಿದ್ದಾರೆ. ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಗಳಾಗಿ ಚಿಪ್ಸಿ ಐಟಿ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್‌ನ ಸಿಇಒ ಶಾಂಭವಿ ಭಂಡಾರ್ಕರ್ ಮತ್ತು ಮಣಿಪಾಲ […]
ನೊಯ್ಡಾ: ಬೀದಿನಾಯಿ ಹಾವಳಿಗೆ ಏಳು ತಿಂಗಳ ಕಂದಮ್ಮ ಬಲಿ

ನೊಯ್ಡಾ: ಉತ್ತರ ಪ್ರದೇಶದ ನೋಯ್ಡಾ ಸೆಕ್ಟರ್ 100 ರ ಬಹುಮಹಡಿ ಕಟ್ಟಡದ ಸೊಸೈಟಿಯಲ್ಲಿ ಸೋಮವಾರ ಸಂಜೆ ಕಾರ್ಮಿಕನೊಬ್ಬನ ಏಳು ತಿಂಗಳ ಮಗುವನ್ನು ಬೀದಿನಾಯಿಯೊಂದು ಕೊಂದು ಹಾಕಿದೆ. ಅಂಬೆಗಾಲಿಡುತ್ತಿದ್ದ ಗಾಯಾಳು ಮಗುವನ್ನು ಐಸಿಯುಗೆ ದಾಖಲಿಸಲಾಗಿತ್ತು. ನಾಯಿ ದಾಳಿಯಲ್ಲಿ ಮಗುವಿನ ಕರುಳು ಹೊರಬಂದಿದ್ದು, ನೋಯ್ಡಾದ ಯಥಾರ್ಥ್ ಆಸ್ಪತ್ರೆಯಲ್ಲಿ ಮಗುವಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ದುರದೃಷ್ಟವಶಾತ್ ಅದು ಯಶಸ್ವಿಯಾಗಲಿಲ್ಲ. ರಾತ್ರಿಯಿಡೀ ಚಿಂತಾಜನಕ ಸ್ಥಿತಿಯಲ್ಲಿದ್ದ ಮಗು ಮಂಗಳವಾರ ಬೆಳಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಸೆಕ್ಟರ್ 100 ರಲ್ಲಿರುವ ಲೋಟಸ್ ಬೌಲೆವಾರ್ಡ್ ಎಂಬ ನೋಯ್ಡಾ ಹೌಸಿಂಗ್ ಸೊಸೈಟಿಯಲ್ಲಿ […]
ಸುರತ್ಕಲ್ ಟೋಲ್ ಗೇಟಿಗೆ ಮುತ್ತಿಗೆ: ಪ್ರತಿಭಟನಾಕಾರರ ಬಂಧನ

ಸುರತ್ಕಲ್: ಅಕ್ಟೋಬರ್ 18 ರಂದು ಟೋಲ್ ಗೇಟ್ ವಿರೋಧಿ ಸಮಿತಿಯಿಂದ ಕರೆಯಲಾಗಿದ್ದ ಪ್ರತಿಭಟನೆಯ ಕಾವು ಜೋರಾಗಿದ್ದು, ಹಲವರ ಬಂಧನವಾಗಿದೆ. ಪ್ರತಿಭಟನಾಕಾರರು ಟೋಲ್ ಗೇಟ್ ಮುತ್ತಿಗೆ ತಡೆಯಲು ಹಾಕಲಾಗಿದ್ದ ಬ್ಯಾರಿಕೇಡ್ ಅನ್ನು ದಾಟಿ ಟೋಲ್ ಗೆ ಮುತ್ತಿಗೆ ಹಾಕಿದ್ದಾರೆ. ಕಾಂಗ್ರೆಸ್ ನಾಯಕ ಮಿಥುನ್ ರೈ ಟೋಲ್ ಗೇಟ್ ಮೇಲೆ ಹತ್ತಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ತೆರವುಗೊಳಿಸಲು ಲಾಠಿ ಪ್ರಹಾರ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕೆಲವರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ. ಪ್ರತಿಭಟನೆಯಲ್ಲಿ ನಿರತರಾಗಿದ್ದ ಮಾಜಿ ವಿಧಾನ್ ಪರಿಷತ್ ಸದಸ್ಯ ಐವನ್ ಡಿಸೋಜಾ, […]
ಮಾಹೆ: ಮೊದಲ ಮಾದರಿ ವಿಶ್ವಸಂಸ್ಥೆ ಕಾರ್ಯಕ್ರಮ ಆಯೋಜನೆ

ಮಣಿಪಾಲ: ಮಣಿಪಾಲ್ ಕಾಲೇಜ್ ಆಫ್ ಫಾರ್ಮಾಸ್ಯುಟಿಕಲ್ ಸೈನ್ಸಸ್ ನಲ್ಲಿರುವ ಮಣಿಪಾಲ್ ಅಸೋಸಿಯೇಷನ್ ಆಫ್ ಫಾರ್ಮಸಿ ಸ್ಟೂಡೆಂಟ್ಸ್, ಇಂಟರ್ ನ್ಯಾಶನಲ್ ಫಾರ್ಮಾಸ್ಯುಟಿಕಲ್ ಸ್ಟುಡೆಂಟ್ಸ್ ಫೆಡರೇಷನ್, ವಿಶ್ವ ಆರೋಗ್ಯ ಅಸೆಂಬ್ಲಿ ಸಮಿತಿ ತಮ್ಮ ಮೊದಲ ಮಾದರಿ ವಿಶ್ವಸಂಸ್ಥೆ ಅನ್ನು ಆಯೋಜಿಸಿತು. “ಮಾನವೀಯ ತುರ್ತುಸ್ಥಿತಿಗಳಲ್ಲಿ ರೋಗ ನಿಯಂತ್ರಣ”ವು ವಿಶ್ವಸಂಸ್ಥೆಯ ಪರಿಹಾರ ಕಾರ್ಯಸೂಚಿಯಾಗಿತ್ತು. ಸಾರ್ವಜನಿಕ ಆರೋಗ್ಯದ ಸುಧಾರಣೆಯನ್ನು ಪ್ರತಿಪಾದಿಸಲು ಈ ವೇದಿಕೆಯು ವಿದ್ಯಾರ್ಥಿಗಳಿಗೆ ಜಾಗತಿಕ ಆರೋಗ್ಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಅವಕಾಶವನ್ನು ಒದಗಿಸಿತು. ರಾಜತಾಂತ್ರಿಕತೆ ಮತ್ತು ನಾಯಕತ್ವ ಕೌಶಲ್ಯಗಳಲ್ಲಿ ಆಳವಾದ ಜ್ಞಾನವನ್ನು […]
ಶಾಸಕ ಹರೀಶ್ ಪೂಂಜಾ ಬೆದರಿಕೆ ಪ್ರಕರಣ: ಸಿಐಡಿಗೆ ಹಸ್ತಾಂತರ

ಬೆಳ್ತಂಗಡಿ: ಕಾರು ಓವರ್ ಟೇಕ್ ವಿಷಯದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ತಲವಾರು ತೋರಿಸಿ ಬೆದರಿಕೆ ಹಾಕಿದ್ದಾರೆನ್ನಲಾದ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸಿಐಡಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಅ.13ರ ರಾತ್ರಿ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಬೇರೊಂದು ಕಾರಿನಲ್ಲಿದ್ದ ವ್ಯಕ್ತಿ ಶಾಸಕ ಹರೀಶ್ ಪೂಂಜಾ ಕಾರನ್ನು ಬೆನ್ನಟ್ಟಿ ಅಡ್ಡಗಟ್ಟಿ ತಲವಾರು […]