ಕನ್ನಡ ರಾಜ್ಯೋತ್ಸವ ಪೂರ್ವಬಾವಿ ಸಭೆ
ಉಡುಪಿ: ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 1 ರಂದು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಕನ್ನಡ ರಾಜ್ಯೋತ್ಸವ ಆಚರಣೆ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 67 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ನವೆಂಬರ್ 1 ರಂದು ಉಡುಪಿ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರು […]
ರಾಧಾಕೃಷ್ಣ ನೃತ್ಯನಿಕೇತನ ವತಿಯಿಂದ ಭರತಮುನಿ ಜಯಂತ್ಯುತ್ಸವ
ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ರಾಧಾಕೃಷ್ಣ ನೃತ್ಯನಿಕೇತನ ಉಡುಪಿ ವತಿಯಿಂದ “ಭರತಮುನಿ ಜಯಂತ್ಯುತ್ಸವ” ವನ್ನು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ಉದ್ಘಾಟಿಸಿದರು. ಕನ್ನಡ ಉಪನ್ಯಾಸಕ ಮತ್ತು ಲೇಖಕ ರವಿಚಂದ್ರ ಬಾಯಾರಿ ಕೊಕ್ಕರ್ಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಭ್ಯಾಗತರಾಗಿ ಕಿರುತೆರೆ ಕಲಾವಿದರಾದ ಕಾರ್ತಿಕ್ ಸಾಮಗ ಭಾಗವಹಿಸಿದ್ದರು. ವಿದುಷಿ ಶುಭದಾ ಸುಧೀರ್, ವಿದುಷಿ ಡಾ.ಸುಪರ್ಣಾ ವೆಂಕಟೇಶ್, ವಿದುಷಿ ಡಾ.ಚೇತನ ಆಚಾರ್ಯ, ವಿದುಷಿ ಉಮಾಶಂಕರಿ,ವಿದುಷಿ ಜಗನ್ನಾಥ ಆಚಾರ್ಯ ಎಳ್ಳಂಪಳ್ಳಿ […]
ಕಾಂಗ್ರೆಸ್ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ: 24 ವರ್ಷಗಳ ಬಳಿಕ ಗಾಂಧಿಯೇತರ ಅಧ್ಯಕ್ಷ
ನವದೆಹಲಿ: ಕರ್ನಾಟಕದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬುಧವಾರ ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್ ಅವರನ್ನು ಸೋಲಿಸಿ 24 ವರ್ಷಗಳ ಬಳಿಕ ಮೊದಲ ಗಾಂಧಿಯೇತರ ಮತ್ತು ನಾಲ್ಕು ದಶಕಗಳ ಬಳಿಕ ಮೊದಲ ಪರಿಶಿಷ್ಟ ಜಾತಿಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 1988 ರಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ನಿರ್ಣಯದ ಮೂಲಕ ಸೋನಿಯಾ ಗಾಂಧಿ ಅವರನ್ನು ಪಕ್ಷದ ಮುಖ್ಯಸ್ಥರಾಗಲು ಆಹ್ವಾನಿಸಿ, ಸೀತಾರಾಮ್ ಕೇಸರಿ ಅವರನ್ನು ಅನೌಪಚಾರಿಕವಾಗಿ ಪದಚ್ಯುತಗೊಳಿಸಿದ ನಂತರ 24 ವರ್ಷಗಳಲ್ಲಿ ಕಾಂಗ್ರೆಸ್ ಅನ್ನು ಮುನ್ನಡೆಸುವ ಮೊದಲ ಗಾಂಧಿಯೇತರ ವ್ಯಕ್ತಿಯಾಗಿ […]
ನೇಪಾಳದಲ್ಲಿ 5.1 ತೀವ್ರತೆಯ ಭೂಕಂಪ: ಬಿಹಾರದ ಕೆಲವು ಭಾಗಗಳಲ್ಲಿ ಕಂಪನ
ಕಠ್ಮಂಡು: ಕಠ್ಮಂಡುವಿನ ಪೂರ್ವಕ್ಕೆ 53 ಕಿ.ಮೀ ದೂರದಲ್ಲಿ ಬುಧವಾರ ಮಧ್ಯಾಹ್ನ 2.52ರ ಸುಮಾರಿಗೆ 5.1 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ಆಳವು ಭೂಮಿಯಿಂದ 10 ಕಿಮೀ ಆಳದಲ್ಲಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಪಾಟ್ನಾ ಸೇರಿದಂತೆ ಬಿಹಾರದ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಪಾಟ್ನಾ ಘಟಕ ತಿಳಿಸಿದೆ.
ನಮ್ಮ ಭೂಗ್ರಹ ಜೀವಂತವಾಗಿದೆ ಮತ್ತು ಸ್ವಂತ ಬುದ್ದಿಮತ್ತೆಯನ್ನು ಹೊಂದಿದೆ!
ಖಗೋಳಜೀವಶಾಸ್ತ್ರಜ್ಞರ ಪ್ರಕಾರ ನಮ್ಮ ಭೂಗ್ರಹವು ಜೀವಂತವಾಗಿದೆ ಮಾತ್ರವಲ್ಲದೆ ಅದು ತನ್ನದೇ ಆದ ಬುದ್ದಿಮತ್ತೆಯನ್ನು ಹೊಂದಿದೆ. ಯಾವುದೇ ಗ್ರಹದ ಸಾಮೂಹಿಕ ಜ್ಞಾನ ಮತ್ತು ಅರಿವಿನ ಸಾಮರ್ಥ್ಯಗಳನ್ನು ವಿವರಿಸುತ್ತಾ, ವಿಜ್ಞಾನಿಗಳು ಈ ಕಲ್ಪನೆಯನ್ನು “ಗ್ರಹಗಳ ಬುದ್ಧಿಮತ್ತೆ” ಎಂದು ಕರೆದಿದ್ದಾರೆ. ಈ ಲೇಖನವು ಇಂಟರ್ನ್ಯಾಷನಲ್ ಜರ್ನಲ್ ಆಫ್ ಆಸ್ಟ್ರೋಬಯಾಲಜಿಯಲ್ಲಿ ಪ್ರಕಟಿಸಲ್ಪಟ್ಟಿದೆ. ರೋಚೆಸ್ಟರ್ ವಿಶ್ವವಿದ್ಯಾಲಯದ ಆಡಮ್ ಫ್ರಾಂಕ್, ಪ್ಲಾನೆಟರಿ ಸೈನ್ಸ್ ಇನ್ಸ್ಟಿಟ್ಯೂಟ್ ನ ಡೇವಿಡ್ ಗ್ರಿನ್ಸ್ಪೂನ್ ಮತ್ತು ಅರಿಜೋನಾ ಸ್ಟೇಟ್ ಯೂನಿವರ್ಸಿಟಿಯ ಸಾರಾ ವಾಕರ್ ಎನ್ನುವ ಮೂವರು ವಿಜ್ಞಾನಿಗಳು ಇಂಟರ್ನ್ಯಾಷನಲ್ ಜರ್ನಲ್ ಆಫ್ […]