ವ್ಯಕ್ತಿ ನಾಪತ್ತೆ

ಉಡುಪಿ: ನೇಜಾರ್ ನಿಡಂಬಳ್ಳಿ ನಿವಾಸಿ ಪ್ರವೀಣ್ ಬೆಳ್ಚಾಡ (44) ಎಂಬ ವ್ಯಕ್ತಿಯು ಅಕ್ಟೋಬರ್ 19 ರಂದು ಬೆಳಗ್ಗೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಮೊ.ನಂ: 9480805447, ಮಲ್ಪೆ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಕೊಡವೂರು ಗ್ರಾಮದ ಪಡುಕೆರೆ ಶನೀಶ್ವರ ಮಂದಿರದ ಬಳಿಯ ಪಾಪನಾಶಿನಿ ಹೊಳೆಯಲ್ಲಿ ಸೆಪ್ಟಂಬರ್ 29 ರಂದು ಬೆಳಗ್ಗೆ 6.30 ರ ಸುಮಾರಿಗೆ 30 -35 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯ ವಾರಾಸುದಾರರು ಯಾರಾದರೂ ಇದ್ದಲ್ಲಿ ಮಲ್ಪೆ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2573999, ಮೊ.ನಂ:9480805447 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಯಕ್ಷ ರಂಗಾಯಣದ ಸಂಚಾರಿ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನ

ಉಡುಪಿ: ಕಾರ್ಕಳ ಯಕ್ಷ ರಂಗಾಯಣದ ಸಂಚಾರಿ ರಂಗ ತಂಡಕ್ಕೆ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ. ರಂಗಭೂಮಿಯಲ್ಲಿ ಅನುಭವ ಹೊಂದಿರುವ, ತಾಳ-ಲಯ-ಸಂಗೀತ-ಕುಣಿತದ ಬಗ್ಗೆ ಕನಿಷ್ಠ ಜ್ಞಾನ ಹೊಂದಿರುವ, ಕನ್ನಡ ಭಾಷೆಯನ್ನು ಸ್ಪಷ್ಟವಾಗಿ ಓದಲು- ಉಚ್ಚರಿಸಲು ಬರುವ 18 ರಿಂದ 30 ವರ್ಷದೊಳಗಿನ ಕಲಾವಿದರು ಅರ್ಜಿ ಸಲ್ಲಿಸಲು ಅಕ್ಟೋಬರ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಿಶೇಷ ಕರ್ತವ್ಯಾಧಿಕಾರಿ, ಯಕ್ಷ ರಂಗಾಯಣ, ಕೋಟಿ ಚೆನ್ನಯ ಥೀಂ ಪಾರ್ಕ್, ಕಾರ್ಕಳ, ಉಡುಪಿ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯಕ್ಷ ರಂಗಾಯಣದ […]

ದೈವ ನರ್ತಕರಿಗೆ ತಿಂಗಳಿಗೆ ರೂ. 2 ಸಾವಿರ ಮಾಸಶನ: ಸಚಿವ ಸುನಿಲ್ ಕುಮಾರ್ ಘೋಷಣೆ

ಉಡುಪಿ/ಮಂಗಳೂರು: ಕರಾವಳಿ ಭಾಗದಲ್ಲಿ ದೈವ ನರ್ತಕರಿಗೆ ದೀಪಾವಳಿ ಶುಭಸುದ್ದಿ ಬಂದಿದೆ. ದೈವ ನರ್ತಕರಿಗೆ ಮಾಸಾಶನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. 60 ವರ್ಷ ಮೇಲ್ಪಟ್ಟ ದೈವನರ್ತನ ಮಾಡುವವರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಮಾಸಾಶನ ಕೊಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಕರ್ನಾಟಕ ಸಂಸ್ಕೃತಿ,ಆಚರಣೆಗಳ ನೆಲೆಬೀಡು. ಅದರಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಭೂತಾರಾಧನೆಯು ಸಹ ಒಂದು.ಭೂತಾರಾಧನೆಯಲ್ಲಿ ದೈವ ನರ್ತನ ಮಾಡುವ […]

ದೀಪಾವಳಿಗೆ ಭರ್ಜರಿ ಉಡುಗೊರೆ: 75,000 ಯುವಕರಿಗೆ ಸರ್ಕಾರಿ ಉದ್ಯೋಗ ನೇಮಕಾತಿ ಪತ್ರ ಹಸ್ತಾಂತರಿಸಲಿರುವ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದಾದ್ಯಂತದ ಸುಮಾರು 75,000 ಯುವಕರು ಮತ್ತು ಅವರ ಕುಟುಂಬಗಳಿಗೆ ದೀಪಾವಳಿಯನ್ನು ವಿಶೇಷವಾಗಿಸಿದ್ದು, ಅಕ್ಟೋಬರ್ 22 ರಂದು ಯುವಕರಿಗೆ ಅವರ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಿದ್ದಾರೆ. ಪಟ್ಟಿ ಮಾಡಲಾದ ಯುವಕರಿಗೆ ಪ್ರಧಾನಿ ಮೋದಿ ವರ್ಚುವಲ್ ಕಾರ್ಯಕ್ರಮದ ಮೂಲಕ ನೇಮಕಾತಿ ಪತ್ರವನ್ನು ಹಸ್ತಾಂತರಿಸಲಿದ್ದಾರೆ. ಪ್ರಧಾನ ಮಂತ್ರಿಗಳ ಕಚೇರಿಯು ಎಲ್ಲಾ ಸಚಿವಾಲಯಗಳಿಗೆ ಆಯಾ ಸಚಿವಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಪತ್ತೆಹಚ್ಚಲು ಮತ್ತು ನಿಗದಿತ ಸಮಯದಲ್ಲಿ ಭರ್ತಿ ಮಾಡಲು ಹೇಳಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. […]