ಪ್ರಜಾಪ್ರಭುತ್ವ ವಿಶ್ವದ ಉತ್ತಮ ಆಡಳಿತ ವ್ಯವಸ್ಥೆ: ಕೆ. ಜಯಪ್ರಕಾಶ್ ಹೆಗ್ಡೆ

ಉಡುಪಿ: ಪ್ರಜಾಪ್ರಭುತ್ವ ವ್ಯವಸ್ಥೆಯು ವಿಶ್ವದಲ್ಲಿ ಉತ್ತಮ ಆಡಳಿತ ವ್ಯವಸ್ಥೆಯಾಗಿದೆ. ಕಾನೂನನ್ನು ಜನತೆಗಾಗಿ ರೂಪಿಸಿದ್ದು, ಕಾನೂನಿನಿಂದ ಜನಸಾಮಾನ್ಯರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳುವುದು ನೈಜ ಆಡಳಿತದ ಲಕ್ಷಣ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಇಂದು ನಗರದ ಪೂರ್ಣಪ್ರಜ್ಞ ಕಾಲೇಜಿನಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ ಹಾಗೂ ಪೂರ್ಣಪ್ರಜ್ಞ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಯುವ ಉತ್ಸವ : ಯುವ ಸಂವಾದ –ಇಂಡಿಯಾ @ 2047 […]

ಪೊಲೀಸರಿಗೆ ಸೈನಿಕರಂತೆ ಗೌರವ ನೀಡಬೇಕು: ನ್ಯಾ. ಶಾಂತವೀರ ಶಿವಪ್ಪ

ಉಡುಪಿ: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ತಮ್ಮ ಜೀವವನ್ನೇ ಪಣಕ್ಕಿಟ್ಟು ಹಗಲಿರುಳು ಶ್ರಮಿಸುವ ಪೊಲೀಸರಿಗೆ, ದೇಶದ ಗಡಿಯ ರಕ್ಷಣೆಯಲ್ಲಿ ತೊಡಗಿರುವ ಸೈನಿಕರಿಗೆ ನೀಡುವಷ್ಟು ಗೌರವ ಮತ್ತು ಸೌಲಭ್ಯಗಳನ್ನು ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು. ಅವರು ಇಂದು ಉಡುಪಿ ಜಿಲ್ಲಾ ಪೋಲೀಸ್ ವತಿಯಿಂದ, ಚಂದು ಮೈದಾನದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ, ಪೊಲೀಸ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಪೊಲೀಸರು ದೇಶದೊಳಗೆ ಅಡಗಿರುವ ದ್ರೋಹಿಗಳನ್ನು ಪತ್ತೆ ಹಚ್ಚಿ, […]

ಜಿಲ್ಲೆಯಲ್ಲಿ ಜೆಇ ಲಸಿಕೆ ಅಭಿಯಾನ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ: ಮಕ್ಕಳಲ್ಲಿ ಮೆದುಳು ಜ್ವರದ ಮಾದರಿಯಲ್ಲಿ ಕಂಡು ಬರುವ ಜೆಇ (ಜಪಾನಿಸ್ ಎನ್‌ಸೆಫಲಿಟಿಸ್) ವೈರಸ್‌ನಿಂದ ಆಗುವ ವಿವಿಧ ಆರೋಗ್ಯ ಸಮಸ್ಯೆಗಳನ್ನು ತಡೆಯಲು ಜಿಲ್ಲೆಯಲ್ಲಿನ 1 ರಿಂದ 15 ವರ್ಷದೊಳಗಿನ 2,06,730 ಮಕ್ಕಳಿಗೆ ಲಸಿಕೆ ನೀಡಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ, ಜೆಇ ಲಸಿಕೆ ಕಾರ್ಯಕ್ರಮದ ಕುರಿತು ನಡೆದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಭೆಯ ಅಧ್ಯಕ್ಷತೆ […]

ಮಣಿಪಾಲ: ಬಾಲಕ ನಾಪತ್ತೆ

ಉಡುಪಿ: ಮಣಿಪಾಲ ಪ್ರಗತಿನಗರದ ಮಂಚಿ ನಿವಾಸಿ ಅಭಿಷೇಕ್ (17) ಎಂಬ ಬಾಲಕನು ಅಕ್ಟೋಬರ್ 15 ರಂದು ಸಂಜೆ 4 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಮರಾಠಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಠಾಣೆ ದೂ.ಸಂಖ್ಯೆ: 0820-2570328, ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ದೂ.ಸಂಖ್ಯೆ: 9480805448, ಮಣಿಪಾಲ ಪಿ.ಎಸ್.ಐ ಮೊ.ನಂ: 9480805475 […]

ಟ್ರೊಲ್ ಗೆ ಹೆದರುವ ಹೆಣ್ಣುಮಗಳು ನಾನಲ್ಲ; ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಪ್ರತಿಭಾ ಕುಳಾಯಿ 

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ, ಇದಕ್ಕೆಲ್ಲ ಹೆದರುವ ಹೆಣ್ಣು ಮಗಳು ನಾನಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅವರು ಮಂಗಳೂರಿನ ಮಹಾಜನಗಳೇ ನೀವು ನನ್ನ ವಿರುದ್ದ ಮಾಡುತ್ತಿರುವ ಟ್ರೋಲ್ ನನ್ನಲ್ಲಿ ಇನ್ನಷ್ಟು ನಿಮ್ಮ ಪರವಾಗಿ ನಿಲ್ಲಲು ಮತ್ತು ಸಾಮಾಜಿಕ ಹೋರಾಟಗಳಲ್ಲಿ ತೊಡಗಿಕೊಳ್ಳಲು ಶಕ್ತಿ ಸ್ಪೂರ್ತಿಯನ್ನು ತುಂಬುತ್ತದೆ. ನಿಮ್ಮ ಅಭಿಮಾನಕ್ಕೆ ಚಿರಋಣಿ ಎಂದು ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಬಿಜೆಪಿ […]