ಕಡಬ: ಬೆಡ್ ಶೀಟ್ ಮಾರಾಟಗಾರರಿಂದ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಯತ್ನ

ಕಡಬ: ಬೆಡ್ ಶೀಟ್ ಮಾರಾಟಗಾರರ ಸೋಗಿನಲ್ಲಿ ಮನೆಗೆ ಬಂದ ಇಬ್ಬರು ವ್ಯಕ್ತಿಗಳು ಮನೆಯಲ್ಲಿದ್ದ ಮಹಿಳೆಯ ಮೇಲೆ ದೌರ್ಜನ್ಯಕ್ಕೆ ಯತ್ನಿಸಿರುವ ಘಟನೆ ವರದಿಯಾಗಿದೆ. ರಫೀಕ್ ಹಾಗೂ ರಮೀಝುದ್ದೀನ್ ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ಬೆಡ್ ಶೀಟ್ ಮಾರಾಟ ಮಾಡಲು ಕಡಬ ತಾಲೂಕಿನ ದೋಲ್ಪಾಡಿ ಗ್ರಾಮದ ಕಾಯರ್ ಮನೆ ಎಂಬಲ್ಲಿಗೆ ಬಂದಿದ್ದು, ಆ ಸಂದರ್ಭ ಆರೋಪಿಗಳು ಮಹಿಳೆಯ ಮೈಮೇಲೆ ಕೈ ಹಾಕಿ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ಸಂದಿಗ್ದ ಸನ್ನಿವೇಶದಲ್ಲಿ ಅಪಾಯವನ್ನರಿತು ಮಹಿಳೆಯು ಬೊಬ್ಬೆ ಹಾಕಿದ್ದು, ಇದರಿಂದ ಹೆದರಿದ ಆರೋಪಿಗಳು ಸ್ಥಳದಿಂದ […]

ಅಕ್ಟೋಬರ್ 23 ರಂದು ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಾಗೂ ಧನ್ವಂತರಿ ಜಯಂತಿ ಕಾರ್ಯಕ್ರಮ

ಉಡುಪಿ: ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಉಡುಪಿ ಹಾಗೂ ಆಯುಷ್ ಫೆಡರೇಷನ್ ಆಫ್ ಇಂಡಿಯಾ ಉಡುಪಿ ತಾಲೂಕು ಇವರ ಸಹಯೋಗದಲ್ಲಿ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಹಾಗೂ ಧನ್ವಂತರಿ ಜಯಂತಿ ಕಾರ್ಯಕ್ರಮವು ಅಕ್ಟೋಬರ್ 23 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ […]

ಬೌದ್ಧ ಸನ್ಯಾಸಿಯ ವೇಷದಲ್ಲಿದ್ದ ಚೀನಾದ ಗೂಢಚಾರಿಣಿಯ ಬಂಧನ: ದೆಹಲಿ ಪೋಲೀಸರಿಂದ ಕಾರ್ಯಾಚರಣೆ

ನವದೆಹಲಿ: ಭಾರತ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಚೀನಾದ ಮಹಿಳೆಯೊಬ್ಬಳನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಬೌದ್ಧ ಸನ್ಯಾಸಿ ಎಂದು ಹೇಳಿಕೊಂಡ ಕೈ ರೂವೋ ಚೀನಾದ ಗೂಢಚಾರಿ ಎಂದು ಶಂಕಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಐಎಎನ್ಎಸ್ ವರದಿ ಮಾಡಿದೆ. ಕೈ ರೂವೋ ಒಬ್ಬ ಸುಶಿಕ್ಷಿತ ಮತ್ತು ಕುತಂತ್ರಿ ಮಹಿಳೆಯಾಗಿದ್ದು, ಚೀನಾದ ಕಮ್ಯುನಿಸ್ಟ್ ನಾಯಕರು ತನ್ನನ್ನು ಕೊಲ್ಲಲು ಬಯಸಿದ್ದರು ಹಾಗಾಗಿ ತಾನು ತಪ್ಪಿಸಿಕೊಂಡು ಭಾರತಕ್ಕೆ ಓಡಿ ಬಂದಿದ್ದೆ ಎಂದು ಹೇಳುವ ಮೂಲಕ ತನಿಖಾಧಿಕಾರಿಗಳನ್ನು ದಾರಿತಪ್ಪಿಸಲು ಪ್ರಯತ್ನಿಸಿದ್ದಳು ಎಂದು ಮೂಲವೊಂದು […]

ವ್ಯಕ್ತಿಯೋರ್ವರ ಜೀವ ಉಳಿಸಲು ತನ್ನ ರೈಲನ್ನೇ ತಪ್ಪಿಸಿಕೊಂಡ ಬಂಟ್ವಾಳದ ಆಪದ್ಭಾಂಧವೆ

ಬಂಟ್ವಾಳ: ತಮ್ಮ ರೈಲನ್ನೆ ತಪ್ಪಿಸಿಕೊಂಡು ವ್ಯಕ್ತಿಯೊಬ್ಬರ ನೆರವಿಗೆ ಧಾವಿಸಿ ಅವರ ಪ್ರಾಣ ಉಳಿಸಿದ ಘಟನೆ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ಸೆ.28 ರಂದು ಸಂಭವಿಸಿದೆ. ನೆಲ್ಯಾಡಿ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ಹೇಮಾವತಿ ಎನ್ನುವವರೇ ಆ ಆಪದ್ಬಾಂಧವೆ. ಹೇಮಾವತಿ ಅವರು ಸೆ.28 ರಂದು ಬಂಟ್ವಾಳದಿಂದ ಬೆಂಗಳೂರಿಗೆ ಪ್ರಯಾಣಿಸಲು ಬಂಟ್ವಾಳ ರೈಲ್ವೆ ನಿಲ್ದಾಣ್ದಕ್ಕೆ ಬಂದಿದ್ದು, ತಮ್ಮ ರೈಲಿನ ಬರುವಿಕೆಗಾಗಿ ಕಾಯುತ್ತಿದ್ದರು. ಅದಾಗಲೇ ಅವರ ಬೆನ್ನಹಿಂದೆ ದೊಡ್ಡದಾದ ಒಂದು ಶಬ್ದ ಕೇಳಿಸಿ ಹಿಂತಿರುಗಿ ನೋಡಿದಾಗ ಸುಮಾರು 50 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಕುಸಿದು […]

ಹಾಸನ: ನೆಲಕ್ಕುರುಳಿದ ಮೋಟಾರ್ ಬೈಕ್; ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಗುರುವಾರದಂದು ಮೋಟರ್ ಬೈಕ್ ಹಿಂಬದಿ ಸವಾರಳಾಗಿದ್ದ 11 ವರ್ಷದ ಶಾಲಾ ಬಾಲಕಿಯೊಬ್ಬಳು ಮಳೆ ನೀರಿನಲ್ಲಿ ಕೊಚ್ಚಿ ಹೋದ ಘಟನೆ ಗುರುವಾರ ಸಂಭವಿಸಿದೆ. ಐದನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಹೆಗ್ಗದಗೆರೆ ನಿವಾಸಿ ರಂಜಿತಾ ತನ್ನ ಸಂಬಂಧಿಯೊಬ್ಬರ ಬೈಕಿನಲ್ಲಿ ಹಿಂಬದಿ ಸವಾರಳಾಗಿ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಭಾರೀ ಮಳೆಯ ಕಾರಣದಿಂದ ಇಲ್ಲಿನ ದಡ್ಡಿಹಳ್ಳಿಯ ಕೆರೆಯ ನೀರು ಉಕ್ಕೇರಿ ಹರಿದ ಪರಿಣಾಮ ಬೈಕ್ ನೆಲಕ್ಕೆ ಉರುಳಿದೆ. ಇದನ್ನು ಕಂಡ ಗ್ರಾಮಸ್ಥರು ಬೈಕ್ ಚಾಲಕನನ್ನು ರಕ್ಷಿಸಿದ್ದಾರೆ ಆದರೆ ದುರಾದೃಷ್ಟವಶಾತ್ ಬಾಲಕಿ […]