ಉಡುಪಿ: ಇ-ಸ್ಯಾಂಡ್ ಆ್ಯಪ್, ಮರಳು ಮಿತ್ರ ಆ್ಯಪ್ ಮೂಲಕ ಮರಳು ಲಭ್ಯ

ಉಡುಪಿ: ಜಿಲ್ಲಾ ವ್ಯಾಪ್ತಿಯ ಕುಂದಾಪುರ ತಾಲೂಕು ಗುಲ್ವಾಡಿ, ಕಾವ್ರಾಡಿ, ಬಳ್ಕೂರು ಗ್ರಾಮದ ಮರಳು ಬ್ಲಾಕ್ ಸಂಖ್ಯೆ 4, ಹಳ್ನಾಡು, ಜಪ್ತಿ ಗ್ರಾಮದ ಮರಳು ಬ್ಲಾಕ್ ಸಂಖ್ಯೆ 6 ರಲ್ಲಿನ ಮರಳು ಸ್ಟಾಕ್‌ ಯಾರ್ಡ್ನಲ್ಲಿ ಲಭ್ಯವಿರುವ ಮರಳನ್ನು ಸಾರ್ವಜನಿಕರು, ಖಾಸಗಿಯವರು ಮತ್ತು ಸರ್ಕಾರಿ ಕಾಮಗಾರಿಗಳಿಗೆ ಉಡುಪಿ ಇ-ಸ್ಯಾಂಡ್ ಆ್ಯಪ್ ಮೂಲಕ ಹಾಗೂ ಕಾರ್ಯಪಾಲಕ ಅಭಿಯಂತರರು, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ವಿಭಾಗ, ಮಂಗಳೂರುರವರಿಗೆ ಸರ್ಕಾರಿ ಕಾಮಗಾರಿಗೆ ಮೀಸಲಿರಿಸಿರುವ ಅಂಪಾರು ಗ್ರಾಮದ ಮರಳು ಬ್ಲಾಕ್ ಸಂಖ್ಯೆ 11 ರಲ್ಲಿ […]

ಕಳತ್ತೂರು: ಉಚಿತ ನೇತ್ರ ತಪಾಸಣಾ ಮತ್ತು ಪೊರೆ ಚಿಕಿತ್ಸೆ ಶಿಬಿರ ಸಂಪನ್ನ

ಕಳತ್ತೂರು: ಕುಶಲ ಶೇಖರ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ಕಳತ್ತೂರು ಶೇಖರ ಬಿ. ಶೆಟ್ಟಿ ನೇತೃತ್ವದಲ್ಲಿ ಪ್ರಸಾದ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರಜೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ, ಅಂಧತ್ವ ನಿವಾರಣಾ ವಿಭಾಗ ಉಡುಪಿ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರವನ್ನು ಆದಿತ್ಯವಾರ ಕಳತ್ತೂರಿನ ಕುಶಲ ಶೇಖರ ಶೆಟ್ಟಿ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಪ್ರಸಾದ ನೇತ್ರಾಲಯ […]

ಭಾಷಣ ಸ್ಪರ್ಧೆ: ಶ್ರೀ ವೆಂಕಟರಮಣ ಕಾಲೇಜು ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ನೆಹರು ಯುವಕೇಂದ್ರ ಉಡುಪಿ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ‘ಯುವ ಉತ್ಸವ-ಯುವ ಸಂವಾದ’ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಅ. 21 ರಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪ್ರಣಮ್ಯ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ , ಪ್ರಾಂಶುಪಾಲರು , […]

ಬೆಳಕಿನ ಹಬ್ಬದಂದು ಕತ್ತಲೆಯಲ್ಲಿದ್ದ ಮನೆಗಳಿಗೆ ಆಸರೆಯಾದ ಶಾಸಕ ರಘುಪತಿ ಭಟ್

ಉಡುಪಿ: ಶಾಸಕ ಕೆ. ರಘುಪತಿ ಭಟ್ ಅವರ ನೇತೃತ್ವದ ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೆಳಕಿನ ಹಬ್ಬ ದೀಪಾವಳಿಯ ದಿನದಂದು ಉಡುಪಿ ನಗರದಲ್ಲಿ ಒಟ್ಟು 7 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗಿದ್ದು, ಸರಳಬೆಟ್ಟು ವಾರ್ಡಿನ ಕೊರಗರ ಕಾಲೋನಿಯ 3 ಮನೆಗಳ ವಿದ್ಯುತ್ ಸಂಪರ್ಕಕ್ಕೆ ಶಾಸಕ ರಘುಪತಿ ಭಟ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಶಶಿಕಿರಣ್ ಉಮಾಕಾಂತ್, ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಡಾ. ರವಿರಾಜ್ […]

ಬ್ರಹ್ಮಾವರ: ಮಾಲೀಕರಿಲ್ಲದ ವೇಳೆ ಮನೆಗೆ ನುಗ್ಗಿ 1.50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಬ್ರಹ್ಮಾವರ: ತಾಲೂಕಿನ ಹೇರಾಡಿ ರಂಗನಕೆರೆಯಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು 1.50 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಆರ್.ಎಸ್ ಉದಯ್ ಕುಮಾರ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಇವರು ಬೆಂಗಳೂರಿಗೆ ತೆರಳಿದ್ದ ಸಮಯದಲ್ಲಿ ಅವರ ಪತ್ನಿ ಮತ್ತು ಮಗ ಅವರ ಅಕ್ಕನ ಮನೆಗೆ ಹೋಗಿದ್ದರು. ಅಲ್ಲದೆ ಉದಯ್ ಅವರ ತಮ್ಮ ಕೂಡಾ ಮನೆಗೆ ಬೀಗ ಹಾಕಿ ಅವರ ಸೈಕಲ್ ಅಂಗಡಿಗೆ ಹೋಗಿದ್ದರು. ಅ.22 ರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು […]