ಮಣಿಪಾಲ: ಮಾಹೆ ವಿದ್ಯಾ ಸಮೂಹ ಸಂಸ್ಥೆಯ 5500 ವಿದ್ಯಾರ್ಥಿಗಳಿಂದ ಕೋಟಿ ಕಂಠ ಗಾಯನ

ಮಣಿಪಾಲ: 67ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿರುವ “ಕೋಟಿ ಕಂಠ ಗಾಯನ” ಕಾರ್ಯಕ್ರಮದ ಪ್ರಯುಕ್ತ ಶುಕ್ರವಾರ ಜಿಲ್ಲಾಡಳಿತ ಉಡುಪಿ ಜಿಲ್ಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇವರ ಸಹಯೋಗದೊಂದಿಗೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಲ್ಲಿ ನಡೆದ “ಕೋಟಿ ಕಂಠ ಗಾಯನ” ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್ ರವರು ಭಾಗವಹಿಸಿದರು. 5500 ವಿದ್ಯಾರ್ಥಿಗಳು ಕೋಟಿ ಕಂಠ ಗಾಯನ ಕಾರ್ಯಕ್ರಮದಲ್ಲಿ […]

ಸಮುದ್ರ ಮಧ್ಯದಿಂದಲೂ ಮೊಳಗಿತು ಕನ್ನಡಾಭಿಮಾನ: ದೋಣಿಯಲ್ಲಿ ನಿಂತು ಕೋಟಿ ಕಂಠ ಗಾಯನ

ಮಲ್ಪೆ: ಈ ಬಾರಿಯ ರಾಜ್ಯೋತ್ಸವ ಸಂದರ್ಭದಲ್ಲಿ ನಾಡು ನುಡಿಯ ಜಾಗೃತಿಗಾಗಿ ಕೋಟಿ ಕಂಠ ಗಾಯನವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಾದ್ಯಂತ ಕಚೇರಿ ಕಟ್ಟಡ ಮೈದಾನವೆನ್ನದೆ ಎಲ್ಲೆಲ್ಲೂ ಕನ್ನಡದ ಶಂಖನಾದ ಮೊಳಗಿದೆ. ಈ ಉತ್ಸಾಹ ಕೇವಲ ನೆಲಕ್ಕೆ ಮಾತ್ರ ಸೀಮಿತವಾಗಿರದೆ ಸಾಗರದ ಮಧ್ಯೆಯೂ ಕನ್ನಡದ ಡಿಂಡಿಮವನ್ನು ಬಾರಿಸಲಾಗಿದೆ. ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್, ಮಹಾಲಕ್ಷ್ಮೀ ಕೋ.ಆಪರೇಟಿವ್ ಬ್ಯಾಂಕ್ ಉಡುಪಿ, ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಮೀನುಗಾರರ ಸಂಘದ ಸಹಕಾರದೊಂದಿಗೆ ಮಲ್ಪೆಯ ಸಮುದ್ರ ಮದ್ಯದಲ್ಲಿ ಹತ್ತಾರು ದೋಣಿಗಳನ್ನು […]

ಬ್ರಹ್ಮಾವರ: ವಿದ್ಯಾಲಕ್ಷ್ಮಿ ಸಮೂಹ ಸಂಸ್ಥೆಯಲ್ಲಿ ಕೋಟಿ ಕಂಠ ಗಾಯನ

ಬ್ರಹ್ಮಾವರ: 67 ನೇ ಕರ್ನಾಟಕ ರಜ್ಯೋತ್ಸವದ ಪ್ರಯುಕ್ತ ನನ್ನ ನಾಡು ನನ್ನ ಹಾಡು ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾದ ಕೋಟಿ ಕಂಠ ಗಾಯನದಲ್ಲಿ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡರು. ವಿದ್ಯಾರ್ಥಿಗಳಿಗೆ ನಾಡು ನುಡಿ ಸಂಸ್ಕೃತಿ ಮತ್ತು ಪರಂಪರೆಯ ಕುರಿತು ಅರಿವು ಮೂಡಿಸಿ ಸಂಕಲ್ಪ ವಿಧಿ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಹಾಗೂ ನಿರ್ದೇಶಕಿ ಶ್ರೀಮತಿ ಮಮತಾ ಮತ್ತು ಪ್ರಾಂಶುಪಾಲೆ ಶ್ರೀಮತಿ ಸೀಮಾ ಭಟ್ ಉಪಸ್ಥಿತರಿದ್ದರು.

ವೃತ್ತಿ ನಿರತ ಛಾಯಾಗ್ರಾಹಕರಿಂದ ಛಾಯಾ ಧರ್ಮ ಜಾಗೃತಿ ಅಭಿಯಾನ: ಎಸೆದ  ದೇವರ ಹಳೆ ಫೋಟೋಗಳಿಗೆ ಗೌರವಯುತ ವಿದಾಯ

ಉಡುಪಿ: ಜನರ ಅಂದ ಚೆಂದದ ಛಾಯಾಚಿತ್ರಗಳನ್ನು ತಮ್ಮ ಕ್ಯಾಮರಾ ಕಣ್ಣುಗಳಲ್ಲಿ ಸೆರೆಹಿಡಿದು ನೆನಪುಗಳನ್ನು ಶಾಶ್ವತವಾಗಿಸುವ ಛಾಯಾಗ್ರಾಹಕರು ಹೊಸ ಅಭಿಯಾನವೊಂದನ್ನು ಹುಟ್ಟು ಹಾಕಿದ್ದು, ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ಪ್ರಾಪ್ತವಾಗಿದೆ. ಮನೆ ಕಚೇರಿಗಳಲ್ಲಿ ಹಲವಾರು ವರ್ಷಗಳವರೆಗೆ ಪೂಜಿಸಲ್ಪಟ್ಟು ವಿರೂಪವಾಗಿ ಎಸೆದಿರುವಂತಹ ದೇವರ ಚಿತ್ರಗಳನ್ನು ವಿಶಿಷ್ಟ ರೀತಿಯಲ್ಲಿ ವಿಲೇವಾರಿ ಮಾಡಿ ಜನರಿಂದ ಪ್ರಶಂಸೆ ಪಡೆಯುತ್ತಿದ್ದಾರೆ. ಸಾರ್ವಜನಿಕರು ಒಂದು ಕಾಲದಲ್ಲಿ ಪೂಜಿಸಿ ಆರಾಧಿಸಿ ಇನ್ನು ಬೆಡವೆಂದು ಎಸೆದ ದೇವರ ಹಳೆಯ ಫೋಟೋಗಳು, ಒಡೆದ ಗ್ಲಾಸಿನ ಫ್ರೇಮ್ ಗಳು, ಭಿನ್ನವಾದ ಮೂರ್ತಿಗಳು, ತುಕ್ಕು […]

ಡಾ. ವಿ.ಎಸ್. ಆಚಾರ್ಯ ಅವರ ಪುತ್ಥಳಿ ಬಳಿ ಮುಗಿಲು ಮುಟ್ಟಿದ ಕೋಟಿ ಕಂಠ ಗಾಯನ

ಮಣಿಪಾಲ: ಕನ್ನಡ ರಾಜ್ಯೋತ್ಸವದ ಪ್ರಯುಕ್ತ‌ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವು ಶುಕ್ರವಾರದಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ ಮುಂಬಾಗದಲ್ಲಿರುವ ಡಾ. ವಿ.ಎಸ್. ಆಚಾರ್ಯ ಅವರ ಪುತ್ಥಳಿ ಬಳಿ ನಡೆಯಿತು. ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಕನ್ನಡ ಶಾಲು ಮತ್ತು ಟೋಪಿಗಳನ್ನು ಧರಿಸಿ ರಾಜ್ಯ […]