ಕಾಂತಾರ ವರಾಹರೂಪಂ ಹಾಡಿಗೆ ಕಂಟಕ: ಕೃತಿಚೌರ್ಯದ ಆಧಾರದ ಮೇಲೆ ತಾತ್ಕಾಲಿಕ ತಡೆಯಾಜ್ಞೆ ನೀಡಿದ ಕೇರಳ ಹೈಕೋರ್ಟ್

ತಿರುವನಂತಪುರಂ: ವಿಶ್ವದಾದ್ಯಂತ ಸಂಚಲನ ಮೂಡಿಸಿದ ಕಾಂತಾರ ಚಿತ್ರಕ್ಕೆ ಕಂಟಕವೊಂದು ಎದುರಾಗಿದೆ. ಬೆಳಗ್ಗಿನ ಸುಪ್ರಭಾತದಂತೆ ಕಾಂತಾರ ಚಿತ್ರದ ಪಂಜುರ್ಲಿ ದೈವದ ‘ವರಾಹ ರೂಪಂ’ ಹಾಡು ಮನಸೂರೆಗೊಳಿಸುವಂತಿದ್ದು, ನಿತ್ಯವೂ ಎಲ್ಲರ ಮನೆಯಲ್ಲೂ ಕೇಳಿಸುತ್ತಿದೆ. ಇದೀಗ ಚಿತ್ರತಂಡವು ಈ ಹಾಡನ್ನು ಬಳಸದಂತೆ ಕೇರಳದ ನ್ಯಾಯಾಲಯವು ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಕೇರಳ ಮೂಲದ ರಾಕ್ ಮ್ಯೂಸಿಕ್ ಬ್ಯಾಂಡ್ ‘ತೈಕ್ಕುಡಮ್ ಬ್ರಿಡ್ಜ್’ ಸಲ್ಲಿಸಿದ ಮೊಕದ್ದಮೆಯಲ್ಲಿ ಕೋಝಿಕ್ಕೋಡ್‌ನ ಪ್ರಧಾನ ಜಿಲ್ಲಾ ನ್ಯಾಯಾಲಯವು ಮಧ್ಯಂತರ ಆದೇಶವನ್ನು ನೀಡಿದೆ. ವರಾಹ ರೂಪಂ ಅನ್ನು ತೈಕ್ಕುಡಮ್ ಬ್ರಿಡ್ಜ್ ಬ್ಯಾಂಡ್ ನ […]
ಆಶ್ರಮದಲ್ಲಿ ಬೆಳೆದ ಹೆಣ್ಣಿಗೆ ಆಸರೆಯಾದ ಜಿಲ್ಲಾಡಳಿತ: ಅಣ್ಣನ ಸ್ಥಾನದಲ್ಲಿ ನಿಂತು ಮದುವೆ ವಿಧಿ ಪೂರೈಸಿದ ಶಾಸಕ

ಉಡುಪಿ: ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತಗಳು ಜನಪರವಾಗಿದ್ದು, ಮಾನವೀಯ ನೆಲೆಗಟ್ಟಿನಲ್ಲಿ ಕಾರ್ಯಗಳನ್ನು ಕೈಗೊಂಡಾಗ ಜನರ ಮೆಚ್ಚುಗೆಗೆ ಸಹಜವಾಗಿಯೇ ಪಾತ್ರರಾಗುತ್ತಾರೆ. ಜಿಲ್ಲೆಯ ಜನಪ್ರತಿನಿಧಿ ಹಾಗೂ ಜಿಲ್ಲಾಡಳಿತವು ಇಂತಹದ್ದೇ ಒಂದು ಕಾರ್ಯವನ್ನು ಕೈಗೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಇಲ್ಲಿನ ನಿಟ್ಟೂರು ಸರ್ಕಾರಿ ರಾಜ್ಯ ಮಹಿಳಾ ನಿಲಯದಲ್ಲಿ ಬೆಳೆದ ಅನಾಥ ಹುಡುಗಿ ಜಯಶ್ರೀ (ವಿಜಯಶ್ರೀ)ಎಂಬವರನ್ನು ಮಲ್ಲೇಶ ಡಿ.ಎಲ್. ಎಂಬವರೊಂದಿಗೆ ವಿವಾಹ ಮಾಡಿಕೊಡಲು ನಿಶ್ಚಯಿಸಲಾಗಿದ್ದು, ಅನಾಥ ಹೆಣ್ಣುಮಗಳಿಗೆ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಆಸರೆಯಾಗಿದ್ದಾರೆ. ಶುಕ್ರವಾರದಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಜ್ಯ ಮಹಿಳಾ […]
ಕೊಲ್ಲೂರು ದೇವಸ್ಥಾನಕ್ಕೆ ರಿಷಭ್ ಶೆಟ್ಟಿ ಭೇಟಿ

ಕುಂದಾಪುರ: ಶುಕ್ರವಾರದಂದು ಇಲ್ಲಿನ ಜಗತ್ಪ್ರಸಿದ್ದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ರಿಷಭ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ದಂಪತಿಗಳು ಪರಿವಾರ ಸಮೇತರಾಗಿ ಭೇಟಿ ನೀಡಿ ದೇವಿಯ ಆಶೀರ್ವಾದ ಪಡೆದರು.
ಅಕ್ರಮ ಟೋಲ್ ಗೇಟ್ ವಿರೋಧಿಸಿ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ

ಸುರತ್ಕಲ್: ಅಕ್ರಮ ಟೋಲ್ ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಶುಕ್ರವಾರದಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಪ್ರತಿಭಟನೆ ಆರಂಭಿಸಿದ್ದು, ಮುಂಜಾನೆಯೆ ಟೋಲ್ ಗೇಟ್ ಬಳಿ ಹೋರಾಟ ಸಮಿತಿ ಮುಖಂಡರು ಮತ್ತು ಸದಸ್ಯರು ಧರಣಿ ಕೂತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಸಂಸದ ನಳಿನ್ ಕುಮಾರ್ ಕಟೀಲ್ ಮೇಲೆ ಜಿಲ್ಲೆಯ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಏಳು ವರ್ಷಗಳಿಂದ ಟೋಲ್ ತೆರವಿಗೆ ದಿನಾಂಕ ಮುಂದೂಡುತ್ತಲೇ ಬಂದಿದ್ದಾರೆ. ಈಗ ನವೆಂಬರ್ 9 ಗಡುವು ನೀಡಿದ್ದಾರೆ. ಆದರೆ […]
ಗಾಂಧಿ ಆಸ್ಪತ್ರೆಯಲ್ಲಿ ಕೋಟಿ ಕಂಠ ಗಾಯನ

ಉಡುಪಿ: ನಗರದ ಹೃದಯ ಭಾಗದಲ್ಲಿರುವ ಗಾಂಧಿ ಆಸ್ಪತ್ರೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಆಸ್ಪತ್ರೆಯ ವೈದ್ಯರು, ಶುಶ್ರೂಷಕರು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.