ಕೇಂದ್ರ ಸಚಿವ ಎಲ್.ಮುರುಗನ್ ಶ್ರೀಕೃಷ್ಣ ಮಠ ಭೇಟಿ

ಉಡುಪಿ: ಭಾರತ ಸರಕಾರದ ವಿದೇಶಾಂಗ,ಮೀನುಗಾರಿಕೆ, ಪಶುಸಂಗೋಪನಾ ರಾಜ್ಯ ಮಂತ್ರಿಗಳಾದ ಎಲ್.ಮುರುಗನ್ ರವರು ಕುಟುಂಬ ಸಮೇತರಾಗಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಠದ ದಿವಾನರಾದ ವರದರಾಜ ಭಟ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.

ಭ್ರಷ್ಟಾಚಾರ ಮುಕ್ತ ಭಾರತಕ್ಕಾಗಿ ಬ್ಯಾಂಕ್ ಅಫ್ ಬರೋಡಾದಿಂದ ಜಾಗರೂಕತಾ ಸಪ್ತಾಹ

ಮಂಗಳೂರು: ಸೆಂಟ್ರಲ್ ವಿಜಿಲೆನ್ಸ್ ಆಯೋಗದ ನಿರ್ದೇಶನದಂತೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಸ್ಮರಣಾರ್ಥ ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯವು ಅಕ್ಟೋಬರ್ 31 ರಿಂದ ನವೆಂಬರ್ 06 ರವರೆಗೆ ವಿಜಿಲೆನ್ಸ್ ಜಾಗೃತಿ ಸಪ್ತಾಹವನ್ನು ಆಚರಿಸುತ್ತಿದೆ. ಈ ಸಂಬಂಧವಾಗಿ ನ.06 ರವರೆಗೆ ಬ್ಯಾಂಕ್‌ ನ ಎಲ್ಲಾ ಪಾಲುದಾರರೊಡಗೂಡಿ ಭ್ರಷ್ಟಾಚಾರವನ್ನು ತಡೆಗಟ್ಟಲು ಮತ್ತು ಅದರ ವಿರುದ್ಧ ಹೋರಾಡಲು ವಿವಿಧ ಚಟುವಟಿಕೆಗಳನ್ನು ನಡೆಸಬೇಕಾಗಿದ್ದು, ಕಾರ್ಯಕ್ರಮದ ಅಂಗವಾಗಿ ಆದಿತ್ಯವಾರ ಮಂಗಳೂರಿನ ಪೊಲೀಸ್ ಉಪ ಆಯುಕ್ತ ಅಂಶು ಕುಮಾರ್ ರವರು ವಿಜಯ ಟವರ್ಸ್ […]

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಕಾರ್ಯಾಗಾರ

ಕಾರ್ಕಳ: ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಒಂದು ದಿನದ ಇಂಗ್ಲಿಷ್ ಭಾಷಾ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಸುಳ್ಯದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಭಾರ ಪ್ರಾಂಶುಪಾಲ ಹಾಗೂ ಇಂಗ್ಲಿಷ್ ಭಾಷಾ ಉಪನ್ಯಾಸಕ ಅಬ್ದುಲ್ ಸಮಾದ್ ನೆಕ್ಕಾರೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿ, ನಮ್ಮ ಜೀವನದಲ್ಲಿ ಇಂಗ್ಲಿಷ್ ಭಾಷೆ ಪ್ರಮುಖ ಪಾತ್ರ ವಹಿಸುತ್ತಿದೆ ಎಂದರು. ಜೊತೆಗೆ ಹೊಸ ಇಂಗ್ಲಿಷ್ ಪದಗಳನ್ನು ಬಳಸಿ ವಾಕ್ಯ ರಚಿಸುವ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಿದರು. ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ […]

ಧರ್ಮಸ್ಥಳ : ಕಾರು ಹಾಗೂ ಜೀಪ್ ಮಧ್ಯೆ ಅಪಘಾತ; ನಾಲ್ವರಿಗೆ ಗಂಭೀರ ಗಾಯ

ಧರ್ಮಸ್ಥಳ: ಕಾರು ಹಾಗೂ ಜೀಪ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಿಳಿನೆಲೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ ಹೋಗುತ್ತಿದ್ದ ಜೀಪ್ ಹಾಗೂ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕಾರು ಬಿಳಿನೆಲೆ ಸೇತುವೆಯ ಸಮೀಪ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಜೀಪಿ‌ನಲ್ಲಿದ್ದ ಇಬ್ಬರು ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಶ್ರೀ ಯಕ್ಷನಿಧಿ ಮೂಡುಬಿದಿರೆ ಸಪ್ತಮ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ

ಶ್ರೀ ಯಕ್ಷನಿಧಿ ಮೂಡುಬಿದಿರೆ ಯಕ್ಷಗಾನ ಶಿಕ್ಷಣ ಸಂಸ್ಥೆ ಮತ್ತು ಮಕ್ಕಳ ಮೇಳ ಇದರ ಸಪ್ತಮ ವಾರ್ಷಿಕೋತ್ಸವ ಮತ್ತು ಶ್ರೀ ಯಕ್ಷ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭವು ನ. 06 ರವಿವಾರ ಬೆಳಿಗ್ಗೆ 8.00ರಿಂದ ರಾತ್ರಿ 12:30 ರವರೆಗೆ ಮೂಡಬಿದಿರೆ ಸಮಾಜ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ವಿವರ: ಬೆಳಿಗ್ಗೆ 8.00 ಗಂಟೆಗೆ ಚೌಕಿಪೂಜೆ ಬೆಳಿಗ್ಗೆ 8.15 ರಿಂದ 9.30 ರವರೆಗೆ ಪೂರ್ವರಂಗ (ನಮ್ಮ ಸಂಸ್ಥೆಯಲ್ಲಿ ಹಿಮ್ಮೇಳ ಕಲಿಯುತ್ತಿರುವ ಮಕ್ಕಳಿಂದ) ಬೆಳಿಗ್ಗೆ 9.30 ರಿಂದ 10.30 ರವರೆಗೆ – ದೀಪ […]