ಉಡುಪಿ ನಗರಸಭಾ ಹಾಲಿ ಸದಸ್ಯೆ ಸೆಲಿನಾ ಕರ್ಕಡ ಇನ್ನಿಲ್ಲ

ಉಡುಪಿ: ಪೆರಂಪಳ್ಳಿ ವಾರ್ಡ್ ನ ಕಾಂಗ್ರೆಸ್ ನ ನಗರಸಭಾ ಸದಸ್ಯೆ ತಮ್ಮ 52 ನೇ ವಯಸ್ಸಿನಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಸೆಲಿನಾ ಅವರು ಸ್ವಲ್ಪ ಸಮಯದಿಂದ ಅಸೌಖ್ಯದಿಂದ ಬಳಲುತ್ತಿದ್ದು, ಬುಧವಾರದಂದು ಕಾಯಿಲೆ ಹೆಚ್ಚಾದ ಹಿನ್ನೆಲೆಯಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ನಿಧನಹೊಂದಿದ್ದಾರೆ. ಎರಡು ಬಾರಿಯ ನಗರಸಭಾ ಸದಸ್ಯೆಯಾಗಿದ್ದ ಸೆಲಿನಾ ಪತಿ ಮತ್ತು ಪುತ್ರನನ್ನು ಅಗಲಿದ್ದಾರೆ.

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಎರಡು ದಿನಗಳ ಕಾಲ ನೀರು ಸರಬರಾಜು ಸ್ಥಗಿತ

ಉಡುಪಿ: ನಗರಸಭಾ ವ್ಯಾಪ್ತಿಯ ಬಜೆ ನೀರು ಸರಬರಾಜು ರೇಚಕ ಸ್ಥಾವರದದಲ್ಲಿ ತಾಂತ್ರಿಕ ನಿರ್ವಹಣಾ ಕಾರ್ಯಗಳನ್ನು ನಿರ್ವಹಿಸಲಾಗುವುದರಿಂದ ಅಕ್ಟೋಬರ್ 31 ರಂದು ಹಾಗೂ ನವೆಂಬರ್ 01 ರಂದು ಉಡುಪಿ ನಗರಸಭಾ ವ್ಯಾಪ್ತಿಯ 35 ವಾರ್ಡುಗಳಲ್ಲಿ ಕುಡಿಯುವ ನೀರು ಸರಬರಾಜಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಮೆಸ್ಕಾಂ ಸಿಬ್ಬಂದಿಗಳಿಂದ ಕೋಟಿ ಕಂಠ ಗಾಯನ

ಉಡುಪಿ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಉಡುಪಿ ವೃತ್ತದ ಅಧೀಕ್ಷಕ ಇಂಜಿನಿಯರ್ ದಿನೇಶ್ ಉಪಾಧ್ಯಾಯರವರ ಮಾರ್ಗ ದರ್ಶನದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ಶುಕ್ರವಾರದಂದು ಉಡುಪಿ ಮೆಸ್ಕಾಂ ಕಚೇರಿ ಆವರಣದಲ್ಲಿ ನಡೆಯಿತು. ಮಹಿಳೆಯರು ಸಮವಸ್ತ್ರ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಬಳಿಕ ಕನ್ನಡ ಭಾಷೆಯ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಕೆ ಪ್ರಸನ್ನಕುಮಾರ್, ಗಣರಾಜ್ ಭಟ್ ಹಾಗೂ ವಿವಿಧ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಮಲ್ಪೆ: ವಿಶ್ವ ಪಾರ್ಶ್ವವಾಯು ದಿನದ ಅಂಗವಾಗಿ ಕಸ್ತೂರ್ಬಾ ಆಸ್ಪತ್ರೆ ವತಿಯಿಂದ ಮರಳು ಶಿಲ್ಪ ಕಲೆ ಅನಾವರಣ

ಮಲ್ಪೆ: ವಿಶ್ವದಾದ್ಯಂತ ಪಾರ್ಶ್ವವಾಯು ಸಂಭವವನ್ನು ಕಡಿಮೆ ಮಾಡಲು ಪ್ರತಿ ವರ್ಷ ಅಕ್ಟೋಬರ್ 29 ರಂದು ವಿಶ್ವ ಪಾರ್ಶ್ವವಾಯು ದಿನವನ್ನು ಆಚರಿಸಲಾಗುತ್ತದೆ. ಪಾರ್ಶ್ವವಾಯುವಿನಿಂದಾಗುವ ಗಂಭೀರ ಸ್ವರೂಪ, ಪಾರ್ಶ್ವವಾಯುವಿನ ಬಗ್ಗೆ ಜಾಗೃತಿ ಮೂಡಿಸಲು, ಪಾರ್ಶ್ವವಾಯುವಿನ ಅಪಾಯದ ಅಂಶಗಳು ಮತ್ತು ಚಿಹ್ನೆಗಳ ಬಗ್ಗೆ ಉತ್ತಮ ಸಾರ್ವಜನಿಕ ಅರಿವಿನ ಮೂಲಕ ಪಾರ್ಶ್ವವಾಯುವಿನ ಹೊರೆಯನ್ನು ಕಡಿಮೆ ಮಾಡುವ ವಿಧಾನಗಳ ಕುರಿತು ಮಾತನಾಡಲು ಉತ್ತಮ ಅವಕಾಶವನ್ನು ಈ ದಿನವು ಕಲ್ಪಿಸಿದೆ. ಈ ದಿನದ ಅಂಗವಾಗಿ ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ನರವಿಜ್ಞಾನ ವಿಭಾಗವು […]

ಶಕಲಕ ಬೂಮ್ ಬೂಮ್ ರಸಪ್ರಶ್ನೆ ಸ್ಪರ್ಧೆಯ ಪೋಸ್ಟರ್ ಬಿಡುಗಡೆಗೊಳಿಸಿದ ಮಾನಸಿ ಸುಧೀರ್

ಉಡುಪಿ: ತುಳುನಾಡಿನ ಮೊಟ್ಟಮೊದಲ ತುಳು ಹಾರರ್ ಸಸ್ಪೆನ್ಸ್ ಥ್ರಿಲ್ಲರ್ ಚಿತ್ರ ಶಕಲಕ ಬೂಮ್ ಬೂಮ್ ಪೋಸ್ಟರಿನಲ್ಲಿರುವ ವ್ಯಕ್ತಿಯನ್ನು ಗುರುತಿಸಿ ಬಹುಮಾನ ಗೆಲ್ಲಿ ಎನ್ನುವ ರಸಪ್ರಶ್ನೆಯನ್ನು ಆಯೋಜಿಸಲಾಗಿದ್ದು, ಇದಕ್ಕೆ ಅಭೂತಪೂರ್ವ ಸ್ಪಂದನೆ ದೊರಕಿತ್ತು. ಭಾನುವಾರದಂದು ನರಸಿಂಗೆಯಲ್ಲಿ ಕಾಂತಾರಾ ಖ್ಯಾತಿಯ ಮಾನಸಿ ಸುಧೀರ್ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿ ಸರಿ ಉತ್ತರ ನೀಡಿದ ವಿಜೇತರ ಹೆಸರನ್ನು ಬಹಿರಂಗಪಡಿಸಿದರು. ಚಿತ್ರದ ಪೋಸ್ಟರಿನಲ್ಲಿ ನಟ ಅರವಿಂದ ಬೋಳಾರ್ ಅವರು ಜೀನೀ ಪಾತ್ರದಲ್ಲಿದ್ದು, ಎರಡೂ ಸರಿ ಉತ್ತರ ನೀಡಿದವರಲ್ಲಿ ಪವನ್ ಮಡಿವಾಳ ಮತ್ತು ಒಂದು ಸರಿ […]