ಮುದ್ದಾಗಿ ನಗುತಿಹನಮ್ಮ ನಮ್ಮ ಸೂರ್ಯ! ನಗುತ್ತಿರುವ ಸೂರ್ಯನ ಚಿತ್ರವನ್ನು ಹಂಚಿಕೊಂಡ ನಾಸಾ
ನ್ಯೂಯಾರ್ಕ್: ಈ ವಾರ ಸೂರ್ಯನ ಹೊಸ ಉಪಗ್ರಹ ಚಿತ್ರವನ್ನು ಅಮೇರಿಕಾದ ಬಾಹ್ಯಾಕಾಶ ಸಂಸ್ಥೆ ನಾಸಾ ಬಿಡುಗಡೆ ಮಾಡಿದೆ. ಈ ಚಿತ್ರದಲ್ಲಿ ನಮ್ಮ ಸೂರ್ಯನು ನಗುತ್ತಿರುವಂತೆ ಭಾಸವಾಗುತ್ತಿದೆ! ನಾಸಾದ ಸೋಲಾರ್ ಡೈನಾಮಿಕ್ಸ್ ಅಬ್ಸರ್ವೇಟರಿಯಿಂದ ಫೋಟೋವನ್ನು ಸೆರೆಹಿಡಿಯಲಾಗಿದೆ. ಅಬ್ಸರ್ವೇಟರಿಯು ಸೂರ್ಯನ ವಿಕಿರಣದ ಉತ್ಪಾದನೆಯಲ್ಲಿನ ಬದಲಾವಣೆಗಳನ್ನು ಅರ್ಥಮಾಡಿಕೊಳ್ಳಲು ಕೆಲಸ ಮಾಡುತ್ತದೆ. “ನೇರಳಾತೀತ ಬೆಳಕಿನಲ್ಲಿ ನೋಡಿದರೆ, ಸೂರ್ಯನ ಮೇಲಿನ ಕಾಣುವ ಈ ಕಪ್ಪು ಪ್ರದೇಶಗಳನ್ನು ಕರೋನಲ್ ರಂಧ್ರಗಳು ಎಂದು ಕರೆಯಲಾಗುತ್ತದೆ ಮತ್ತು ಅವು ವೇಗದ ಸೌರ ಮಾರುತವು ಬಾಹ್ಯಾಕಾಶಕ್ಕೆ ಚಿಮ್ಮುವ ಪ್ರದೇಶಗಳಾಗಿವೆ” ಎಂದು […]
ನಿಟ್ಟೆ: ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ 2021-22 ನೇ ಸಾಲಿನ ಪದವಿ ಪ್ರದಾನ ಸಮಾರಂಭ
ನಿಟ್ಟೆ: ಪ್ರತಿಯೋರ್ವ ಮಾನವನೂ ತನ್ನ ವಿದ್ಯಾರ್ಥಿ ಜೀವನ, ವೃತ್ತಿ ಜೀವನ ಹಾಗೂ ವೈಯಕ್ತಿಕ ಜೀವನದಲ್ಲಿ ಎದುರಾಗುವ ಎಡರು ತೊಡರುಗಳು, ಅನಿಶ್ಚಿತತೆಯನ್ನು ಸಮರ್ಥವಾಗಿ ತಮ್ಮ ಪ್ರತಿಭೆ ಹಾಗೂ ಸೃಜನಶೀಲತೆಯ ಮೂಲಕ ಎದುರಿಸಲು ಮಾರ್ಗದರ್ಶನ ನೀಡಿದ ಎಲ್ಲರನ್ನೂ ಜೀವನದುದ್ದಕ್ಕೂ ನೆನಪಿನಲ್ಲಿಟ್ಟುಕೊಳ್ಳಬೇಕು. ನಮ್ಮ ಹಾದಿಯಲ್ಲಿ ಎದುರಾಗುವ ತೊಂದರೆಗಳೇ ನಮ್ಮ ಯಶಸ್ಸಿಗೆ ಸ್ಪೂರ್ತಿ ಹಾಗೂ ದಾರಿದೀಪವಾಗಬೇಕು ಎಂದು ಅಮೇರಿಕದ ಹ್ಯಾರಿಸ್ಬರ್ಗ್ ನಲ್ಲಿರುವ ಪೆನ್ ಸ್ಟೇಟ್ ವಿಶ್ವವಿದ್ಯಾಲಯದ ಎಕಡೆಮಿಕ್ ಎಫೇರ್ಸ್ ಎಂಡ್ ಎಡ್ಮಿನಿಶ್ಟ್ರೇಶನ್ ನ ಸೀನಿಯರ್ ಅಸೋಸಿಯೇಟ್ ಡೀನ್ ಡಾ.ಒಮಿದ್ ಅನ್ಸಾರಿ ಅಭಿಪ್ರಾಯಪಟ್ಟರು. ಅಕ್ಟೋಬರ್ […]
ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಅ.31 ರಿಂದ ನ. 13 ರ ವರೆಗೆ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನ
ಉಡುಪಿ: ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ನೆನಪಿಗಾಗಿ ರಾಷ್ಟ್ರ, ರಾಜ್ಯ, ಜಿಲ್ಲೆ ಹಾಗೂ ತಾಲೂಕು ಮಟ್ಟದಲ್ಲಿ , ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಅಕ್ಟೋಬರ್ 31 ರಿಂದ ನವೆಂಬರ್ 13 ರ ವರೆಗೆ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾನೂನು ಅರಿವು ಮತ್ತು ಪ್ರಚಾರ ಅಭಿಯಾನದ ಮೂಲಕ ನಾಗರಿಕರ ಸಬಲೀಕರಣ NALSA Campaigns on […]
ಜಿಲ್ಲೆಯಾದ್ಯಂತ ಗ್ರಾಮ ವನ್ ಕೇಂದ್ರಗಳನ್ನು ತೆರೆಯಲು ಅರ್ಜಿ ಅಹ್ವಾನ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಈಗಾಗಲೇ 175 ಗ್ರಾಮ ವನ್ ಕೇಂದ್ರಗಳು ಪ್ರಾರಂಭಗೊಂಡು ಕಾರ್ಯನಿರ್ವಹಿಸುತಿದ್ದು, ಅಂಬಲಪಾಡಿ, ಕಲ್ಯಾಣಪುರ, ಕಡೇಕಾರ್, ಅಲೆವೂರು, ಸಾಣೂರು, ಮುಂಡ್ಕೂರು, ಬೆಳ್ಮಣ್, ಮರ್ಣೆ, ಬೇಳೂರು, ನಿಟ್ಟೆ, ಕುಕ್ಕುಂದೂರು, ಶಂಕರನಾರಾಯಣ, ಅಮಾಸೆಬೈಲು, ಹೆಜಮಾಡಿ, ಬಡಾ, ಕೊಕ್ಕರ್ಣೆ, ವರಂಗ, ಬೆಳ್ವೆ, ಉಪ್ಪುಂದ, ಶಿರೂರು, ಆರೂರು, ಮುದರಂಗಡಿ,ಕಾಂತಾವರ, ನಂದಳಿಕೆ, ಶಿರ್ಲಾಲು, ಎಡಮೊಗೆ, ಗುಲ್ವಾಡಿ, ಹಟ್ಟಿಯಂಗಡಿ, ಹಾರ್ದಳ್ಳಿ-ಮಂಡಳ್ಳಿ, ಕಿರಿಮಂಜೇಶ್ವರ, ಯಡ್ತಾಡಿ, ಕೋಟ, ಚಾಂತಾರು ಗ್ರಾಮ ಪಂಚಾಯತ್ಗಳಲ್ಲಿ ಗ್ರಾಮ ವನ್ ಕೇಂದ್ರಗಳನ್ನು ತೆರೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಈ ಗ್ರಾಮ […]
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ದಿಗಾಗಿ ನೀಡುವ ಸೌಲಭ್ಯಗಳ ಅರಿವು ಮೂಡಿಸಲು ರಾಜ್ಯಾದ್ಯಂತ ಸಂಚಾರ: ಕೆನಡಿ ಶಾಂತಕುಮಾರ್
ಉಡುಪಿ: ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಮೂಲಕ ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗೆ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಪಡೆಯುವಂತೆ ಕರ್ನಾಟಕ ರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೆ.ಕೆನಡಿ ಶಾಂತಕುಮಾರ್ ಹೇಳಿದರು. ಅವರು ಶನಿವಾರ ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಕ್ರಿಶ್ಚಿಯನ್ ಸಮುದಾಯದವರಿಗೆ ಇಲಾಖೆ ವತಿಯಿಂದ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಹಾಗೂ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ವತಿಯಿಂದ ರಾಜ್ಯಾದ್ಯಂತ ಚರ್ಚ್ ಗಳ […]