ನ.06: ಶ್ರೀ ಯಕ್ಷನಿಧಿ ಮೂಡುಬಿದಿರೆ ಸಪ್ತಮ ವಾರ್ಷಿಕೋತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ
ಶ್ರೀ ಯಕ್ಷನಿಧಿ ಮೂಡುಬಿದಿರೆ ಯಕ್ಷಗಾನ ಶಿಕ್ಷಣ ಸಂಸ್ಥೆ ಮತ್ತು ಮಕ್ಕಳ ಮೇಳ ಇದರ ಸಪ್ತಮ ವಾರ್ಷಿಕೋತ್ಸವ ಮತ್ತು ಶ್ರೀ ಯಕ್ಷ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭವು ನ. 06 ರವಿವಾರ ಬೆಳಿಗ್ಗೆ 8.00ರಿಂದ ರಾತ್ರಿ 12:30 ರವರೆಗೆ ಮೂಡಬಿದಿರೆ ಸಮಾಜ ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ವಿವರ: ಬೆಳಿಗ್ಗೆ 8.00 ಗಂಟೆಗೆ ಚೌಕಿಪೂಜೆ ಬೆಳಿಗ್ಗೆ 8.15 ರಿಂದ 9.30 ರವರೆಗೆ ಪೂರ್ವರಂಗ (ನಮ್ಮ ಸಂಸ್ಥೆಯಲ್ಲಿ ಹಿಮ್ಮೇಳ ಕಲಿಯುತ್ತಿರುವ ಮಕ್ಕಳಿಂದ) ಬೆಳಿಗ್ಗೆ 9.30 ರಿಂದ 10.30 ರವರೆಗೆ – ದೀಪ […]
ಕುಡಿಯೋದೆ ನಮ್ ವೀಕ್ನೆಸ್ಸು ಅನ್ನುತ್ತಿರುವ ಕೋತಿ: ಗ್ರಾಹಕರ ಕೈಯಿಂದ ಬಿಯರ್ ಬಾಟಲಿ ಕಸಿಯುವ ಕೋತಿ ವೀಡಿಯೋ ವೈರಲ್
ರಾಯಬರೇಲಿ: ಉತ್ತರ ಪ್ರದೇಶದ ರಾಯಬರೇಲಿಯಲ್ಲಿ ಕೋತಿಯೊಂದು ಬಿಯರ್ ಕುಡಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಮಂಗವೊಂದು ಕ್ಯಾನ್‌ನಿಂದ ಬಿಯರ್ ಅನ್ನು ಗಟಗಟ ಕುಡಿಯುತ್ತಿರುವ ದೃಶ್ಯ ಕಂಡು ಬಂದಿದೆ. ಈ ಕೋತಿ, ಹತ್ತಿರದ ವೈನ್ ಶಾಪ್‌ನಿಂದ ಮದ್ಯ ಖರೀದಿಸಲು ಬರುವವರ ಕೈಯಿಂದ ಮದ್ಯವನ್ನು ಕಸಿದುಕೊಳ್ಳುತ್ತದೆ ಎಂದು ಸುದ್ದಿ ಸಂಸ್ಥೆ ಆಜ್‌ತಕ್ ವರದಿ ಮಾಡಿದೆ. ವೈನ್ ಶಾಪ್ ಮಾಲಿಕ ಕೋತಿಯ ವರ್ತನೆಯಿಂದ ಬೇಸತ್ತು ಅಧಿಕಾರಿಗಳಿಗೆ ದೂರು ನೀಡಿದ್ದರೂ, ಅಧಿಕಾರಿಗಳನ್ನು ಮಂಗನನ್ನು ಓಡಿಸಿ ಎಂದು ಉದಾಸೀನ ತೋರಿದ್ದಾರೆ. ವೀಡೀಯೋ ವೈರಲ್ […]
ಸರ್ದಾರ್ ವಲ್ಲಭ ಭಾಯ್ ಪಟೇಲ್ ಜನ್ಮ ದಿನ ನಿಮಿತ್ತ ಏಕತೆಗಾಗಿ ಓಟ
ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಹಾಗೂ ಸ.ಪ್ರ.ದ.ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇವರ ಸಂಯುಕ್ತ ಆಶ್ರಯದಲ್ಲಿ ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಉಡುಪಿಯಲ್ಲಿ ಇಂದು ನಡೆದ ಏಕತೆಗಾಗಿ ಓಟ ಎಂಬ ಘೋಷ ವಾಕ್ಯದಡಿ ಜಿಲ್ಲಾ ಮಟ್ಟದ ಕ್ರಾಸ್ ಕಂಟ್ರಿ ಓಟಕ್ಕೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹಾಗೂ ಜಿಲ್ಲಾ ಪೊಲೀಸ್ […]
ಬನ್ನಂಜೆ: ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ರುದ್ರಯಾಗ ಸಂಪನ್ನ
ಬನ್ನಂಜೆ: ಶ್ರೀಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ದೇವರ ಸನ್ನಿಧಿಯಲ್ಲಿ ಸೋಮವಾರ ದೇವಳದ ಶ್ರೀನಿವಾಸ ತಂತ್ರಿಗಳ ನೇತೃತ್ವದಲ್ಲಿ ಶತರುದ್ರಾಭಿಷೇಕ, ನವಕ ಪ್ರಧಾನ ಪೂರ್ವಕ-ರುದ್ರಯಾಗ ನಡೆಯಿತು. ಬೆಳ್ಳಿಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆ, 11 ಗಂಟೆಗೆ ಪೂರ್ಣಾಹುತಿ, ಮಹಾಪೂಜೆ, ಶಿವ ಸನ್ನಿಧಿಯಲ್ಲಿ ನೂರಾರು ಸೀಯಾಳಾಭಿಷೇಕ, ಪಂಚಾಮೃತಾಭಿಷೇಕ, ವಿಶೇಷ ಹೂವಿನ ಅಲಂಕಾರ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾಮ್ ಬನ್ನಂಜೆ, ಅರ್ಚಕ ವಾಸುದೇವ ಉಪಧ್ಯಾಯ, ನಗರಸಭಾ ಸದಸ್ಯೆ ಸವಿತಾ ಹರೀಶ್ ರಾಮ್, ಟಿ ಜಿ ಹೆಗ್ಡೆ, […]
ಸಗಟು ವಿಭಾಗದಲ್ಲಿ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಯೋಜನೆ ಪ್ರಾರಂಭಿಸಲಿರುವ ಆರ್‌ಬಿಐ
ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಸಗಟು ವಿಭಾಗದಲ್ಲಿ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಯೋಜನೆಯನ್ನು ಇಂದು ಪ್ರಾರಂಭಿಸಲಿದೆ. ಸರ್ಕಾರಿ ಭದ್ರತೆಗಳಲ್ಲಿ ದ್ವಿತೀಯ ಮಾರುಕಟ್ಟೆ ವಹಿವಾಟುಗಳ ಇತ್ಯರ್ಥಕ್ಕಾಗಿ ಡಿಜಿಟಲ್ ರೂಪಾಯಿಯನ್ನು ಬಳಸಲಾಗುವುದು. ಇ-ರೂಪಾಯಿ ಬಳಕೆಯಿಂದ ಅಂತರ-ಬ್ಯಾಂಕ್ ಮಾರುಕಟ್ಟೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡುವ ನಿರೀಕ್ಷೆಯಿದೆ ಎಂದು ಆರ್‌ಬಿಐ ಹೇಳಿದೆ. ಕೇಂದ್ರ ಬ್ಯಾಂಕ್ ಹಣದ ಮೂಲಕ ಪಾವತಿಯು, ಪಾವತಿ ಖಚಿತತೆ ಮೂಲಸೌಕರ್ಯದ ಅಗತ್ಯವನ್ನು ಮೊದಲೇ ಖಾಲಿ ಮಾಡುವ ಮೂಲಕ ಅಥವಾ ಮೇಲಾಧಾರದ ಪಾವತಿ ಅಪಾಯವನ್ನು ತಗ್ಗಿಸಲು ಪಾವತಿ ವೆಚ್ಚವನ್ನು ಕಡಿಮೆ […]