ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಫಿಸಿಯೋ ಥೆರಪಿಸ್ಟ್ ಹುದ್ದೆ ಖಾಲಿ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಫಿಸಿಯೋ ಥೆರಪಿಸ್ಟ್ ಹುದ್ದೆಗೆ ಗೌರವಧನ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫಿಸಿಯೋ ಥೆರಪಿ ಅಥವಾ ಅಕ್ಯುಪೇಶನಲ್ ಥೆರಪಿ ಪದವಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ ಪುನರ್ವಸತಿ ಕೇಂದ್ರ, ಭಾರತಿಯ ರೆಡ್ ಕ್ರಾಸ್ ಸಂಸ್ಥೆ, ರೆಡ್ […]
ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳ ಆಟೋರಿಕ್ಷಾ ಸಂಚಾರದಲ್ಲಿ ಮಾರ್ಪಾಡು

ಉಡುಪಿ: ಉಡುಪಿ, ಕುಂದಾಪುರ ಮತ್ತು ಕಾರ್ಕಳ ತಾಲೂಕುಗಳ ವ್ಯಾಪ್ತಿಯ ಪ್ರದೇಶಗಳು ಅಭಿವೃದ್ಧಿ ಹೊಂದಿ ಜನಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಕಾಪು, ಬ್ರಹ್ಮಾವರ, ಹೆಬ್ರಿ ಮತ್ತು ಬೈಂದೂರು ತಾಲೂಕುಗಳು ರಚನೆಯಾಗಿರುವ ಹಿನ್ನೆಲೆ, ನಗರಗಳ ಜನಸಂಖ್ಯೆಗೆ ಅನುಗುಣವಾಗಿ ಆಟೋರಿಕ್ಷಾಗಳನ್ನು ಹೆಚ್ಚಿಸುವುದು, ರಿಕ್ಷಾ ನಿಲುಗಡೆಗೆ ಸ್ಥಳಾವಕಾಶದ ಕೊರತೆ, ರಸ್ತೆಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆಗೊಳಿಸುವುದು, ರಸ್ತೆ ಅಪಘಾತಗಳನ್ನು ತಡೆಯಲು, ವಾಯುಮಾಲಿನ್ಯ ಮತ್ತು ಶಬ್ದಮಾಲಿನ್ಯವನ್ನು ನಿಯಂತ್ರಿಸುವುದು ಸಾರ್ವಜನಿಕರ ಹಿತದೃಷ್ಟಿಯಿಂದ ಅತೀ ಅವಶ್ಯವೆಂದು ಪರಿಗಣಿಸಿ, 2012 ಏಪ್ರಿಲ್ 21 ರ ಅಧಿಸೂಚನೆಯಲ್ಲಿ ಹೊರಡಿಸಿರುವ ಆದೇಶವನ್ನು […]
ಆಭಾ ಕಾರ್ಡ್ ವಿತರಣೆ ಮತ್ತು ಜೋಡಣೆ: ರಾಜ್ಯಮಟ್ಟದಲ್ಲಿ ಮೂರು ಪ್ರಶಸ್ತಿ ಉಡುಪಿ ಪಾಲು

ಉಡುಪಿ: ಜಿಲ್ಲೆಯಲ್ಲಿ ಅತೀ ಹೆಚ್ಚು ಆಭಾ ಕಾರ್ಡ್ ವಿತರಣೆ, ರಾಜ್ಯದಲ್ಲಿ ಅತೀ ಹೆಚ್ಚು ಆರೋಗ್ಯ ದಾಖಲೆಗಳನ್ನು ಆಭಾ ಕಾರ್ಡಿಗೆ ಜೋಡಣೆ ಮಾಡಿಸಿರುವುದು ಮತ್ತು ಜಿಲ್ಲೆಯ ಕಾರ್ಕಳ ತಾಲೂಕು ಆಸ್ಪತ್ರೆಯು ಆಭಾ ಕಾರ್ಡಿಗೆ ಅತೀ ಹೆಚ್ಚು ಆರೋಗ್ಯ ಕಾರ್ಡ್ಗಳನ್ನು ಜೋಡಿಸಿದ ತಾಲೂಕು ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದರಿಂದ ರಾಜ್ಯಮಟ್ಟದಲ್ಲಿ ಮೂರು ಪ್ರಥಮ ಪ್ರಶಸ್ತಿಗಳು ಜಿಲ್ಲೆಗೆ ಅಭಿಸಿದ್ದು, ಇತ್ತೀಚೆಗೆ ಮೈಸೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಮೈಸೂರು ವಿಭಾಗೀಯ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ […]
ಕನ್ನಡ-ತುಳು ಸಾಹಿತ್ಯ ವೇದಿಕೆಯ ವಾಟ್ಸ್ ಆ್ಯಪ್ ಬಳಗದ ಸಾಹಿತ್ಯ ಸಂಪದ ಕಾರ್ಯಕ್ರಮ

ಉಡುಪಿ: ಅಕ್ಟೋಬರ್ 30 ರಂದು ಕನ್ನಡ – ತುಳು ಸಾಹಿತ್ಯ ವೇದಿಕೆ ವಾಟ್ಸ್ ಆ್ಯಪ್ ಬಳಗ ಆಯೋಜಿಸಿದ್ದ ಮೊದಲ ಆಫ್‌ಲೈನ್ ಕಾರ್ಯಕ್ರಮವಾದ ‘ಸಾಹಿತ್ಯ ಸಂಪದ’ ಕಾರ್ಯಕ್ರಮವು ಯಕ್ಷಗಾನ ಕಲಾ ಕೇಂದ್ರ ಹಂಗಾರಕಟ್ಟೆ, ಗುಂಡ್ಮಿ ಇಲ್ಲಿ ಸರಳವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಗೇರಿ ಶೇಖರ ದೇವಾಡಿಗ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕ.ಸಾ.ಪ ಬ್ರಹ್ಮಾವರ ತಾಲೂಕು ಘಟಕದ ಅಧ್ಯಕ್ಷ ರಾಮಚಂದ್ರ ಐತಾಳ್ ಗುಂಡ್ಮಿ, ಯಕ್ಷಗಾನ ಕಲಾ ಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್ ಮತ್ತು ಸಹೋದರ ಬಳಗ ಹೊಂಗಿರಣ ವೇದಿಕೆಯ ನಿರ್ವಾಹಕ […]
ಗುಡ್ಡ ಪಾಣಾರ ಮತ್ತು ಎಂ.ಎ.ನಾಯಕ್ ರವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಭಿನಂದನೆ ಸಲ್ಲಿಕೆ

ಉಡುಪಿ: ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಜಾನಪದ ಕ್ಷೇತ್ರದಲ್ಲಿ ದೈವ ನರ್ತಕರಾದ ಗುಡ್ಡ ಪಾಣಾರ ಹಾಗೂ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಿದ ಎಂ.ಎ.ನಾಯಕ್ ಆಯ್ಕೆಯಾಗಿದ್ದು, ಇವರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾರವರು ಸಾಧಕರ ನಿವಾಸಕ್ಕೆ ತೆರಳಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಅಭಿನಂದಿಸಿದರು.