ನವೆಂಬರ್ 7 ರಿಂದ ಡಿಸೆಂಬರ್ 7 ರವರೆಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಜಿಲ್ಲೆಯಲ್ಲಿ ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ, 3 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವು ನವೆಂಬರ್ 7 ರಿಂದ ಡಿಸೆಂಬರ್ 7 ರ ಅವಧಿಯಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಈ ಕುರಿತು ಜಿಲ್ಲಾ ಮಟ್ಟದ ಕಾಲುಬಾಯಿ ರೋಗದ ನಿರ್ವಹಣಾ ಸಮಿತಿ ಸಭೆಯು ಬುಧವಾರದಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧ್ಯಕ್ಷತೆಯಲ್ಲಿ ನಡೆಯಿತು. ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕಟ್ಟೆಚ್ಚರ ವಹಿಸಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಪಶುಪಾಲನಾ ಇಲಾಖೆಯ ಉಪ […]

ಕಾಂತಾರ ಚಿತ್ರವನ್ನು ಹಿಂದಿಗೆ ರಿಮೇಕ್ ಮಾಡವುದು ಸಾಧ್ಯವಿಲ್ಲ: ರಿಷಭ್ ಶೆಟ್ಟಿ

ದಿನದಿಂದ ದಿನಕ್ಕೆ ಯಶಸ್ಸಿನ ಮೆಟ್ಟಿಲನ್ನು ಏರುತ್ತಾ ಹೊಸ ಮೈಲಿಗಲ್ಲನ್ನು ಸ್ಥಾಪಿಸುತ್ತಿರುವ ಕಾಂತಾರ ಚಿತ್ರವು ಚಿತ್ರರಂಗದ ಎಲ್ಲ ದಾಖಲೆಗಳನ್ನು ಪುಡಿಗಟ್ಟುತ್ತಿದೆ. ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ಚಿತ್ರದ ನಿರ್ದೇಶಕ ರಿಷಭ್ ಶೆಟ್ಟಿ ಕಾಂತಾರದ ಯಶಸ್ಸಿನ ಬಗ್ಗೆ ಮಾತನಾಡಿದ್ದಾರೆ. ಇದು ತಾನಾಗಿಯೆ ಸಂಭವಿಸಿತು. ಸಿನಿಮಾಗೆ ಒಂದು ನಿರ್ದಿಷ್ಟ ಶಕ್ತಿಯಿದೆ ಮತ್ತು ಚಿತ್ರದಲ್ಲಿ ನಮ್ಮ ಸಂಸ್ಕೃತಿ ಮತ್ತು ಜನಪದದ ಬಗ್ಗೆ ಮಾತನಾಡಿದ್ದೇವೆ. ಹಾಗಾಗಿ, ದೇವರ ಆಶೀರ್ವಾದದಿಂದ ಚಿತ್ರವು ಪ್ಯಾನ್-ಇಂಡಿಯಾದಲ್ಲಿ ಬಿಡುಗಡೆಯಾಗಿದೆ ಎಂದು ನಾನು ಭಾವಿಸುತ್ತೇನೆ. ಸಂಸ್ಕೃತಿ ಮತ್ತು ಜನಪದದ […]

ಬಿಜೆಪಿ ಜಿಲ್ಲಾ ಜನಸಂಕಲ್ಪ ಸಮಾವೇಶದ ಪೂರ್ವಸಿದ್ಧತಾ ಸಭೆ

ಉಡುಪಿ: ನ.5 ರಂದು ಬೆಳಿಗ್ಗೆ 10.00ಕ್ಕೆ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಜನಸಂಕಲ್ಪ ಸಮಾವೇಶವು‌ ನ.7ರಂದು ಬೆಳಿಗ್ಗೆ 10.30ಕ್ಕೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4.00ಕ್ಕೆ ತ್ರಾಸಿ‌ ಮುಳ್ಳಿಕಟ್ಟೆ ರಾ.ಹೆ. ಬಳಿ ನಡೆಯಲಿದೆ. ಈ ಎರಡೂ ಮಹತ್ವಪೂರ್ಣ ಕಾರ್ಯಕ್ರಮಗಳ ಬಗ್ಗೆ ಪೂರ್ವಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಸಂಘಟಿತ ಪ್ರಯತ್ನದ ಮೂಲಕ ನಿರೀಕ್ಷಿತ ಯಶಸ್ಸನ್ನು ಸಾಧಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]

ಸಿಬ್ಬಂದಿಗಳಿಗೆ ಉತ್ತಮ ಸೇವೆಗಾಗಿ ಗಾಂಧಿ ಆಸ್ಪತ್ರೆಗೆ ಇಪಿಎಫ್‌ಒ ಪ್ರಶಂಸಾ ಪ್ರಮಾಣ ಪತ್ರ

ಉಡುಪಿ: ಸಿಬ್ಬಂದಿಗಳಿಗೆ ಉತ್ತಮ ಸೇವೆಯನ್ನು ಒದಗಿಸಿದ ಕೊಡುಗೆಗಾಗಿ ಗಾಂಧಿ ಆಸ್ಪತ್ರೆಗೆ ಇಪಿಎಫ್‌ಒ ಪ್ರಶಂಸಾ ಪ್ರಮಾಣಪತ್ರವನ್ನು ನ.2 ರಂದು ಇಪಿಎಫ್‌ಒ ​​ನ 70 ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಯಿತು. ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವ್ಯಾಸರಾಜ ತಂತ್ರಿ ಎ. ಅವರು ಪ್ರಾದೇಶಿಕ ಪಿಎಫ್ ಆಯುಕ್ತ ಅಭಿಷೇಕ್ ರಂಜನ್ ಅವರಿಂದ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ ಉಪಸ್ಥಿತರಿದ್ದರು.

ನಾವುಂದ: ಫಿಟ್ ಇಂಡಿಯಾ ಫ್ರೀಡಂ ರನ್ ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮ

ನಾವುಂದ: ಅಕ್ಟೋಬರ್ 30ರಂದು ಭಂಡಾರ್ಕಾರ್ಸ್ ಕಾಲೇಜಿನ ಎನ್ ಎಸ್ ಎಸ್ ಘಟಕ, ಮಂಗಳೂರಿನ ಎನೆಪೋಯ ದಂತ ವಿಜ್ಞಾನ ಕಾಲೇಜಿನ ಎನ್ ಎಸ್ ಎಸ್ ಘಟಕ, ನಾವುಂದ ಗ್ರಾಮ ಪಂಚಾಯತ್ ಹಾಗೂ ಲಯನ್ಸ್ ಕ್ಲಬ್ ನಾವುಂದ ಇವರ ಸಹಯೋಗದಲ್ಲಿ ಫಿಟ್ ಇಂಡಿಯಾ ಫ್ರೀಡಂ ರನ್ 3.0 ಹಾಗೂ ಬೀಚ್ ಸ್ವಚ್ಛತಾ ಕಾರ್ಯಕ್ರಮವು ನಾವುಂದ ಗ್ರಾಮ ಪಂಚಾಯತ್ ಪರಿಸರದಲ್ಲಿ ನಡೆಯಿತು. ಸುಮಾರು 200ಕ್ಕೂ ಮಿಕ್ಕಿ ಎನ್ ಎಸ್ ಎಸ್ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೀಚ್ ಪರಿಸರವನ್ನು ಸ್ವಚ್ಚಗೊಳಿಸಿದರು. ಈ […]