ಆನ್‌ಲೈನ್ ಗೇಮ್ ಗಳನ್ನು ನಿಷೇಧಿಸುವ ಕಾನೂನು ಜಾರಿಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಆನ್‌ಲೈನ್ ಗೇಮಿಂಗ್ ಜನರ, ಅದರಲ್ಲೂ ವಿಶೇಷವಾಗಿ ಯುವಜನರ ಜೀವನವನ್ನು ಹಾಳುಮಾಡುತ್ತಿದೆ ಎಂದು ಆರೋಪಿಸಿ ಹಲವಾರು ರಾಜ್ಯಗಳು ಆನ್‌ಲೈನ್ ಗೇಮಿಂಗ್ ಅನ್ನು ನಿಷೇಧಿಸಲು ಕಾನೂನನ್ನು ಜಾರಿಗೊಳಿಸುವಂತೆ ಕೇಂದ್ರವನ್ನು ಒತ್ತಾಯಿಸಿದೆ. ಗುಜರಾತ್‌ನ ಏಕತಾನಗರದಲ್ಲಿ ನಡೆದ ಎರಡು ದಿನಗಳ ಕಾನೂನು ಸಚಿವರು ಮತ್ತು ಎಲ್ಲಾ ರಾಜ್ಯಗಳ ಕಾರ್ಯದರ್ಶಿಗಳ ಸಮ್ಮೇಳನದಲ್ಲಿ ಈ ಬೇಡಿಕೆಯನ್ನು ಸಲ್ಲಿಸಲಾಗಿದೆ. ಹಲವಾರು ಯುವಕರು ಬೆಟ್ಟಿಂಗ್ ಮತ್ತು ಪಂತದ ಆನ್‌ಲೈನ್ ಗೇಮಿಂಗ್ ನಲ್ಲಿ ಅಪಾರ ಪ್ರಮಾಣದ ಹಣ ಕಳೆದುಕೊಳ್ಳುತ್ತಿರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇಂತಹ ವ್ಯಸನಾಧಾರಿತ ಆಟಗಳನ್ನು ನಿಷೇಧಿಸಬೇಕೆಂದು ಕರ್ನಾಟಕ, […]

ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಕಿವಿ ಅಚ್ಚು ತಂತ್ರಜ್ಞ ಹುದ್ದೆ ಖಾಲಿ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕಿವಿ ಅಚ್ಚು ತಂತ್ರಜ್ಞ (ಇಯರ್ ಮೋಲ್ಡ್ ಟೆಕ್ನಿಷಿಯನ್) ರ ಹುದ್ದೆಗೆ ಗೌರವಧನ ಆಧಾರದಲ್ಲಿ ಕರ್ತವ್ಯ ನಿರ್ವಹಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸರ್ಟಿಫಿಕೇಟ್ ಕೋರ್ಸ್ ಇನ್ ಇಯರ್ ಮೊಲ್ಡ್ ಟೆಕ್ನಾಲಜಿ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ, ಜಿಲ್ಲಾ ಅಂಗವಿಕಲರ ಪುನರ್ವಸತಿ […]

ತೆಂಕಪೇಟೆ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಹಣತೆಗಳಿಂದಲಂಕೃತ ವಿಶ್ವರೂಪ ದರ್ಶನ

ಉಡುಪಿ: ತೆಂಕಪೇಟೆಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಇಂದು ಮುಂಜಾನೆ 5ಗಂಟೆಗೆ ಪಶ್ಚಿಮ ಜಾಗರ ಪೂಜೆ, ಸುಪ್ರಭಾತ, ಕಾಕಡ ಆರತಿ ಮತ್ತು ದೇವರ ಸನ್ನಿಧಿಯಲ್ಲಿ ಸಾವಿರಾರು ಹಣತೆಗಳ ದೀಪಗಳಿಂದ ಅಲಂಕೃತವಾದ ವಿಶ್ವ ರೂಪ ದರ್ಶನ ನೆರವೇರಿತು. ಈ ಬಾರಿಯ ವಿಶೇಷ ಆಕರ್ಷಣೆಯಾಗಿ ಶ್ರೀ ರಾಮ ದರ್ಶನ , ಶ್ರೀ ಮಹಾಲಕ್ಷ್ಮೀ, ಶಿವಲಿಂಗ ದರ್ಶನ, ಹರೇ ಶ್ರೀನಿವಾಸ, ರಂಗೋಲಿಯ ಚಿತ್ತಾರ, ಹೂಗಳಿಂದ ರಚಿಸಿದ ರಂಗೋಲಿ, ಹಣತೆಯ ದೀಪದಿಂದ ಓಂ , ಸ್ವಸ್ತಿಕ್, ಶಂಖ ಚಕ್ರ […]

ಶ್ರೀಕೃಷ್ಣಮಠದಲ್ಲಿ ಉತ್ಥಾನದ್ವಾದಶಿ ತುಳಸೀ ಪೂಜೆ

ಉಡುಪಿ: ಉತ್ಥಾನದ್ವಾದಶಿಯ ಪ್ರಯುಕ್ತ ಶ್ರೀಕೃಷ್ಣಮಠದಲ್ಲಿ ಪ್ರಾತ: ಕಾಲದಲ್ಲಿ ತುಳಸೀಪೂಜೆ ನೆರವೇರಿತು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು ತುಳಸೀ ಪೂಜೆ ಮತ್ತು ವ್ಯಾಸಪೂಜೆ ನೆರವೇರಿಸಿದರು.

ನ.7 ರಂದು ಶಿವಪಾಡಿ ಶ್ರೀಉಮಾಮಹೇಶ್ವರ ದೇವಸ್ಥಾನದಲ್ಲಿ ಅಮೃತಮಹೋತ್ಸವ ಭಜನಾ ಏಕಾಹ ಕಾರ್ಯಕ್ರಮ

ಮಣಿಪಾಲ: ಶಿವಪಾಡಿ ಶ್ರೀಉಮಾಮಹೇಶ್ವರ ದೇವಸ್ಥಾನ ಅಮೃತಮಹೋತ್ಸವ ಭಜನಾ ಏಕಾಹ ಕಾರ್ಯಕ್ರಮವು ನ.6 ರವಿವಾರ ಮತ್ತು ನ.7ಸೋಮವಾರದಂದು ನಡೆಯಲಿರುವುದು. ನ.6 ರಂದು ಮಧ್ಯಾಹ್ನ 12.00 ಗಂಟೆಗೆ ಮಹಾಪೂಜೆ, ದೀಪಪ್ರಜ್ವಲನೆ, ಭಜನಾ ಪ್ರಾರಂಭ ಮತ್ತು ದೀಪ ಸ್ಥಾಪನೆ ನಡೆಯಲಿದ್ದು, ನ.7 ರಂದು ಮಧ್ಯಾಹ್ನ 12.00 ಗಂಟೆಗೆ ಸಭಾ ಕಾರ್ಯಕ್ರಮವಿದ್ದು, ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯವರಿಂದ ಆಶೀರ್ವಚನ ಮತ್ತು ಭಜನಾ ಏಕಾಹದಲ್ಲಿ ಭಾಗವಹಿಸಿದ ಭಜನಾ ಮಂಡಳಿಗಳಿಗೆ ಗೌರವಾರ್ಪಣೆ ನಡೆಯಲಿರುವುದು.   ಸಭಾ ಕಾರ್ಯಕ್ರಮದ ಬಳಿಕ ಅನ್ನಪ್ರಸಾದ ವಿತರಣೆ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ […]