ತಂಬಾಕು ಮುಕ್ತ ಅಪಾರ್ಟ್ಮೆಂಟ್: ರಿಯಲ್ ಎಸ್ಟೇಟ್ ಡೆವಲಪ್‌ಮೆಂಟ್ ಒಕ್ಕೂಟದ ಸದಸ್ಯರೊಂದಿಗೆ ಸಭೆ

ಉಡುಪಿ: ಜಿಲ್ಲೆಯಲ್ಲಿ ತಂಬಾಕು ಮುಕ್ತ ಅಪಾರ್ಟ್ಮೆಂಟ್ ಯೋಜನೆಯ ಅನುಷ್ಠಾನದ ಮುಂದುವರೆದ ಭಾಗವಾಗಿ ಜಿಲ್ಲೆಯ ಸಿ.ಆರ್.ಇ.ಡಿ.ಎ.ಐ. (ರಿಯಲ್ ಎಸ್ಟೇಟ್ ಡೆವಲಪ್‌ಮೆಂಟ್ ಅಸೋಸಿಯೇಷನ್ ಒಕ್ಕೂಟ) ಸದಸ್ಯರುಗಳಿಗೆ ಶುಕ್ರವಾರ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಯಿತು. ರಾಜ್ಯ ತಂಬಾಕು ನಿಯಂತ್ರಣ ಕೋಶದ ಯೋಜನಾ ವ್ಯವಸ್ಥಾಪಕ ಪ್ರಭಾಕರ ಸಭೆಯಲ್ಲಿ ಮಾತನಾಡಿ, ಜಿಲ್ಲೆಯ ಎಲ್ಲಾ ವಸತಿ ಸಮುಚ್ಛಯದಲ್ಲಿರುವವರಿಗೆ ಪೈಲಟ್ ಸಮೀಕ್ಷೆಯನ್ನು ನಡೆಸಿ, ಜನಾಭಿಪ್ರಾಯ ಪಡೆಯಲು ಆರೋಗ್ಯ ಇಲಾಖೆಯು ಕಾರ್ಯಪ್ರವೃತ್ತವಾಗಲಿದೆ ಎಂದರು. ನೂತನವಾಗಿ ನಿರ್ಮಿಸಲಾಗುವ ಅಪಾರ್ಟ್ಮೆಂಟ್‌ಗಳನ್ನು ತಂಬಾಕು ಮುಕ್ತ ವಲಯಗಳನ್ನಾಗಿ […]

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್: ಮುಕುಂದ ಕೃಪಾ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಅಚಲಾಗೆ ಚಿನ್ನದ ಪದಕ

ಉಡುಪಿ: ಭಾನುವಾರದಂದು ಕುರ್ಕಾಲ್‌ನಲ್ಲಿ ಕೆನ್ – ಈ – ಮಾಬುನಿ – ಶೀಟೋ – ರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ ಉಡುಪಿ ಜಿಲ್ಲೆ ಇದರ ವತಿಯಿಂದ ನಡೆದ ಪ್ರಥಮ ಆಹ್ವಾನಿತ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್: ಕಾಂಪೀಟ್-3.0ನಲ್ಲಿ ಮುಕುಂದಾ ಕೃಪಾ ಆಂಗ್ಲ ಮಾಧ್ಯಮ ಶಾಲೆಯ 7 ನೇ ತರಗತಿಯ ವಿದ್ಯಾರ್ಥಿನಿ ಅಚಲಾ ಕುಮಿಟೆಯಲ್ಲಿ ಮೊದಲನೆ ಸ್ಥಾನ ಪಡೆದು ಚಿನ್ನದ ಪದಕ ಮತ್ತು ಕಟಾ ದಲ್ಲಿ ಎರಡನೇ ಸ್ಥಾನ ಪಡೆದು ಬೆಳ್ಳಿ ಪದಕ ಗೆದ್ದಿದ್ದಾರೆ ಮತ್ತು ಕುಮಿಟೆಯಲ್ಲಿ 7 […]

ನವೆಂಬರ್ 19 ರಂದು ಪುರಭವನದಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವು ನವೆಂಬರ್ 19 ರಂದು ನಗರದ ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಜಾನಪದ ನೃತ್ಯ ಹಾಗೂ ಜಾನಪದ ಹಾಡು (ಗುಂಪು ಸ್ಪರ್ಧೆ), ಏಕಾಂಕ ನಾಟಕ (ಹಿಂದಿ, ಇಂಗ್ಲೀಷ್, ಕನ್ನಡ- ವೈಯಕ್ತಿಕ ಸ್ಪರ್ಧೆ), ಶಾಸ್ತ್ರೀಯ ಗಾಯನಗಳಾದ ಹಿಂದೂಸ್ಥಾನಿ ಸಂಗೀತ ಹಾಗೂ ಕರ್ನಾಟಕ ಸಂಗೀತ, ಶಾಸ್ತ್ರೀಯ ವಾದ್ಯಗಳಾದ ತಬಲಾ, ಸಿತಾರ್, ಕೊಳಲು, ವೀಣೆ ಹಾಗೂ ಮೃದಂಗ, ಹಾರ್ಮೋನಿಯಂ, ಗಿಟಾರ್, ಶಾಸ್ತ್ರೀಯ ನೃತ್ಯಗಳಾದ ಭರತನಾಟ್ಯ, ಒಡಿಸ್ಸಿ, ಮಣಿಪುರಿ, […]

ನಗರಸಭೆ ಅಧಿಕಾರಿಗಳಿಂದ ಕಾರ್ಯಾಚರಣೆ: 45 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ವಶ; ತಪ್ಪಿತಸ್ಥರಿಗೆ ದಂಡ

ಉಡುಪಿ: ಅ.5 ರಂದು ಉಡುಪಿ ನಗರಸಭೆ ಅಧಿಕಾರಿಗಳು ನಗರದಲ್ಲಿ ಧಿಢೀರ್ ಕಾರ್ಯಾಚರಣೆ ನಡೆಸಿದ್ದು, ಅಂಗಡಿಗಳಲ್ಲಿ ಕಾನೂನು ಬಾಹಿರವಾಗಿ ಬಳಕೆ ಮಾಡಲಾಗುತ್ತಿದ್ದ ಸುಮಾರು 45 ಕೆ.ಜಿ ಯಷ್ಟು ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡಿದ್ದು,10,200 ರೂಪಾಯಿಗಳ ದಂಡವನ್ನು ವಿಧಿಸಿದ್ದಾರೆ. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸದಂತೆ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ಅಂಗಡಿ ಮಾಲೀಕರುಗಳು, ಇ-ಕಾಮರ್ಸ್ ಕಂಪೆನಿಗಳು, ಬೀದಿ ವ್ಯಾಪಾರಿಗಳು, ವಾಣಿಜ್ಯ ಸಂಸ್ಥೆಗಳು (ಮಾಲ್‌ಗಳು, ಮಾರುಕಟ್ಟೆ ಸ್ಥಳ), ಶಾಪಿಂಗ್ ಕೇಂದ್ರಗಳು, ಸಿನಿಮಾ ಮಾಲ್‌ಗಳು, ಮನೆಗಳು, ಪ್ರವಾಸೋದ್ಯಮ ಸ್ಥಳಗಳು, […]

ಹೀರೋ ಶಕ್ತಿ ಮೋಟರ್ಸ್ ನ ಕರಾವಳಿ ಕರ್ನಾಟಕದ ಪ್ರಥಮ ಅಧಿಕೃತ ಮತ್ತು ಸಂಪೂರ್ಣ ಡಿಜಿಟಲೀಕೃತ ಶೋರೂಂ ಉದ್ಘಾಟನೆ

ಉಡುಪಿ: ಭಾರತದ 5ನೇ ಮತ್ತು ಕರಾವಳಿ ಕರ್ನಾಟಕದ ಪ್ರಥಮ ಹೀರೋ ಶಕ್ತಿ ಮೋಟರ್ ನ ಅಧಿಕೃತ ಶೋರೂಂ ಭಾನುವಾರದಂದು ಕರಾವಳಿ ಜಂಕ್ಷನ್ ಬಳಿಯಿರುವ ಶ್ರೀ ರಾಮದರ್ಶನ ಕಟ್ಟಡದಲ್ಲಿ ಉದ್ಘಾಟನೆಗೊಂಡಿತು. ಶಾಸಕ ರಘುಪತಿ ಭಟ್ ಶೋರೂಂ ಅನ್ನು ಉದ್ಘಾಟಿಸಿ ಮಾತನಾಡಿ, ಉಡುಪಿ ಬೆಳೆಯುತ್ತಿರುವ ನಗರ. ಇಂತಹ ಬೆಳೆಯುತ್ತಿರುವ ನಗರದ ಹೃದಯ ಭಾಗದಲ್ಲಿ ಹೀರೋ ಸಂಸ್ಥೆಯವರು ತಮ್ಮ ವಿಶೇಷ ಶೋರೂಂ ಅನ್ನು ಸ್ಥಾಪಿಸಿರುವುದು ನಗರಕ್ಕೆ ಇನ್ನೂ ಹೆಚ್ಚಿನ ಶೋಭೆ ತಂದಿದೆ. ಉಡುಪಿ ಜನತೆಯ ಮೇಲೆ ವಿಶ್ವಾಸವಿರಿಸಿದ್ದಕ್ಕೆ ಸಂಸ್ಥೆಗೆ ಕೃತಜ್ಞತೆ ಸಲ್ಲಿಸುತ್ತೇನೆ […]