ಕವಿತೆ ತಾನಾಗಿ ಹುಟ್ಟಿ ಹರಿಯಬೇಕು: ಎಸ್.ಕೆ ಕುಂಪಲ

ಉಳ್ಳಾಲ: ಕವಿತೆ ತಾನಾಗಿ ಹುಟ್ಟಿ ಹರಿಯಬೇಕು, ಇದು ಅವರವರ ಭಾವಕ್ಕೆ ಸಂಬಂಧಿಸಿದ್ದಾಗಿದೆ. ಬೆಳಕು ಭಗವಂತನ ಪ್ರತಿ ರೂಪ. ಉರಿದು ಬೆಳಕು ಕೊಡುವ ಜ್ಯೋತಿ ಬೆಂಕಿಯೂ ಆಗ ಬಲ್ಲುದು ಎಂದು ಹಿರಿಯ ಕವಿ ಎಸ್.ಕೆ. ಕುಂಪಲ ಉಳ್ಳಾಲ ತಾ. ಚು. ಸಾ. ಪರಿಷತ್ತು ದೀಪಾವಳಿಯ ಪ್ರಯುಕ್ತ ಆಯೋಜಿಸಿದ್ದ, ‘ಕಾವ್ಯ ದೀಪೋತ್ಸವ’ ಕಾರ್ಯಕ್ರಮದ ಅಂಗವಾಗಿ ನಡೆದ ಕವಿ ಗೋಷ್ಠಿಯ ಅಧ್ಯಕ್ಷ ಭಾಷಣದಲ್ಲಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಈ ವಿಶಿಷ್ಟ ಸರಳ ಕಾರ್ಯಕ್ರಮವು ಅ 21 ರಂದು ಸಂಜೆ […]
ತೋಟಗಾರಿಕಾ ಆಸಕ್ತರ ಗಮನ ಸೆಳೆಯುತ್ತಿದೆ ರಂಗುಬಿರಂಗಿ ಹೂಗಿಡಗಳ ಸಸ್ಯಸಂತೆ

ಉಡುಪಿ: ಉಡುಪಿ ದೊಡ್ಡಣಗುಡ್ಡೆಯ ತೋಟಗಾರಿಕಾ ಇಲಾಖೆ ಆವರಣದಲ್ಲಿ ನ.5 ರಿಂದ 7 ರ ವರೆಗೆ ನಡೆಯುವ ಸಸ್ಯಸಂತೆ ಕಾರ್ಯಕ್ರಮದಲ್ಲಿ 40 ಕ್ಕೂ ಅಧಿಕ ಜಾತಿಯ ಅಲಂಕಾರಿಕಾ ಸಸ್ಯಗಳು, 15 ಕ್ಕೂ ಅಧಿಕ ಜಾತಿಯ ಹಣ್ಣಿನ ಸಸ್ಯಗಳು, ತೆಂಗು, ಕಾಳು ಮೆಣಸಿನ ಸಸಿಗಳು, 50 ಕ್ಕೂ ಹೆಚ್ಚು ತರಕಾರಿ ಮತ್ತು ಹಣ್ಣಿನ ಬೀಜಗಳ ಮಾರಾಟ ಕೃಷಿ ಮತ್ತು ತೋಟಗಾರಿಕಾ ಆಸಕ್ತರನ್ನು ಗಮನ ಸೆಳೆಯುತ್ತಿದೆ. ತೋಟಗಾರಿಕಾ ಇಲಾಖೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿರುವ ಖಾಸಗಿ ಮತ್ತು ಸರ್ಕಾರಿ ನರ್ಸರಿಗಳಲ್ಲಿ ಬೆಳೆಸಿರುವ […]
ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಮೃತ್ತಿಕೆ ಸಂಗ್ರಹಿಸುವ ಅಭಿಯಾನಕ್ಕೆ ಸಚಿವ ಅಂಗಾರ ಚಾಲನೆ

ಉಡುಪಿ: ಶನಿವಾರದಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜಧಾನಿಯಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸುವ ಪೂರ್ವಭಾವಿಯಾಗಿ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹಿಸುವ ಅಭಿಯಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಚಾಲನೆ ನೀಡಿ, ಕೆಂಪೇಗೌಡರ ರಥಕ್ಕೆ ಆರತಿ ಬೆಳಗಿ, ಹಸಿರು ನಿಶಾನೆ ತೋರಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇತಿಹಾಸವನ್ನು ತಿಳಿದುಕೊಳ್ಳದೇ ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ. ಇತಿಹಾಸದಲ್ಲಿ ಹಿರಿಯರ ತ್ಯಾಗ ಬಲಿದಾನದಿಂದ ಸಿಕ್ಕಿರುವ ಸ್ವಾತಂತ್ರ್ಯವನ್ನು ನಾವು ಸದುಪಯೋಗ ಪಡಿಸಿಕೊಳ್ಳಬೇಕು. ಬೆಂಗಳೂರಿನ ಸಮಗ್ರ ಬೆಳವಣಿಗೆಗೆ ಬಹಳ […]
ಸಾಲಿಗ್ರಾಮ: ಉಚಿತ ದಂತ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ಸಂಪನ್ನ

ಸಾಲಿಗ್ರಾಮ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಉಡುಪಿ, ರೋಟರಿ ಕ್ಲಬ್ ಕೋಟ, ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್, ಪಬ್ಲಿಕ್ ಹೆಲ್ತ್ ವಿಭಾಗ ಮಣಿಪಾಲ, ಪ್ರಾಥಮಿಕ ಆರೋಗ್ಯ ಕೇಂದ್ರ ಸಾಲಿಗ್ರಾಮ ಇವರ ಸಹಯೋಗದೊಂದಿಗೆ ಶುಕ್ರವಾರ ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ ಬಾಯಿಯ ಆರೋಗ್ಯ ಕಾರ್ಯಕ್ರಮದಡಿ ಉಚಿತ ದಂತ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ ನಡೆಯಿತು. ಮಣಿಪಾಲ ದಂತ ವಿಭಾಗದ ಮುಖ್ಯಸ್ಥ […]
ಶ್ರೀಕೃಷ್ಣಮಠದಲ್ಲಿ ತೆಪ್ಪೋತ್ಸವ ಸಹಿತ ಲಕ್ಷದೀಪೋತ್ಸವ ಕಾರ್ಯಕ್ರಮ

ಉಡುಪಿ: ಶ್ರೀಕೃಷ್ಣಮಠದಲ್ಲಿ ತೆಪ್ಪೋತ್ಸವ ಸಹಿತ ಲಕ್ಷದೀಪೋತ್ಸವ ನೆರವೇರಿತು. ಅಷ್ಟಮಠಾಧೀಶರು ಲಕ್ಷದೀಪೋತ್ಸವದ ಪ್ರಯುಕ್ತ ಅಟ್ಟಣಿಗೆಗಳಲ್ಲಿ ತಿಪಿಲೆಗಳನ್ನು ಜೋಡಿಸಿದರು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರು,ಪಲಿಮಾರು ಮಠಾಧೀಶರಾದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು,ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀವಿದ್ಯಾವಲ್ಲಭತೀರ್ಥ ಪಾದರು, ಅದಮಾರು ಕಿರಿಯ ಮಠಾಧೀಶರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಹಾಗೂ ಪಲಿಮಾರು ಕಿರಿಯ ಮಠಾಧೀಶರಾದ ಶ್ರೀವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಕ್ಷೀರಾಬ್ದಿ ಪೂಜೆ ನೆರವೇರಿಸಿ ಲಕ್ಷದೀಪೋತ್ಸವದಲ್ಲಿ ಭಾಗವಹಿಸಿದರು. ಕುಮಾರಿ ಹರಿಣೀ ಚೆನ್ನೈ ಇವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.