ನ್ಯುಮೋನಿಯಾದಿಂದುಂಟಾಗುವ ಮಕ್ಕಳ ಸಾವಿನ ಪ್ರಕರಣಗಳನ್ನು ಶೂನ್ಯಕ್ಕೆ ತರಲು ಜಿಲ್ಲಾಧಿಕಾರಿ ಕರೆ
ಉಡುಪಿ: ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳು ನ್ಯುಮೋನಿಯಾ ಕಾರಣದಿಂದ ಮರಣ ಹೊಂದದಂತೆ ಎಲ್ಲ ವೈದ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮುಂಜಾಗ್ರತೆ ವಹಿಸಬೇಕು. ಮಕ್ಕಳಲ್ಲಿನ ಈ ಸಮಸ್ಯೆಯನ್ನು ಬೇಗನೆ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಬೇಕು ಮತ್ತು ಪೋಷಕರಿಗೆ ಈ ರೋಗದ ಬಗ್ಗೆ ಜಾಗೃತಿ ಮೂಡಿಸಬೇಕು. ನ್ಯುಮೋನಿಯಾದಿಂದ ಆಗುವ ಮಕ್ಕಳ ಸಾವಿನ ಪ್ರಕರಣಗಳನ್ನು ಶೂನ್ಯಕ್ಕೆ ತರಲು ಎಲ್ಲರೂ ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕರೆ ನೀಡಿದರು. ಅವರು ಇಂದು ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ […]
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮತ್ತೆ ಯೆಲ್ಲೋ ಅಲರ್ಟ್
ಮಂಗಳೂರು/ಉಡುಪಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ನವೆಂಬರ್ 12 ಮತ್ತು 13 ರಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ನವೆಂಬರ್ 14 ರಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಮುನ್ನೆಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ ಮೂರು ದಿನಗಳಲ್ಲಿ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಆಗಲಿದ್ದು, ಒಟ್ಟು 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ […]
ಬಸ್ ಮತ್ತು ಗೂಡ್ಸ್ ಟೆಂಪೊ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ
ಉಡುಪಿ: ಇಲ್ಲಿನ ಶಿರಿಬೀಡಿನಲ್ಲಿ ಬಸ್ ಮತ್ತು ಗೂಡ್ಸ್ ಟೆಂಪೊ ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರದಂದು ನಡೆದಿದೆ. ಕರಾವಳಿ ಬೈಪಾಸ್ ಕಡೆಯಿಂದ ಮಣಿಪಾಲ ಕಡೆ ಹೋಗುತ್ತಿದ್ದ ಖಾಸಗಿ ಬಸ್ ಒಂದು ಶಿರಿಬೀಡು ಜಂಕ್ಷನ್ ಸಮೀಪ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಗೂಡ್ಸ್ ಟೆಂಪೋ ರಿಕ್ಷಾ ಬಸ್ಸಿಗೆ ಢಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಅಪಘಾತದಿಂದ ಗೂಡ್ಸ್ ರಿಕ್ಷಾ ಚಾಲಕ ಹಾಗೂ ಸಹಸವಾರನಿಗೆ ತೀವ್ರ ಗಾಯಗಳಾಗಿದ್ದು ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. […]
ಶಿವಪಾಡಿ: ನವೆಂಬರ್ 14-15 ರಂದು ಬಿಜೆಪಿ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ
ಶಿವಪಾಡಿ : ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಎರಡು ದಿನಗಳ ಪ್ರಶಿಕ್ಷಣ ವರ್ಗವು ನವೆಂಬರ್ 14 ಮತ್ತು15 ರಂದು ಮಣಿಪಾಲದ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾ ಭವನದಲ್ಲಿ ಜರಗಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. ನವೆಂಬರ್ 14 ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ […]
ಬಂಟ್ವಾಳ: ನದಿಯಲ್ಲಿ ಈಜಲೆಂದು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು
ಬಂಟ್ವಾಳ: ತಾಲೂಕಿನ ಬಿ.ಸಿ.ರೋಡ್ ಸಮೀಪದ ಬ್ರಹ್ಮರಕೂಟ್ಲು ಎಂಬಲ್ಲಿ ಶುಕ್ರವಾರ ಸಂಜೆ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಬಿ.ಸಿ.ರೋಡ್ ಕೈಕಂಬ ಪರ್ಲ್ಯ ಮದ್ದ ನಿವಾಸಿ ಜುನೈದ್ ಎಂಬವರ ಪುತ್ರ ಸಲ್ಮಾನ್ (15) ಮೃತಪಟ್ಟ ಬಾಲಕ. ಶುಕ್ರವಾರ ಶಾಲೆಗೆ ರಜೆ ಇದ್ದ ಕಾರಣ ನಾಲ್ಕು ಮಂದಿ ಗೆಳೆಯರು ಸಾಯಂಕಾಲ ಬ್ರಹ್ಮರಕೂಟ್ಲು ಬಂಟರ ಭವನದ ಬಳಿ ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ್ದರು. ಈಜುತ್ತಿದ್ದ ವೇಳೆ ಸಲ್ಮಾನ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮೃತ […]