ಮಂಗಳೂರು: ಸಂಚಾರಿ ನಿಯಮ ಉಲ್ಲಂಘನೆ; ಅಂಚೆ ಕಚೇರಿಯಲ್ಲಿ ದಂಡ ಪಾವತಿಸುವ ಸೌಲಭ್ಯ

ಮಂಗಳೂರು: ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾದ ಸಂಚಾರ ದಂಡವನ್ನು ಕರ್ನಾಟಕದಾದ್ಯಂತ ಅಂಚೆ ಕಚೇರಿಗಳಲ್ಲಿ ಪಾವತಿಸಲು ಅನುಕೂಲವಾಗುವಂತೆ ಮಂಗಳೂರು ನಗರ ಪೊಲೀಸ್ ಮತ್ತು ಅಂಚೆ ಇಲಾಖೆ ಒಪ್ಪಂದ ಮಾಡಿಕೊಂಡಿವೆ. ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮತ್ತು ಮಂಗಳೂರು ಅಂಚೆ ವಿಭಾಗದ ಅಂಚೆ ಕಛೇರಿಗಳ ಹಿರಿಯ ಅಧೀಕ್ಷಕ ಎನ್.ಶ್ರೀಹರ್ಷ ಒಪ್ಪಂದಕ್ಕೆ ಸಹಿ ಹಾಕಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಶಿಕುಮಾರ್, ಇಲಾಖೆಯು ಅಂದಾಜು 1 ಕೋಟಿ ರೂ ವೆಚ್ಚದಲ್ಲಿ ಕಮಿಷನರೇಟ್‌ನಾದ್ಯಂತ ಸುಮಾರು ನೂರು ಕ್ಲೋಸ್ಡ್ ಸರ್ಕ್ಯೂಟ್ ಕ್ಯಾಮೆರಾಗಳನ್ನು ಅಳವಡಿಸುತ್ತಿದೆ. ಇದು ಹೆಚ್ಚಿನ ಸಂಚಾರ ನಿಯಮಗಳ […]

ಸ್ವಾತಂತ್ರ್ಯವೀರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಕುರಿತು ಪೂರ್ವಾಭಾವಿ ಸಭೆ

ಮಂಗಳೂರು: ಇಲ್ಲಿನ ಬಾವುಟ ಗುಡ್ಡೆಯಲ್ಲಿ ನಿರ್ಮಾಣವಾಗಿರುವ ಸ್ವಾತಂತ್ರ್ಯ ಸಮರವೀರ, ಸಂಘಟನಾ ಚತುರ ಕೆದಂಬಾಡಿ ರಾಮಯ್ಯ ಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಕುರಿತು ಮಂಗಳವಾರದಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಪ್ರಮುಖರೊಂದಿಗೆ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಬಗ್ಗೆ ಸಚಿವ ಸುನಿಲ್ ಕುಮಾರ್ ಟ್ವೀಟ್ ಮಾಡಿ ತಿಳಿಸಿದ್ದಾರೆ. ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು. ತುಳುನಾಡಿನ ಪ್ರಥಮ […]

ನವೆಂಬರ್ 19 ರಂದು ಇರ್ವತ್ತೂರಿನಲ್ಲಿ ಕಾರ್ಕಳ ತಹಶೀಲ್ದಾರ್ ಗ್ರಾಮವಾಸ್ತವ್ಯ

ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಕಾರ್ಕಳ ತಾಲೂಕು ತಹಶೀಲ್ದಾರರು ನವೆಂಬರ್ 19 ರಂದು ಇರ್ವತ್ತೂರು ಗ್ರಾಮದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮವಾಸ್ತವ್ಯ ನಡೆಸಲಿದ್ದು, ಇರ್ವತ್ತೂರು ಗ್ರಾಮದ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕಾರ್ಕಳ ತಹಶೀಲ್ದಾರರ ಪ್ರಕಟಣೆ ತಿಳಿಸಿದೆ.

ಡಾ. ಜಿ. ಶಂಕರ್ ಸರಕಾರಿ ಮಹಿಳಾ ಕಾಲೇಜಿನಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ

ಉಡುಪಿ: ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತರ ಅಧ್ಯಯನ ಕೇಂದ್ರ ಇಲ್ಲಿನ ಐಕ್ಯೂಏಸಿ , ಕನ್ನಡ ವಿಭಾಗ, ಗ್ರಂಥಾಲಯ ಮತ್ತು ಉಡುಪಿ ಮಾಹಿತಿ ಕೇಂದ್ರ ಜಂಟಿ ಸಹಯೋಗದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ – 2022ರ ಉದ್ಘಾಟನಾ ಕಾರ್ಯಕ್ರಮ, ಪುಸ್ತಕ ಪ್ರದರ್ಶನ ಮತ್ತು ರಾಜಾರಾಮ್ ಮೋಹನ್ ರಾಯ್ ರವರ 250 ನೇ ಜನ್ಮದಿನೋತ್ಸವ ಪ್ರಯುಕ್ತ ‘ಮಹಿಳಾ ಸಬಲೀಕರಣ’ ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ಸೋಮವಾರದಂದು ನಡೆಯಿತು. ಜಿಲ್ಲಾ ಶಿಕ್ಷಣ ಮತ್ತು […]

ನಟ ಮಹೇಶ್ ಬಾಬ್ ಗೆ ಪಿತೃವಿಯೋಗ: ಒಂದೇ ವರ್ಷದಲ್ಲಿ ಕುಟುಂಬದ ಮೂವರ ಅಗಲಿಕೆ

ಹೈದರಾಬಾದ್: ತೆಲುಗು ಚಿತ್ರರಂಗದಲ್ಲಿ ‘ಸೂಪರ್‌ಸ್ಟಾರ್’ ಎಂದೇ ಪರಿಚಿತರಾಗಿದ್ದ ಹಿರಿಯ ನಟ ಕೃಷ್ಣ ಅವರು ಆಸ್ಪತ್ರೆಗೆ ದಾಖಲಾದ ಒಂದು ದಿನದ ಬಳಿಕ ಮಂಗಳವಾರ ಹೈದರಾಬಾದ್‌ನಲ್ಲಿ ನಿಧನರಾಗಿದ್ದಾರೆ. ಕೃಷ್ಣ ಜನಪ್ರಿಯ ನಟ ಮಹೇಶ್ ಬಾಬು ಅವರ ತಂದೆ. ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಿಧನರಾಗಿದ್ದರು ಮತ್ತು ಅದಕ್ಕೂ ಮುನ್ನ ಅವರ ಹಿರಿಯ ಸಹೋದರ ರಮೇಶ್ ಬಾಬು ಜನವರಿಯಲ್ಲಿ ನಿಧನರಾಗಿದ್ದಾರೆ. ಒಂದೇ ವರ್ಷದಲ್ಲಿ ಕುಟುಂಬದ ಮೂವರನ್ನು ಮಹೇಶ್ ಕಳೆದುಕೊಂಡಿದ್ದಾರೆ. ಘಟ್ಟನಾನೇನಿ ಶಿವರಾಮ ಕೃಷ್ಣ ಮೂರ್ತಿ […]